2. {ಸ್ತ್ರೀಯರು ಮುಸುಕಿಲ್ಲದೆ ಸಭೆಯಲ್ಲಿ ದೇವಾರಾಧನೆ ಮಾಡುವುದು ಯುಕ್ತವಲ್ಲ} PS ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
|
3. ಆದರೂ ನೀವು ಒಂದು ಸಂಗತಿಯನ್ನು ತಿಳಿದಿರಬೇಕೆಂಬುದು ನನ್ನ ಇಷ್ಟ. ಅದೇನೆಂದರೆ † ಎಫೆ 1:22; 4:15; 5:23 ಪ್ರತಿ ಪುರುಷನಿಗೂ ಕ್ರಿಸ್ತನು ತಲೆಯಾಗಿದ್ದಾನೆ. ‡ ಆದಿ 3:16 ಸ್ತ್ರೀಗೆ ಪುರುಷನು ತಲೆಯಾಗಿದ್ದಾನೆ. § 1 ಕೊರಿ 3:23 ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ.
|
4. ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ, * 1 ಕೊರಿ 12:10,28; 14:1 ಪ್ರವಾದನೆಯನ್ನಾಗಲಿ ಮಾಡುವ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.
|
5. ತಲೆಯ ಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ † ಲೂಕ 2:36, ಅ. ಕೃ. 21:9 ಪ್ರವಾದನೆಯನ್ನಾಗಲಿ ಮಾಡುವ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಸ್ತ್ರೀಯು ಮುಸುಕಿಲ್ಲದೆ ಇರುವುದೂ ತಲೆಬೋಳಿಸಿಕೊಂಡಿರುವುದೂ ಒಂದೇ.
|
6. ಸ್ತ್ರೀಯು ಮುಸುಕು ಹಾಕಿಕೊಳ್ಳದಿದ್ದರೆ ಆಕೆಯು ಕೂದಲನ್ನು ತೆಗೆಯಿಸಿಬಿಡಬೇಕಷ್ಟೆ. ಆದರೆ ಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ ತಲೆಬೋಳಿಸಿಕೊಳ್ಳುವುದಾಗಲಿ ಸ್ತ್ರೀಗೆ ಅವಮಾನಕರವಾಗಿದ್ದರೆ ಆಕೆಯು ಮುಸುಕನ್ನು ಹಾಕಿಕೊಳ್ಳಲಿ.
|
7. ‡ ಆದಿ 1:26 ಪುರುಷನು ದೇವರ ಪ್ರತಿರೂಪವೂ ಮತ್ತು ಪ್ರಭಾವವೂ ಆಗಿರುವುದರಿಂದ ತಲೆಯನ್ನು ಮುಚ್ಚಿಕೊಳ್ಳಬಾರದು. ಸ್ತ್ರೀಯಾದರೋ ಪುರುಷನ ಪ್ರಭಾವವಾಗಿದ್ದಾಳೆ.
|
9. ಇದಲ್ಲದೆ ಪುರುಷನು ಸ್ತ್ರೀಗೋಸ್ಕರವಾಗಿ ಸೃಷ್ಟಿಸಲ್ಪಡಲಿಲ್ಲ, ಆದರೆ * ಆದಿ 2:18 ಸ್ತ್ರೀಯು ಪುರುಷನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಳು.
|
10. ಹೀಗಿರುವುದರಿಂದ † ದೂತರು ನೋಡುತ್ತಾರೆಂದು ದೂತರ ನಿಮಿತ್ತವಾಗಿ ಸ್ತ್ರೀಯು ಪುರುಷನ ಅಧಿಕಾರವನ್ನು ಸೂಚಿಸುವ ಮುಸುಕನ್ನು ತಲೆಯ ಮೇಲೆ ಹಾಕಿಕೊಂಡಿರಬೇಕು.
|
12. ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು. ಹಾಗೆಯೇ ಪುರುಷನು ಸ್ತ್ರೀ ಮೂಲಕವಾಗಿ ಹುಟ್ಟುತ್ತಾನೆ. ಆದರೆ ದೇವರೇ § ರೋಮಾ. 11:36 ಸಮಸ್ತವನ್ನು ಸೃಷ್ಟಿಸಿದಾತನು.
|
13. ನಿಮ್ಮೊಳಗೆ ನೀವೇ ಯೋಚಿಸಿ ತೀರ್ಮಾನಿಸಿಕೊಳ್ಳಿರಿ. ಸ್ತ್ರೀಯು ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥನೆ ಮಾಡುವುದು ಯುಕ್ತವೋ
|
15. ಸ್ತ್ರೀಯು ಉದ್ದ ಕೂದಲು ಬೆಳೆಸಿಕೊಂಡರೆ ಅದು ಅವಳಿಗೆ ಮುಸುಕಿಗೆ ಬದಲಾಗಿ ನೀಡಲಾಗಿದ್ದು ಅದು ಅವಳಿಗೆ ಗೌರವವಾಗಿದೆಯೆಂದೂ ಸ್ವಾಭಾವಿಕವಾಗಿ ನಿಮಗೆ ತಿಳಿಯುತ್ತದಲ್ಲವೋ?
|
16. ಯಾವನಾದರೂ ಇದರ ಕುರಿತು ವಾಗ್ವಾದ ಮಾಡುವುದಾದರೆ ಇಂಥ ಪದ್ಧತಿ ನಮ್ಮಲ್ಲಿ ಇಲ್ಲ ಮತ್ತು ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳಿದುಕೊಳ್ಳಿರಿ. PS
|
17. {ಕರ್ತನ ಭೋಜನವನ್ನು ಕ್ರಮತಪ್ಪಿ ಆಚರಿಸಿದ್ದನ್ನು ಕುರಿತದ್ದು} PS ನಾನು ಇನ್ನು ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವುದಿಲ್ಲ. ಯಾಕೆಂದರೆ ನೀವು ಒಟ್ಟಾಗಿ ಸೇರಿಬರುತ್ತಿರುವುದು ಕೇಡಿಗಾಗಿಯೇ ಹೊರತು ಮೇಲಿಗಾಗಿಯಲ್ಲ.
|
18. ಹೇಗೆಂದರೆ ಮೊದಲನೆಯದಾಗಿ ನೀವು ಸಭೆಯಾಗಿ ಸೇರಿಬರುವಾಗ * 1 ಕೊರಿ 1:10-12; 3:3 ನಿಮ್ಮಲ್ಲಿ ಭಿನ್ನತೆ, ಭೇದಗಳು ಉಂಟಾಗುತ್ತವೆಂದು ಕೇಳಿದ್ದೇನೆ. ಮತ್ತು ಇದು ನಿಜವೆಂದು ಸ್ವಲ್ಪ ಮಟ್ಟಿಗೆ ನಂಬುತ್ತೇನೆ.
|
19. ನಿಮ್ಮಲ್ಲಿ ಕೆಲವರು ಯೋಗ್ಯರೆಂದು ಕಂಡುಬರುವುದಕ್ಕಾಗಿ † ಮತ್ತಾ 18:7, ಲೂಕ 17:1 ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.
|
21. ಭೋಜನ ಮಾಡುವಲ್ಲಿ ಪ್ರತಿಯೊಬ್ಬನು ತಾನು ತಂದದ್ದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ. ಹೀಗೆ ಒಬ್ಬನು ಹಸಿದಿರುತ್ತಾನೆ ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.
|
22. ನಿಮಗೆ ತಿನ್ನುವುದಕ್ಕೂ, ಕುಡಿಯುವುದಕ್ಕೂ ಮನೆಗಳಿಲ್ಲವೋ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ‡ ಯಾಕೋಬ. 2:6 ಅವಮಾನಮಾಡುತ್ತೀರಾ? ನಾನು ನಿಮಗೇನು ಹೇಳಲಿ? ನಿಮ್ಮನ್ನು ಹೊಗಳಲೋ? ಈ ವಿಷಯದಲ್ಲಿ ಹೊಗಳುವುದಿಲ್ಲ. PS
|
23. {ಕರ್ತನ ಭೋಜನದ ವಿಷಯವಾಗಿ ಬೋಧನೆ} PS ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು § 1 ಕೊರಿ 15:3, ಗಲಾ. 1:12 ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,
|
24. “ಇದು * ಅಥವಾ, ನಿಮಗೋಸ್ಕರ ಮುರಿಯಲ್ಪಡುವ ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ † ಅಥವಾ, ಮುರಿದು ತಿನ್ನಿರಿ ಹೀಗೆ ಮಾಡಿರಿ” ಅಂದನು.
|
25. ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, ‡ ಅಥವಾ ಪಾತ್ರೆಯಲ್ಲಿರುವುದು “ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ” ಅಂದನು.
|
26. ನೀವು ಈ ರೊಟ್ಟಿಯನ್ನು ತಿಂದು ಈ ಪಾನಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು § ಯೋಹಾ 21:22 ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.
|
27. ಹೀಗಿರುವುದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾನಪಾತ್ರೆಯಲ್ಲಿ ಪಾನ ಮಾಡಿದರೆ ಅವನು * ಯೋಹಾ 6:51, 53-56 ಕರ್ತನ ದೇಹಕ್ಕೂ ಮತ್ತು ಕರ್ತನ ರಕ್ತಕ್ಕೂ ಸಂಬಂಧಿಸಿದಂತೆ ದ್ರೋಹಮಾಡಿದವನಾಗಿರುವನು.
|
28. ಪ್ರತಿ ಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾನಪಾತ್ರೆಯಲ್ಲಿ ಕುಡಿಯಲಿ.
|
29. ಯಾಕೆಂದರೆ ಕರ್ತನ ದೇಹವೆಂದು ವಿವೇಚಿಸದೇ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವನು.
|
32. ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ‡ ರೋಮಾ. 5:16 ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ.
|
34. § 1 ಕೊರಿ 11:21-22, ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ ನೀವು ಸೇರಿಬಂದದ್ದು ನ್ಯಾಯ ತೀರ್ಪಿಗೊಳಗಾಗುವುದಕ್ಕೆ ಕಾರಣವಾಗಬಾರದು. ಇನ್ನುಳಿದಿರುವ * 1 ಕೊರಿ 4:19 ಸಂಗತಿಗಳನ್ನು ನಾನು ಬಂದ ನಂತರ ಆದೇಶಿಸುತ್ತೇನೆ. PE
|