2. ಶೋಬಾಲನ ಮಗನಾದ ರೆವಾಯನು ಯಹತನನ್ನು ಪಡೆದನು. ಯಹತನು ಅಹೂಮೈ ಮತ್ತು ಲಹದ್ ಇವರನ್ನು ಪಡೆದನು. ಇವರು ಚೊರ್ರದ ಕುಟುಂಬದವರು. PEPS
|
4. ಗೆದೋರಿನ ಮೂಲಪುರುಷನು ಪೆನೂವೇಲನು. ಹೂಷಾಹ್ಯರ ಮೂಲಪುರುಷನು ಏಜೆರ್. ಇವರು ಎಫ್ರಾತಾಹಳ ಚೊಚ್ಚಲ ಮಗನಾದ ಹೂರನ ಮಕ್ಕಳು. ಈ ಹೂರನೇ ಬೇತ್ಲೆಹೇಮ್ಯರ ಮೂಲಪುರುಷನು. PEPS
|
9. ಯಾಬೇಚನು ತನ್ನ ಅಣ್ಣತಮ್ಮಂದಿರಲ್ಲಿ ಗೌರವವುಳ್ಳವನಾಗಿದ್ದನು. ಇವನನ್ನು ಬಹು ವೇದನೆಯಿಂದ ಹೆತ್ತೆನೆಂದು ಇವನ ತಾಯಿ ಇವನಿಗೆ ಯಾಬೇಚನೆಂದು ಹೆಸರಿಟ್ಟಳು.
|
10. ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ, ನನ್ನ ಪ್ರಾಂತ್ಯವನ್ನು ವಿಸ್ತರಿಸಿ, ನಿನ್ನ ಕೃಪಾಹಸ್ತದಲ್ಲಿ ನನ್ನನ್ನು ಇರಿಸಿ ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ಕೇಡಿನಿಂದ ರಕ್ಷಿಸಬಾರದೇ?” ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು. PEPS
|
12. ಎಷ್ಟೋನನಿಂದ ಬೇತ್ರಾಫ, ಪಾಸೇಹ, ತೆಹಿನ್ನ ಎಂಬ ಮೂರು ಗಂಡು ಮಕ್ಕಳಿದ್ದರು. ಇವರು ರೇಕಾಹ್ಯರು. ತೆಹಿನ್ನನು ನಾಹಷ್ ಪಟ್ಟಣದವರ ಮೂಲಪುರುಷನು.
|
17. ಎಜ್ರನ ಮಕ್ಕಳು: ಯೆತೆರ್, ಮೆರೆದ್, ಏಫೆರ್ ಮತ್ತು ಯಾಲೋನ್ ಎಂಬುವವರು. ಮೆರೆದನು ಫರೋಹನ ಮಗಳಾದ ಬಿತ್ಯೆಳನ್ನು ಮದುವೆಮಾಡಿಕೊಂಡನು. ಈಕೆಯು ಅವನಿಂದ ಗರ್ಭಿಣಿಯಾಗಿ ಮಿರ್ಯಾಮ್, ಶಮ್ಮೈ, ಎಷ್ಟೆಮೋವದವರ ಮೂಲಪುರುಷನಾದ ಇಷ್ಬಹ ಇವರನ್ನು ಹೆತ್ತಳು.
|
18. ಯೆಹೂದ್ಯಳಾದ ಅವನ ಇನ್ನೊಬ್ಬ ಹೆಂಡತಿಯು ಗೆದೋರ್ಯರ ಮೂಲಪುರುಷನಾದ ಯೆರೆದ್, ಸೋಕೋವಿನವರ ಮೂಲಪುರುಷನಾದ ಹೆಬೆರ್ ಮತ್ತು ಜಾನೋಹದವರ ಮೂಲಪುರುಷನಾದ ಯೆಕೂತೀಯೇಲ್ ಇವರನ್ನು ಹೆತ್ತಳು.
|
19. ನಹಮನ ತಂಗಿಯೂ, ಹೋದೀಯನ ಹೆಂಡತಿಯ ಇಬ್ಬರು ಮಕ್ಕಳಲ್ಲಿ ಒಬ್ಬನು ಗರ್ಮ್ಯದ ಕೆಯೀಲದವರ ಮೂಲಪುರುಷನಾದನು, ಮತ್ತೊಬ್ಬನು ಎಷ್ಟೆಮೋವದವರ ಮಾಕಾತ್ಯ ಸಂತಾನದ ಮೂಲಪುರುಷನಾದನು.
|
20. ಶೀಮೋನನ ಮಕ್ಕಳು: ಅಮ್ನೋನ್, ರಿನ್ನ, ಬೆನ್ಹಾನಾನ್ ಮತ್ತು ತೀಲೋನ್. ಇಷ್ಷೀಯನ ಮಕ್ಕಳು: ಜೋಹೇತ್ ಮತ್ತು ಬೆನ್ಜೊಹೇತ್. PEPS
|
21. ಯೆಹೂದನ ಮಗನಾದ ಶೇಲಹನ ಸಂತಾನದವರು: ಲೇಕಾಹ್ಯರ ಮೂಲಪುರುಷನಾದ ಏರ್, ಮರೇಷದವರ ಮೂಲಪುರುಷನಾದ ಲದ್ದ, ಬೇತಷ್ಬೇಯದಲ್ಲಿರುವ ನೇಯಿಗಾರರ ಕುಟುಂಬಗಳವರು,
|
22. ಯೊಕೀಮನು ಕೋಜೇಬದವರು ಮೋವಾಬ್ ದೇಶದಲ್ಲಿ ದೊರೆತನ ನಡಿಸಿ ಬೇತ್ಲೆಹೇಮಿಗೆ ತಿರುಗಿ ಬಂದ ಯೋವಾಷ್ ಮತ್ತು ಸಾರಾಫ್ ಇವರೇ. (ಇವು ಪೂರ್ವಕಾಲದಲ್ಲಿ ನಡೆದ ಸಂಗತಿಗಳು.)
|
23. ಮೇಲೆ ಕಂಡ ಜನರು ಕುಂಬಾರರು. ಅವರು ನೆಟಾಯಿಮ್ ಮತ್ತು ಗೆದೇರ ಎಂಬ ಊರುಗಳಲ್ಲಿ ವಾಸಿಸುತ್ತಾ ಅರಸನ ಸೇವೆಯನ್ನು ಮಾಡುತ್ತಿದ್ದರು. PS
|
27. ಶಿಮ್ಮೀಗೆ ಹದಿನಾರು ಜನರು ಗಂಡು ಮಕ್ಕಳೂ ಮತ್ತು ಆರು ಜನರು ಹೆಣ್ಣು ಮಕ್ಕಳೂ ಇದ್ದರು. ಅವನ ಸಹೋದರರಿಗೆ ಹೆಚ್ಚು ಮಕ್ಕಳಿರಲಿಲ್ಲ. ಆದುದರಿಂದ ಅವರ ಕುಲವು ಯೆಹೂದ ಕುಲದಷ್ಟು ಅಭಿವೃದ್ಧಿಯಾಗಲಿಲ್ಲ. PEPS
|
33. ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲ್ ಊರಿನ ವರೆಗಿರುವ ಗ್ರಾಮಗಳೂ ಅವರ ನಿವಾಸಸ್ಥಾನಗಳಾಗಿದ್ದವು. ಅವರು ವಂಶಾವಳಿಯ ದಾಖಲೆಗಳನ್ನು ತಮ್ಮ ಬಳಿ ಇಟ್ಟುಕೊಂಡಿದ್ದರು. PEPS
|
37. ಶೆಮಾಯನ ಮಗನಾದ ಶಿಮ್ರಿಯಿಂದ ಹುಟ್ಟಿದ ಯೆದಾಯನ ಮರಿಮಗನೂ, ಅಲ್ಲೋನನ ಮೊಮ್ಮಗನೂ, ಶಿಪ್ಫಿಯ ಮಗನು ಆದ ಜೀಜ ಎಂಬ ಹೆಸರುಳ್ಳವರು ತಮ್ಮ ತಮ್ಮ ಗೋತ್ರಗಳಲ್ಲಿ ಪ್ರಮುಖರಾಗಿದ್ದರು.
|
39. ಅವರು ತಮ್ಮ ಆಡು, ಕುರಿಗಳಿಗೋಸ್ಕರ ಹುಲ್ಲುಗಾವಲುಗಳನ್ನು ಹುಡುಕುತ್ತಾ ಗೆದೋರಿಗೆ ಹೋಗುವ ಕಣಿವೆಯನ್ನು ದಾಟಿ, ಆಚೆಯ ತಗ್ಗಿನ ಪೂರ್ವದಿಕ್ಕಿಗೆ ಹೋದಾಗ ಅಲ್ಲಿ ಶ್ರೇಷ್ಠವಾದ ಹಸಿರು ಹುಲ್ಲುಗಾವಲುಗಳನ್ನು ಕಂಡರು.
|
40. ದೇಶವು ಎಲ್ಲಾ ಕಡೆಗಳಲ್ಲಿ ವಿಸ್ತಾರವಾಗಿದ್ದು ಸುಖ ಸಮಾಧಾನಗಳಿಂದ ಕೂಡಿತ್ತು. ಅಲ್ಲಿ ಮೊದಲಿನಿಂದಲೂ ವಾಸವಾಗಿದ್ದವರು ಹಾಮ್ಯರೇ.
|
41. ಮೇಲೆ ಹೇಳಿದ ಪ್ರಭುಗಳು ಯೆಹೂದ ರಾಜನಾದ ಹಿಜ್ಕೀಯನ ಕಾಲದಲ್ಲಿ ಅಲ್ಲಿಗೆ ಹೋಗಿ ಆ ಹಾಮ್ಯರ ಪಾಳೆಯಗಳನ್ನೂ, ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಗೆದ್ದು, ಎಲ್ಲರನ್ನೂ ನಿರ್ನಾಮಮಾಡಿದರು. ಅವರು ತಮ್ಮ ಆಡುಕುರಿಗಳಿಗೆ ಅಲ್ಲಿ ಮೇವು ಸಿಕ್ಕಿದ್ದರಿಂದ ಅಲ್ಲೇ ವಾಸಿಸಿದರು. ಅಲ್ಲಿನ ಮೂಲನಿವಾಸಿಗಳು ಯಾರೂ ಉಳಿಯಲಿಲ್ಲ.
|
42. ಇದಲ್ಲದೆ ಸಿಮೆಯೋನನ ಕುಲದ ಐನೂರು ಜನರು ಸೇಯೀರ್ ಪರ್ವತಕ್ಕೆ ಹೋದರು. ಇಷ್ಷೀಯ ಮಕ್ಕಳಾದ ಪೆಲಟ್ಯ, ನೆಗರ್ಯ, ರೆಫಾಯ ಮತ್ತು ಉಜ್ಜೀಯೇಲ್ ಎಂಬುವವರು ಅವರ ಮುಖ್ಯಸ್ಥರು.
|