1. {#1ಕ್ರೈಸ್ತರ ಎಚ್ಚರಿಕೆಗಾಗಿ ಪೌಲನು ಇಸ್ರಾಯೇಲ್ಯರ ದೃಷ್ಟಾಂತವನ್ನು ಸೂಚಿಸಿದ್ದು } [PS]ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ [* ವಿಮೋ 13:21 ]ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.
2. [† ವಿಮೋ 14:22 ]ಅವರೆಲ್ಲರೂ ಮೋಶೆಯನ್ನು ಹಿಂಬಾಲಿಸುವುದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು.
3. ಅವರೆಲ್ಲರೂ [‡ ಯೋಹಾ 6:31 ]ಆತ್ಮೀಕವಾದ [§ ವಿಮೋ 16:15,35 ]ಒಂದೇ ಆಹಾರವನ್ನು ತಿಂದರು.
4. [* ವಿಮೋ 17:6 ]ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ.
5. ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. [† ಅರಣ್ಯ 14:16,19 ]ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು.
6. [‡ ಅರಣ್ಯ 11:4,33; ಕೀರ್ತ 106:14 ]ಅವರು ಕೆಟ್ಟ ವಿಷಯಗಳನ್ನು ಮೋಹಿಸದಂತೆ ನಾವು ಮೋಹಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.
7. ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು, [§ ವಿಮೋ 32:6 ]“ಜನರು ತಿನ್ನುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು” ಎಂದು ಬರೆದಿದೆಯಲ್ಲಾ. [* 1 ಕೊರಿ 10:14 ]ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ.
8. [† ಅರಣ್ಯ 25:1-9 ]ಅವರಲ್ಲಿ ಕೆಲವರು ಜಾರತ್ವ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು. [‡ 1 ಕೊರಿ 6:18 ]ಅವರ ಹಾಗೆ ನಾವು ಜಾರತ್ವ ಮಾಡದೆ ಇರೋಣ.
9. [§ ಅರಣ್ಯ 21:5,6 ]ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ.
10. [* ಅರಣ್ಯ 14:2, 29-37 ]ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.
11. ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು [† ರೋಮಾ. 4:23,24 ]ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.
12. [‡ ರೋಮಾ. 11:20 ]ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.
13. ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. [§ 1 ಕೊರಿ 1:9 ]ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ [* 2 ಪೇತ್ರ. 2:9 ]ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು. [PE]
14. {#1ಕ್ರಿಸ್ತ ಸೇವೆಗೂ ವಿಗ್ರಹಾರಾಧನೆಗೂ ಸಂಬಂಧವೇನೂ ಇರಬಾರದೆಂಬ ಬೋಧನೆ } [PS]ಆದ್ದರಿಂದ ಪ್ರಿಯರೇ, [† 1 ಕೊರಿ 10:7 ]ವಿಗ್ರಹಾರಾಧನೆಯನ್ನು ಬಿಟ್ಟು ದೂರವಾಗಿರಿ.
15. ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ.
16. [‡ ಮತ್ತಾ 26:27,28 ]ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? [§ ಮತ್ತಾ 26:27; 1 ಕೊರಿ 11:23,24 ]ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?
17. ರೊಟ್ಟಿ ಒಂದೇ ಆಗಿರುವ ಹಾಗೆ ಅನೇಕರಾಗಿರುವ ನಾವೆಲ್ಲರು [* 1 ಕೊರಿ 12:12,13; ರೋಮಾ. 12:5; ಕೊಲೊ 3:15 ]ಒಂದೇ ದೇಹದಂತಿದ್ದೇವೆ. ಯಾಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಂಡು ತಿನ್ನುತ್ತೇವೆ.
18. ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. [† ಯಾಜ 3:7,15 ]ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ.
19. ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು [‡ ಅಥವಾ ವಿಶೇಷ ]ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ,
20. ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, [§ ಧರ್ಮೋ 32:17, ಕೀರ್ತ 106:37 ]ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ.
21. [* 2 ಕೊರಿ 6:15,16 ]ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.
22. [† ಧರ್ಮೋ 32:21 ]ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ? [PE]
23. {#1ವಿಗ್ರಹಕ್ಕೆ ಅರ್ಪಿತವಾದದ್ದನ್ನು ತಿನ್ನಬಹುದೋ ಬಾರದೋ ಎಂಬ ವಿಚಾರದಲ್ಲಿ ಪರರ ಹಿತವನ್ನು ಲಕ್ಷಿಸುವುದೇ ಮುಖ್ಯವಾದದ್ದು } [PS] [‡ 1 ಕೊರಿ 6:18; 8:9 ]“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ.
24. [§ ವ 33 ನೋಡಿರಿ ]ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೇ ಪರಹಿತವನ್ನು ಚಿಂತಿಸಲಿ.
25. [* 1 ಕೊರಿ 8:7: ]ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ.
26. [† ಕೀರ್ತ 24:1; ಕೀರ್ತ 50:12 ]“ಭೂಮಿಯು ಅದರಲ್ಲಿರುವ ಸಮಸ್ತವೂ ಕರ್ತನದಲ್ಲವೇ.”
27. ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ.
28. ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ.
29. [‡ 1 ಕೊರಿ 8:9-12: ]ಅದು ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ; ಮತ್ತೊಬ್ಬನ ಮನಸ್ಸಾಕ್ಷಿಗಾಗಿಯೇ ಹೇಳಲಾಗಿದೆ. [§ ರೋಮಾ. 14:16: ]ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?
30. ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು?
31. ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ [* 1 ಕೊರಿ 9:22: ]ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.
32. ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.
33. ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ. [PE]