1. {ದೇವಾಲಯದ ಸಂಗೀತ ಮಂಡಳಿ} PS ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,
|
3. ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ನುಡಿಸುತ್ತಾ ಪರವಶರಾಗಿ ಯೆಹೋವನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನ್ಯನಿಗೆ ಈ ಆರು ಜನರೂ ಸಹಾಯಕರಾಗಿದ್ದರು.
|
4. ಹೇಮಾನ್ಯರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತಿ, ಹೋತೀರ್ ಮತ್ತು ಮಹಜೀಯೋತ್.
|
5. ಇವರೆಲ್ಲರು ಅರಸನ ದರ್ಶಿಯಾದ ಹೇಮಾನನ ಮಕ್ಕಳು. ದೇವರು ಹೇಮಾನನಿಗೆ, “ನೀನು ಅಭಿವೃದ್ಧಿ ಹೊಂದುವಹಾಗೆ ಮಾಡುವೆನು” ಎಂಬುದಾಗಿ ವಾಗ್ದಾನ ಮಾಡಿದ್ದನು. ಅದರಂತೆಯೇ ಆತನು ಅವನಿಗೆ ಹದಿನಾಲ್ಕು ಗಂಡುಮಕ್ಕಳನ್ನೂ, ಮೂರು ಹೆಣ್ಣುಮಕ್ಕಳನ್ನೂ ದಯಪಾಲಿಸಿದನು.
|
6. ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.
|
7. ಇವರು ಯೆಹೋವನ ಕೀರ್ತನೆಗಳನ್ನು ಕಲಿತ ಇವರ ಸಹೋದರರು ಒಟ್ಟು ಇನ್ನೂರ ಎಂಭತ್ತೆಂಟು ಜನರು. ಇವರೆಲ್ಲರೂ ಗಾಯಕ ಪ್ರವೀಣರಾಗಿದ್ದರು. PEPS
|
9. ಚೀಟಿನ ಪ್ರಕಾರವಾಗಿ,
ಮೊದಲನೆಯದಾಗಿ ಆಸಾಫ್ಯನಾದ ಯೋಸೇಫನು. ಎರಡನೆಯವನು ಗೆದಲ್ಯ. ಇವನೂ ಇವನ ಸಹೋದರರೂ, ಮಕ್ಕಳು ಒಟ್ಟು ಹನ್ನೆರಡು ಜನರು. |