1. {ಪ್ರೀತಿಯ ಶ್ರೇಷ್ಠತೆ} PS ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ.
|
2. ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ.
|
3. ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು. PEPS
|
4. ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ.
|
5. ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ.
|
7. ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ. PEPS
|
8. ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ಪ್ರವಾದನೆಗಳಾದರೂ ಇಲ್ಲದಂತಾಗುವವು. ಅನ್ಯಭಾಷೆಗಳೋ ನಿಂತುಹೋಗುವವು. ತಿಳಿವಳಿಕೆಯೋ ಇಲ್ಲದಂತಾಗುವುದು.
|
11. ನಾನು ಬಾಲಕನಾಗಿದ್ದಾಗ ಬಾಲಕನ ರೀತಿಯಲ್ಲಿ ಮಾತನಾಡಿದೆನು. ಬಾಲಕನ ಹಾಗೆ ಯೋಚಿಸಿದೆನು. ಬಾಲಕನಂತೆ ವಿವೇಚಿಸಿದೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.
|
12. ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.
|