ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
1 ಪೂರ್ವಕಾಲವೃತ್ತಾ
1. {#1ದಾವೀದನು ಮಾಡಿಸಿದ ಜನಗಣತಿ } [PS]ಸೈತಾನನು ಇಸ್ರಾಯೇಲರಿಗೆ ವಿರುದ್ಧ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.
2. ದಾವೀದನು ಯೋವಾಬನನ್ನೂ ಮತ್ತು ಜನಾಧಿಪತಿಗಳನ್ನೂ ಕರೆದು, “ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ, ಇಸ್ರಾಯೇಲರನ್ನು ಲೆಕ್ಕ ಮಾಡಿಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು.
3. ಆಗ ಯೋವಾಬನು, “ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದ್ದನ್ನು ಅಪೇಕ್ಷಿಸುವುದೇನು? ಇಸ್ರಾಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ” ಎಂದನು.
4. ಆದರೆ ಅರಸನು ಯೋವಾಬನಿಗೆ ಕಿವಿಗೊಡದೆ ತನ್ನ ಮಾತನ್ನೇ ನಡೆಸಿದ್ದರಿಂದ ಅವನು ಹೊರಟುಹೋಗಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿದನು.
5. ಯೋವಾಬನು ದಾವೀದನಿಗೆ ಒಪ್ಪಿಸಿದ ಜನಗಣತಿಯ ಸಂಖ್ಯೆಯು ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ ಮತ್ತು ಯೆಹೂದ್ಯರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ.
6. ಅರಸನ ಅಪ್ಪಣೆಯು ಯೋವಾಬನಿಗೆ ಅಸಹ್ಯವಾಗಿದ್ದುದರಿಂದ ಅವನು ಲೇವಿ ಮತ್ತು ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ. [PE]
7. {#1ದಾವೀದನ ಪಾಪಕ್ಕೆ ಶಿಕ್ಷೆ } [PS]ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದೆಂದು ಕಂಡದ್ದರಿಂದ ಆತನು ಇಸ್ರಾಯೇಲರನ್ನು ಬಾಧಿಸಿದನು.
8. ಆಗ ದಾವೀದನು, “ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾಗಿದ್ದೇನೆ. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ದೇವರನ್ನು ಪ್ರಾರ್ಥಿಸಿದನು.
9. ಯೆಹೋವನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನೆಂದರೆ,
10. ಯೆಹೋವನು ಇಂತೆನ್ನುತ್ತಾನೆ, “ನಾನು ಮೂರು ವಿಧವಾದ ಶಿಕ್ಷೆಯನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂಬುದಾಗಿ ದಾವೀದನಿಗೆ ಹೇಳು” ಎಂದನು.
11. ಆಗ ಗಾದನು ದಾವೀದನ ಬಳಿಗೆ ಹೋಗಿ ಅವನಿಗೆ, “ಯೆಹೋವನು ಹೇಳುವುದೇನೆಂದರೆ,
12. ‘ಮೂರು ವರ್ಷಗಳ ವರೆಗೆ ಬರಗಾಲ ಉಂಟಾಗಬೇಕೋ, ಇಲ್ಲವೆ ನೀನು ಮೂರು ತಿಂಗಳು ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ, ಇಲ್ಲವೆ ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರದೂತನಿಂದ ಉಂಟಾಗುವ ಮೂರು ದಿನಗಳ ಘೋರವ್ಯಾಧಿಯ ರೂಪವಾದ ಯೆಹೋವನ ಶಿಕ್ಷೆ ಬೇಕೋ, ಈ ಮೂರರಲ್ಲಿ ಒಂದನ್ನು ಆರಿಸಿಕೊ’ ಎಂಬುದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು ಆಲೋಚಿಸಿ ಹೇಳು” ಎಂದು ಹೇಳಿದನು.
13. ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಮನುಷ್ಯರ ಕೈಯಲ್ಲಿ ಬೀಳುವುದಕ್ಕಿಂತ ಯೆಹೋವನ ಹಸ್ತದಲ್ಲಿ ಬೀಳುವುದು ಮೇಲು. ಆತನು ಕೃಪಾಪೂರ್ಣನು” ಎಂದು ಹೇಳಿದನು. [PE]
14. [PS]ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
15. ದೇವರು ಯೆರೂಸಲೇಮನ್ನು ನಾಶಪಡಿಸುವುದಕ್ಕೆ ದೂತರನ್ನು ಕಳುಹಿಸಿದನು. ಆದರೆ ಆ ದೂತನು ನಾಶಪಡಿಸುವುದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರ ದೂತನಿಗೆ, “ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.
16. ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ, ಚಾಚಿದ ಕೈಯಲ್ಲಿ ಯೆರೂಸಲೇಮಿಗೆ ವಿರುದ್ಧವಾಗಿ ಹಿರಿದ ಕತ್ತಿಯಿರುವುದನ್ನೂ ಕಂಡಾಗ ಅವನೂ, ಹಿರಿಯರೂ ಗೋಣಿತಟ್ಟನ್ನು ಹೊದ್ದುಕೊಂಡು ಬೋರಲು ಬಿದ್ದರು.
17. ಮತ್ತು ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ. ಮಹಾಪಾಪಮಾಡಿದವನು ನಾನೇ. ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವುದಕ್ಕೆ ಅವರಿಗೆ ವಿರುದ್ಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರುದ್ಧವಾಗಿರಲಿ” ಎಂದು ಬೇಡಿಕೊಂಡನು. [PE]
18. {#1ದಾವೀದನು ಯಜ್ಞವೇದಿಯನ್ನು ಕಟ್ಟಿಸಿದ್ದು } [PS]ಆಗ ಯೆಹೋವನ ದೂತನು ಗಾದನಿಗೆ, “ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುವುದಕ್ಕೆ ಹೋಗಬೇಕು ಎಂದು ದಾವೀದನಿಗೆ ಹೇಳು” ಎಂದು ಆಜ್ಞಾಪಿಸಿದನು.
19. ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು.
20. ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ತಿರುಗಿಕೊಂಡು ದೂತನನ್ನು ನೋಡಿದ್ದನು. ಅವನ ಜೊತೆಯಲ್ಲಿದ್ದ ಅವನ ನಾಲ್ಕು ಮಕ್ಕಳು ಅಡಗಿಕೊಂಡಿದ್ದರು.
21. ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡು ಕಣವನ್ನು ಬಿಟ್ಟು ಹೋಗಿ ಅವನಿಗೆ ಅಡ್ಡ ಬಿದ್ದನು.
22. ದಾವೀದನು ಅವನಿಗೆ, “ನಿನ್ನ ಕಣವನ್ನೂ ಮತ್ತು ಭೂಮಿಯನ್ನು ನನಗೆ ಕೊಡು, ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುತ್ತೇನೆ. ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು” ಎಂದು ಹೇಳಿದನು.
23. ಆಗ ಒರ್ನಾನನು ದಾವೀದನಿಗೆ, “ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಯಜ್ಞಮಾಡೋಣವಾಗಲಿ. ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ಹಂತೀಕುಂಟೆಗಳೂ, ನೈವೇದ್ಯಕ್ಕೋಸ್ಕರ ಗೋದಿಯೂ ಇರುತ್ತವೆ. ಇವೆಲ್ಲವನ್ನೂ ಕೊಡುತ್ತೇನೆ” ಎಂದು ಹೇಳಿದನು.
24. ಅರಸನಾದ ದಾವೀದನು ಒರ್ನಾನನಿಗೆ “ಹಾಗಲ್ಲ ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ ನಿನಗೆ ಸೇರಿದ್ದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸುವುದಿಲ್ಲ” ಎಂದು ಹೇಳಿದನು.
25. ದಾವೀದನು ಆ ಭೂಮಿಗೋಸ್ಕರ ಅವನಿಗೆ ಆರುನೂರು ಶೆಕಲ್ ಬಂಗಾರವನ್ನು ಕೊಟ್ಟನು.
26. ಅಲ್ಲಿ ದಾವೀದನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿ, ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ, ಆಕಾಶದಿಂದ ಯಜ್ಞವೇದಿಯ ಮೇಲೆ ಬೆಂಕಿಯನ್ನು ಸುರಿಸಿ,
27. ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು. [PE]
28. {#1ದಾವೀದನು ದೇವಾಲಯಕ್ಕೋಸ್ಕರ ಸ್ಥಳವನ್ನು ಗೊತ್ತುಮಾಡಿದ್ದು } [PS]ಮೋಶೆಯು ಅರಣ್ಯದಲ್ಲಿ ಮಾಡಿಸಿದ ಯೆಹೋವನ ಗುಡಾರ ಮತ್ತು ಯಜ್ಞವೇದಿಯು ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದವು.
29. ಆದರೂ ದಾವೀದನು ಯೆಹೋವನ ದೂತನ ಕತ್ತಿಗೆ ಹೆದರಿ ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನು ಅರ್ಪಿಸಿದನು.
30. ಆ ಕಾಲದಲ್ಲಿ ದಾವೀದನಿಗೆ ಯೆಹೋವನಿಂದ ಸದುತ್ತರ ದೊರಕಿತು. [PE]
ಒಟ್ಟು 29 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 21 / 29
ದಾವೀದನು ಮಾಡಿಸಿದ ಜನಗಣತಿ 1 ಸೈತಾನನು ಇಸ್ರಾಯೇಲರಿಗೆ ವಿರುದ್ಧ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು. 2 ದಾವೀದನು ಯೋವಾಬನನ್ನೂ ಮತ್ತು ಜನಾಧಿಪತಿಗಳನ್ನೂ ಕರೆದು, “ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ, ಇಸ್ರಾಯೇಲರನ್ನು ಲೆಕ್ಕ ಮಾಡಿಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು. 3 ಆಗ ಯೋವಾಬನು, “ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದ್ದನ್ನು ಅಪೇಕ್ಷಿಸುವುದೇನು? ಇಸ್ರಾಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ” ಎಂದನು. 4 ಆದರೆ ಅರಸನು ಯೋವಾಬನಿಗೆ ಕಿವಿಗೊಡದೆ ತನ್ನ ಮಾತನ್ನೇ ನಡೆಸಿದ್ದರಿಂದ ಅವನು ಹೊರಟುಹೋಗಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿದನು. 5 ಯೋವಾಬನು ದಾವೀದನಿಗೆ ಒಪ್ಪಿಸಿದ ಜನಗಣತಿಯ ಸಂಖ್ಯೆಯು ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ ಮತ್ತು ಯೆಹೂದ್ಯರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ. 6 ಅರಸನ ಅಪ್ಪಣೆಯು ಯೋವಾಬನಿಗೆ ಅಸಹ್ಯವಾಗಿದ್ದುದರಿಂದ ಅವನು ಲೇವಿ ಮತ್ತು ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ. ದಾವೀದನ ಪಾಪಕ್ಕೆ ಶಿಕ್ಷೆ 7 ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದೆಂದು ಕಂಡದ್ದರಿಂದ ಆತನು ಇಸ್ರಾಯೇಲರನ್ನು ಬಾಧಿಸಿದನು. 8 ಆಗ ದಾವೀದನು, “ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾಗಿದ್ದೇನೆ. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ದೇವರನ್ನು ಪ್ರಾರ್ಥಿಸಿದನು. 9 ಯೆಹೋವನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನೆಂದರೆ, 10 ಯೆಹೋವನು ಇಂತೆನ್ನುತ್ತಾನೆ, “ನಾನು ಮೂರು ವಿಧವಾದ ಶಿಕ್ಷೆಯನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂಬುದಾಗಿ ದಾವೀದನಿಗೆ ಹೇಳು” ಎಂದನು. 11 ಆಗ ಗಾದನು ದಾವೀದನ ಬಳಿಗೆ ಹೋಗಿ ಅವನಿಗೆ, “ಯೆಹೋವನು ಹೇಳುವುದೇನೆಂದರೆ, 12 ‘ಮೂರು ವರ್ಷಗಳ ವರೆಗೆ ಬರಗಾಲ ಉಂಟಾಗಬೇಕೋ, ಇಲ್ಲವೆ ನೀನು ಮೂರು ತಿಂಗಳು ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ, ಇಲ್ಲವೆ ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರದೂತನಿಂದ ಉಂಟಾಗುವ ಮೂರು ದಿನಗಳ ಘೋರವ್ಯಾಧಿಯ ರೂಪವಾದ ಯೆಹೋವನ ಶಿಕ್ಷೆ ಬೇಕೋ, ಈ ಮೂರರಲ್ಲಿ ಒಂದನ್ನು ಆರಿಸಿಕೊ’ ಎಂಬುದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು ಆಲೋಚಿಸಿ ಹೇಳು” ಎಂದು ಹೇಳಿದನು. 13 ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಮನುಷ್ಯರ ಕೈಯಲ್ಲಿ ಬೀಳುವುದಕ್ಕಿಂತ ಯೆಹೋವನ ಹಸ್ತದಲ್ಲಿ ಬೀಳುವುದು ಮೇಲು. ಆತನು ಕೃಪಾಪೂರ್ಣನು” ಎಂದು ಹೇಳಿದನು. 14 ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು. 15 ದೇವರು ಯೆರೂಸಲೇಮನ್ನು ನಾಶಪಡಿಸುವುದಕ್ಕೆ ದೂತರನ್ನು ಕಳುಹಿಸಿದನು. ಆದರೆ ಆ ದೂತನು ನಾಶಪಡಿಸುವುದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರ ದೂತನಿಗೆ, “ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು. 16 ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ, ಚಾಚಿದ ಕೈಯಲ್ಲಿ ಯೆರೂಸಲೇಮಿಗೆ ವಿರುದ್ಧವಾಗಿ ಹಿರಿದ ಕತ್ತಿಯಿರುವುದನ್ನೂ ಕಂಡಾಗ ಅವನೂ, ಹಿರಿಯರೂ ಗೋಣಿತಟ್ಟನ್ನು ಹೊದ್ದುಕೊಂಡು ಬೋರಲು ಬಿದ್ದರು. 17 ಮತ್ತು ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ. ಮಹಾಪಾಪಮಾಡಿದವನು ನಾನೇ. ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವುದಕ್ಕೆ ಅವರಿಗೆ ವಿರುದ್ಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರುದ್ಧವಾಗಿರಲಿ” ಎಂದು ಬೇಡಿಕೊಂಡನು. ದಾವೀದನು ಯಜ್ಞವೇದಿಯನ್ನು ಕಟ್ಟಿಸಿದ್ದು 18 ಆಗ ಯೆಹೋವನ ದೂತನು ಗಾದನಿಗೆ, “ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುವುದಕ್ಕೆ ಹೋಗಬೇಕು ಎಂದು ದಾವೀದನಿಗೆ ಹೇಳು” ಎಂದು ಆಜ್ಞಾಪಿಸಿದನು. 19 ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು. 20 ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ತಿರುಗಿಕೊಂಡು ದೂತನನ್ನು ನೋಡಿದ್ದನು. ಅವನ ಜೊತೆಯಲ್ಲಿದ್ದ ಅವನ ನಾಲ್ಕು ಮಕ್ಕಳು ಅಡಗಿಕೊಂಡಿದ್ದರು. 21 ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡು ಕಣವನ್ನು ಬಿಟ್ಟು ಹೋಗಿ ಅವನಿಗೆ ಅಡ್ಡ ಬಿದ್ದನು. 22 ದಾವೀದನು ಅವನಿಗೆ, “ನಿನ್ನ ಕಣವನ್ನೂ ಮತ್ತು ಭೂಮಿಯನ್ನು ನನಗೆ ಕೊಡು, ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುತ್ತೇನೆ. ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು” ಎಂದು ಹೇಳಿದನು. 23 ಆಗ ಒರ್ನಾನನು ದಾವೀದನಿಗೆ, “ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಯಜ್ಞಮಾಡೋಣವಾಗಲಿ. ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ಹಂತೀಕುಂಟೆಗಳೂ, ನೈವೇದ್ಯಕ್ಕೋಸ್ಕರ ಗೋದಿಯೂ ಇರುತ್ತವೆ. ಇವೆಲ್ಲವನ್ನೂ ಕೊಡುತ್ತೇನೆ” ಎಂದು ಹೇಳಿದನು. 24 ಅರಸನಾದ ದಾವೀದನು ಒರ್ನಾನನಿಗೆ “ಹಾಗಲ್ಲ ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ ನಿನಗೆ ಸೇರಿದ್ದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸುವುದಿಲ್ಲ” ಎಂದು ಹೇಳಿದನು. 25 ದಾವೀದನು ಆ ಭೂಮಿಗೋಸ್ಕರ ಅವನಿಗೆ ಆರುನೂರು ಶೆಕಲ್ ಬಂಗಾರವನ್ನು ಕೊಟ್ಟನು. 26 ಅಲ್ಲಿ ದಾವೀದನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿ, ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ, ಆಕಾಶದಿಂದ ಯಜ್ಞವೇದಿಯ ಮೇಲೆ ಬೆಂಕಿಯನ್ನು ಸುರಿಸಿ, 27 ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು. ದಾವೀದನು ದೇವಾಲಯಕ್ಕೋಸ್ಕರ ಸ್ಥಳವನ್ನು ಗೊತ್ತುಮಾಡಿದ್ದು 28 ಮೋಶೆಯು ಅರಣ್ಯದಲ್ಲಿ ಮಾಡಿಸಿದ ಯೆಹೋವನ ಗುಡಾರ ಮತ್ತು ಯಜ್ಞವೇದಿಯು ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದವು. 29 ಆದರೂ ದಾವೀದನು ಯೆಹೋವನ ದೂತನ ಕತ್ತಿಗೆ ಹೆದರಿ ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನು ಅರ್ಪಿಸಿದನು. 30 ಆ ಕಾಲದಲ್ಲಿ ದಾವೀದನಿಗೆ ಯೆಹೋವನಿಂದ ಸದುತ್ತರ ದೊರಕಿತು.
ಒಟ್ಟು 29 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 21 / 29
×

Alert

×

Kannada Letters Keypad References