1. ಪ್ರತಿನಿತ್ಯ ಪ್ರೀತಿಯಿಂದ ಜೀವಿಸಲು ಆಶಿಸಿರಿ ಮತ್ತು * 1 ಕೊರಿ 12:1, 31 ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅದರೊಳಗೂ ವಿಶೇಷವಾಗಿ ಪ್ರವಾದನಾ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ.
|
2. † 1 ಕೊರಿ 14:18-23,27,28 ಅನ್ಯಭಾಷೆಗಳನ್ನಾಡುವವನು ದೇವರ ಸಂಗಡ ಮಾತನಾಡುತ್ತಾನೆಯೇ ಹೊರತು ಮನುಷ್ಯರ ಸಂಗಡ ಅಲ್ಲ. ಅವನು ಆತ್ಮ ಪ್ರೇರಿತನಾಗಿ ಗುಪ್ತ ವಿಷಯಗಳನ್ನಾಡುತ್ತಾನೆ. ಅವನು ಮಾತನಾಡುವ ಮಾತುಗಳನ್ನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.
|
3. ಆದರೆ ಪ್ರವಾದಿಸುವವನಾದರೋ, ಅವನ ಮಾತುಗಳಿಂದ ಭಕ್ತಿವೃದ್ಧಿಯನ್ನೂ, ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುವವು.
|
4. ಅನ್ಯಭಾಷೆಗಳನ್ನಾಡುವವನು ತನಗೆ ತಾನೇ ಆತ್ಮೀಕ ವೃದ್ಧಿಯನ್ನುಂಟುಮಾಡಿಕೊಳ್ಳುತ್ತಾನೆ, ಆದರೆ ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡುತ್ತಾನೆ.
|
5. ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸಿದರೂ, ಅದಕ್ಕಿಂತಲೂ ‡ ಅರಣ್ಯ 11:29 ನೀವು ಪ್ರವಾದಿಸಬೇಕೆಂಬುದೆ ನನ್ನಿಷ್ಟವಾಗಿದೆ. ಅನ್ಯಭಾಷೆಗಳನ್ನಾಡುವವನು ಸಭೆಯು ಅಭಿವೃದ್ಧಿಯಾಗುವುದಕ್ಕಾಗಿ ಆ ಅನ್ಯಭಾಷೆಯ ಅರ್ಥವನ್ನು ವಿವೇಚಿಸಿ ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠನು.
|
6. ಆದರೆ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ, ಜ್ಞಾನವಾಕ್ಯಗಳನ್ನಾಡದೆ, ಪ್ರವಾದನೆಯನ್ನು ಹೇಳದೆ, ಉಪದೇಶಮಾಡದೆ, ಅನ್ಯಭಾಷೆಗಳನ್ನು ಮಾತ್ರ ಮಾತನಾಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು?
|
7. ಕೊಳಲು, ವೀಣೆ ಮೊದಲಾದ ನಿರ್ಜೀವವಾದ್ಯಗಳು ನಾದಗಳಲ್ಲಿ ಯಾವ ವ್ಯತ್ಯಾಸವನ್ನೂ ತೋರಿಸದಿದ್ದರೆ; ನುಡಿಸಿದ ವಾದ್ಯ ಇಂಥದ್ದೇ ಎಂದು ಹೇಗೆ ತಿಳಿಯುವುದು?
|
9. ಹಾಗೆಯೇ ನೀವೂ ಸಹ ಸ್ಪಷ್ಟವಾದ ಭಾಷೆಯನ್ನು ನಿಮ್ಮ ಬಾಯಿಂದ ಮಾತನಾಡದೆ ಹೋದರೆ, ನಿಮ್ಮ ಮಾತಿನ ಅರ್ಥವನ್ನು ಹೇಗೆ ತಿಳಿದುಕೊಳ್ಳಲು ಸಾಧ್ಯ? § 1 ಕೊರಿ 9:26 ನೀವು ಗಾಳಿಯ ಸಂಗಡ ಮಾತನಾಡಿದ ಹಾಗಿರುವುದಷ್ಟೆ.
|
11. ಭಾಷೆಯ ಅರ್ಥವು ನನಗೆ ತಿಳಿಯದಿದ್ದರೆ ಮಾತನಾಡುವವನಿಗೆ ನಾನು ಪರದೇಶದವನಂತಿರುವೆನು; ಮಾತನಾಡುವವನು ನನಗೆ ಪರದೇಶಿಯವನಂತಿರುತ್ತಾನೆ.
|
12. ಹಾಗೆಯೇ ನೀವು ಆತ್ಮೀಕವಾದ ವರಗಳಿಗಾಗಿ ಅತ್ಯಾಸಕ್ತಿಯುಳ್ಳವರಾಗಿರುವುದರಿಂದ ಸಭೆಗೆ ಹೆಚ್ಚಿನ ಅಭಿವೃದ್ಧಿ ಉಂಟಾಗುವ ಹಾಗೆ ತವಕಪಡಿರಿ.
|
14. ಯಾಕೆಂದರೆ ನಾನು ಅನ್ಯಭಾಷೆಯಲ್ಲಿ ದೇವರನ್ನು ಪ್ರಾರ್ಥಿಸಿದರೆ ನನ್ನಾತ್ಮವು ಪ್ರಾರ್ಥಿಸುತ್ತಿರುತ್ತದೆ. ಆದರೆ ನನ್ನ ಬುದ್ಧಿಯು ನಿಷ್ಫಲವಾಗಿರುವುದು.
|
15. ಆದ್ದರಿಂದ ನಾನಾದರೋ ಆತ್ಮನಿಂದಲೂ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು; * ಎಫೆ 5:19; ಕೊಲೊ 3:16 ಆತ್ಮನಿಂದ ಹಾಡುವೆನು, † ಕೀರ್ತ 47:7 ಬುದ್ಧಿಯಿಂದಲೂ ಹಾಡುವೆನು.
|
16. ನೀನು ಆತ್ಮನಿಂದ ಮಾತ್ರ ದೇವರ ಸ್ತೋತ್ರ ಮಾಡಿದರೆ ನೀನು ಹೇಳಿದ್ದು ತಿಳಿಯದೆ ಇರುವ ಇನ್ನೊಬ್ಬನು ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು ‡ 2 ಪೂರ್ವ 16:36; ನೆಹೆ 8:6; ಕೀರ್ತ 106:48; ಪ್ರಕ 5:14 “ಆಮೆನ್” ಎಂದು ಹೇಗೆ ಹೇಳಬಲ್ಲನು? ನೀನು ಮಾತನಾಡಿದು ಅವನಿಗೆ ತಿಳಿಯುವುದಿಲ್ಲವಲ್ಲಾ?
|
19. ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ ಇತರರಿಗೆ ಉಪದೇಶಮಾಡುವುದು ನನಗೆ ಉತ್ತಮವೆನಿಸುತ್ತದೆ.
|
20. ಸಹೋದರರೇ, ಬಾಲಕರಂತೆ § ಎಫೆ 4:14; ಇಬ್ರಿ. 5:12,13 ಆಲೋಚಿಸಬೇಡಿರಿ; * ಯೆಶಾ 28:9; ರೋಮಾ. 16:19; ಮತ್ತಾ 18:3 ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; † 1 ಕೊರಿ 2:6; ಎಫೆ 4:13 ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ. PEPS
|
21. ‡ ಯೆಶಾ 28:11,12 “ಅನ್ಯಭಾಷೆಯವರ ಮೂಲಕವಾಗಿಯೂ ಅನ್ಯದೇಶಸ್ಥರ ಬಾಯಿಂದಲೂ ನಾನು ಈ ಜನರ ಸಂಗಡ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವುದಿಲ್ಲವೆಂದು ಕರ್ತನು ಹೇಳುತ್ತಾನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆದಿದೆ.
|
22. ಆದ್ದರಿಂದ ಅನ್ಯಭಾಷೆಗಳನ್ನಾಡುವುದು ಯೇಸುವನ್ನು ನಂಬದವರಿಗೆ ಸೂಚನೆಯಾಗಿದೆಯೇ ಹೊರತು ಯೇಸುವನ್ನು ನಂಬುವವರಿಗೆ ಸೂಚನೆಯಲ್ಲವೆಂದು ನಾವು ತಿಳಿದುಕೊಳ್ಳಬೇಕು. ಆದರೆ ಪ್ರವಾದನೆಯು ಯೇಸುವನ್ನು ನಂಬದವರಿಗಾಗಿಯಲ್ಲ ನಂಬುವವರಿಗಾಗಿಯೇ ಇದೆ.
|
23. ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಸೇರಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ ಈ ಭಾಷೆಯನ್ನು ತಿಳಿಯದ ಬೇರೆಯವರು ಅಥವಾ ಕ್ರಿಸ್ತ ನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ, § ಅ. ಕೃ. 2:13 ನಿಮಗೆ ಹುಚ್ಚು ಹಿಡಿದಿದೆ ಎಂದು ಹೇಳುವುದಿಲ್ಲವೋ?
|
24. ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತ ನಂಬಿಕೆಯಿಲ್ಲದವನಾಗಲಿ, ಅಪರಿಚಿತನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು,
|
25. * ಇಬ್ರಿ. 4:12 ಅವನ ಹೃದಯದ ರಹಸ್ಯಗಳು ಬಯಲಾಗುವವು; ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, † ಯೆಶಾ 45:14; ಜೆಕ. 8:23 ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬುದನ್ನು ಘೋಷಿಸುವನು. PS
|
26. {ಸಭೆಯಲ್ಲಿ ಎಲ್ಲರೂ ಕ್ರಮದಿಂದ ನಡೆಯಬೇಕೆಂಬ ಬೋಧನೆ} PS ಹಾಗಾದರೇನು, ಸಹೋದರರೇ? ನೀವು ಸಭೆಯಲ್ಲಿ ಸೇರಿಬರುವಾಗ ಒಬ್ಬನು ಹಾಡುವುದೂ, ಒಬ್ಬನು ಉಪದೇಶಮಾಡುವುದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವುದೂ, ಇನ್ನೂ ಒಬ್ಬನು ಅನ್ಯಭಾಷೆಯನ್ನಾಡುವುದೂ, ಒಬ್ಬನು ಅದರ ಅರ್ಥವನ್ನು ಹೇಳುವುದುಂಟು. ನೀವು ಏನು ಮಾಡಿದರೂ ಸಭೆಯ ಭಕ್ತಿವೃದ್ಧಿಗಾಗಿಯೇ ಮಾಡಿರಿ.
|
28. ಮತ್ತು ಒಬ್ಬನು ಅದರ ಅರ್ಥವನ್ನು ಹೇಳಬೇಕು. ಅರ್ಥವನ್ನು ಹೇಳುವವನಿಲ್ಲದಿದ್ದರೆ ಅನ್ಯಭಾಷೆಗಳನ್ನಾಡುವವನು ಸಭೆಯಲ್ಲಿ ಸುಮ್ಮನಿರಲಿ; ತನ್ನೊಂದಿಗೂ ಮತ್ತು ದೇವರೊಂದಿಗೂ ಮಾತನಾಡಿಕೊಳ್ಳಲಿ.
|
34. ದೇವಜನರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ * 1 ತಿಮೊ. 2:11; 12 ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಬೇಕು; ಮಾತನಾಡಲು ಅವರಿಗೆ ಅವಕಾಶವಿಲ್ಲ; ಅವರು ಅಧೀನರಾಗಿರಬೇಕು; † ಆದಿ 3:16 ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿದೆಯಲ್ಲಾ.
|
35. ಅವರು ಏನಾದರೂ ತಿಳಿದು ಕೊಳ್ಳುವುದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಿಕೊಳ್ಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವುದು ಅಪಮಾನಕರವಾದದ್ದು.
|
37. ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ.
|
39. ಆದಕಾರಣ ನನ್ನ ಸಹೋದರರೇ, ‡ 1 ಕೊರಿ 12:31 ಪ್ರವಾದನಾವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ಅನ್ಯಭಾಷೆಗಳನ್ನಾಡುವವರಿಗೆ ಅಡ್ಡಿಮಾಡಬೇಡಿರಿ.
|