1. {ಸೈನಿಕರ ವರ್ಗಗಳು} PS ಇಸ್ರಾಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳೂ, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳ ವಿವರ: PEPS ವರ್ಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರದಿಯ ಪ್ರಕಾರ ಕೆಲಸಕ್ಕಾಗಿ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು ಇದ್ದರು.
|
3. ಇವನು ಮೊದಲನೆಯ ತಿಂಗಳಿನ ಸೈನ್ಯಾಧಿಪತಿಯ ಮುಖ್ಯಸ್ಥನು. ಮೊದಲನೆಯ ತಿಂಗಳಿನಲ್ಲಿ ಸೇವೆ ಮಾಡತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.
|
4. ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕನು. ಆ ವರ್ಗದಲ್ಲಿ ಮಿಕ್ಲೋತನೆಂಬವನು ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.
|
5. ಯಾಜಕನಾದ ಯೆಹೋಯಾದನ ಮಗನೂ ಪ್ರಧಾನನೂ ಆದ ಬೆನಾಯನು ಮೂರನೆಯ ವರ್ಗದ ನಾಯಕನು. ಮೂರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
|
6. ಈ ಬೆನಾಯನು ಮೂವತ್ತು ಜನರಲ್ಲಿ ಪ್ರಸಿದ್ಧನಾದ ಯುದ್ಧವೀರನೂ ಅವರ ಮುಖ್ಯಸ್ಥನೂ ಆಗಿದ್ದನು. ಅವನ ವರ್ಗದಲ್ಲಿ ಅವನ ಮಗನಾದ ಅಮ್ಮೀಜಾಬಾದನು ಇದ್ದನು.
|
7. ಯೋವಾಬನ ತಮ್ಮನಾದ ಅಸಾಹೇಲನು. ಅವನು ಸತ್ತ ನಂತರ ಅವನ ಮಗನಾದ ಜೆಬದ್ಯನು ನಾಲ್ಕನೆಯ ವರ್ಗದ ನಾಯಕನು. ನಾಲ್ಕನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
|
8. ಇಜ್ರಾಹ್ಯನಾದ ಶಮ್ಹೂತನು ಐದನೆಯ ವರ್ಗದ ನಾಯಕನು. ಐದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
|
9. ತೆಕೋವಿನ ಇಕ್ಕೇಷನ ಮಗನಾದ ಈರ ಎಂಬುವನು ಆರನೆಯ ವರ್ಗದ ನಾಯಕನು. ಆರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
|
10. ಎಫ್ರಾಯೀಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕನು. ಏಳನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
|
11. ಹುಷ ಊರಿನ ಜೆರಹೀಯನಾದ ಸಿಬ್ಬೆಕೈಯು ಎಂಟನೆಯ ವರ್ಗದ ನಾಯಕನು. ಎಂಟನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
|
12. ಬೆನ್ಯಾಮೀನ್ ಕುಲದ ಅನತೋತ್ ಊರಿನವನಾದ ಅಬೀಯೆಜೆರನು ಒಂಬತ್ತನೆಯ ವರ್ಗದ ನಾಯಕನು. ಒಂಬತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
|
13. ನೆಟೋಫ ಊರಿನವನಾದ ಜೆರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕನು. ಹತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
|
14. ಎಫ್ರಾಯೀಮ್ ಕುಲದ ಪಿರ್ರಾತೋನ್ಯನಾದ ಬೆನಾಯನು ಹನ್ನೊಂದನೆಯ ವರ್ಗದ ನಾಯಕನು. ಹನ್ನೊಂದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
|
15. ನೆಟೋಫ ಊರಿನವನಾದ ಒತ್ನೀಯೇಲನ ಸಂತಾನದವನಾದ ಹೆಲ್ದೈಯು ಹನ್ನೆರಡನೆಯ ವರ್ಗದ ನಾಯಕನು. ಹನ್ನೆರಡನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ. PS
|
16. {ಕುಲ ಪ್ರಭುಗಳು} PS ಇಸ್ರಾಯೇಲಿನ ಕುಲ ಪ್ರಭುಗಳು: ರೂಬೇನ್ಯರಲ್ಲಿ ಜಿಕ್ರೀಯ ಮಗನಾದ ಎಲೀಯೆಜೆರನು; ಸಿಮೆಯೋನ್ಯರಲ್ಲಿ ಮಾಕನ ಮಗನಾದ ಶೆಪಟ್ಯನು;
|
21. ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಕುಲದವರಲ್ಲಿ ಜೆಕರ್ಯಯನ ಮಗನಾದ ಇದ್ದೋ; ಬೆನ್ಯಾಮೀನ್ಯರಲ್ಲಿ ಅಬ್ನೇರನ ಮಗನಾದ ಯಗಸೀಯೇಲ್;
|
23. ಇಸ್ರಾಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬುದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸುಳ್ಳವರನ್ನು ಪರಿಗಣಿಸಲಿಲ್ಲ.
|
24. ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದ ಇದರ ನಿಮಿತ್ತ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾದ್ದರಿಂದ ಅದನ್ನು ಪೂರ್ತಿಗೊಳಿಸಲು ಸಾಧ್ಯವಾಗಲಿಲ್ಲ. ಈ ಜನಗಣತಿಯು ದಾವೀದನ ರಾಜ್ಯದ ಇತಿಹಾಸ ಗ್ರಂಥದಲ್ಲಿ ದಾಖಲಿಸಲಿಲ್ಲ. PS
|
25. {ಅರಸನ ಆಸ್ತಿಯ ಮೇಲ್ವಿಚಾರಕರು} PS ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರೆಂದರೆ: ಅರಸನ ಭಂಡಾರಗಳನ್ನು ಅದೀಯೇಲನ ಮಗನಾದ ಅಜ್ಮಾವೆತ್, ಹೊಲದಲ್ಲಿಯೂ ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆ ಇದ್ದ ಉಗ್ರಾಣಗಳನ್ನು ಉಜ್ಜೀಯನ ಮಗನಾದ ಯೋನಾತಾನನು ಇದ್ದನು.
|
27. ದ್ರಾಕ್ಷಿ ತೋಟಗಳ ರಾಮಾ ಊರಿನ ಶಿಮ್ಮೀ, ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳನ್ನು ಶಿಪ್ಮೀಯನಾದ ಜಬ್ದೀ ಇದ್ದನು.
|
28. ಎಣ್ಣೇ ಮರದ ತೋಪುಗಳನ್ನೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳನ್ನು ಗೆದೇರಾ ಊರಿನವನಾದ ಬಾಳ್ಹಾನಾನ್ ಮತ್ತು ಎಣ್ಣೆಯ ಉಗ್ರಾಣಗಳನ್ನು ನೋಡಿಕೊಳ್ಳಲು ಯೋವಾಷ್ ಇದ್ದನು.
|
29. ಶಾರೋನಿನಲ್ಲಿ ಮೇಯುವ ಹಸುಗಳನ್ನು ಶಾರೋನ್ಯನಾದ ಶಿಟ್ರೈ ಇದ್ದನು. ತಗ್ಗುಗಳಲ್ಲಿ ಮೇಯುವ ಹಸುಗಳನ್ನು ಅದ್ಲೈಯ ಮಗನಾದ ಶಾಫಾಟನು ಇದ್ದನು.
|
32. ವಿವೇಕಿಯೂ, ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು, ಮಂತ್ರಿಯೂ ಹಕ್ಮೋನಿಯ ಮಗನಾದ ಯೆಹೀಯೇಲನು ರಾಜಪುತ್ರಪಾಲಕನೂ ಆಗಿದ್ದರು.
|
34. ಬೆನಾಯನ ಮಗನಾದ ಯೆಹೋಯಾದಾವನೂ, ಎಬ್ಯಾತಾರನೂ, ಅಹೀತೋಫೆಲನ ನಂತರದ ಉತ್ತರಾಧಿಕಾರಿಗಳು. ಯೋವಾಬನು ಅರಸನ ಸೈನ್ಯಾಧಿಪತಿಯಾಗಿದ್ದನು. PE
|