1. {ಯಾಜಕರ ಕರ್ತವ್ಯಗಳು} PS ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವರು.
|
2. ನಾದಾಬ್ ಮತ್ತು ಅಬೀಹೂ ಎಂಬುವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತು ಹೋದುದರಿಂದ ಎಲ್ಲಾಜಾರನೂ, ಈತಾಮಾರನೂ ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು.
|
3. ದಾವೀದನು ಎಲ್ಲಾಜಾರನ ಸಂತಾನದವನಾದ ಚಾದೋಕನೂ, ಈತಾಮಾರನ ಸಂತಾನದವನಾದ ಅಹೀಮೆಲೆಕನು ಯಾಜಕರನ್ನು ಸರದಿಯ ಮೇಲೆ ಸೇವೆಮಾಡತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು.
|
4. ಎಲ್ಲಾಜಾರನ ಸಂತಾನದ ಕುಟುಂಬ ಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡು ಬಂದುದರಿಂದ ಎಲ್ಲಾಜಾರರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ, ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ,
|
5. ಈ ವರ್ಗಗಳ ವಿಷಯವಾಗಿ ಚೀಟು ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು.
|
6. ನೆತನೇಲನ ಮಗನಾದ ಶೆಮಾಯನೆಂಬ ಲೇವಿಯ ಲೇಖಕನು ಅರಸನ ಮುಂದೆಯೂ, ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ಯಾತಾರನ ಮಗನಾದ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರನ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇಮಿಸಿ ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು. PEPS
|
19. ಆರೋನ್ಯರು ಈ ವರ್ಗ ಕ್ರಮದಿಂದ ಯೆಹೋವನ ಆಲಯಕ್ಕೆ ಬಂದು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನೇಮಿಸಿದ ಸೇವೆಯನ್ನು ನಡೆಸತಕ್ಕದ್ದು. PS
|
23. ಹೆಬ್ರೋನನ ಸಂತಾನದವರಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು, ಮೂರನೆಯವನು ಮತ್ತು ಯೆಕಮ್ಮಾಮನು ನಾಲ್ಕನೆಯವನು,
|
31. ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು. PE
|