ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
1 ಕೊರಿಂಥದವರಿಗೆ
1. {#1ಸಭೆಯಲ್ಲಿ ನಡೆದಿದ್ದ ವಿಪರೀತ ಜಾರತ್ವವನ್ನು ಕುರಿತದ್ದು } [PS]ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. [* ಯಾಜ 18:8; ಧರ್ಮೋ 22:30; 27:20 ]ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.
2. ಹೀಗಿದ್ದರೂ [† 2 ಕೊರಿ 7:7 ]ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ.
3. [‡ 2 ಕೊಲೊ 2:5 ]ನಾನಂತೂ ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ, ಆತ್ಮದಿಂದ ಹತ್ತಿರದಲ್ಲಿದ್ದು ಈ ಕಾರ್ಯ ಮಾಡಿದವನನ್ನು ಕುರಿತು ಆಗಲೇ ನಿಮ್ಮ ಹತ್ತಿರವಿದ್ದವನಂತೆ ತೀರ್ಪು ಮಾಡಿದ್ದೇನೆ.
4. [§ 2 ಥೆಸ. 3:6; ಮತ್ತಾ 16:19; 18:18; ಯೋಹಾ 20:23; 2 ಕೊರಿ 13:10 ]ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು [* ಪೌಲನು ತನ್ನ ಯೋಚನೆ ಅಥವಾ ಅಭಿಪ್ರಾಯದ ಮೂಲಕ ಅವರೊಂದಿಗಿದ್ದಾನೆ. ]ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂ
5. ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ [† 1 ಕೊರಿ 1:8 ]ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ.
6. ನೀವು ಹೊಗಳಿಕೊಳ್ಳುವುದು ಒಳ್ಳೆಯದಲ್ಲ. [‡ ಗಲಾ. 5:9; 1 ಕೊರಿ 15:33 ]ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?
7. ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.
8. ಆದಕಾರಣ ನಾವು [§ ವಿಮೋ 12:15; 13:7; ಧರ್ಮೋ 16:3 ]ಹಳೇ ಹುಳಿಯನ್ನು [* ಮತ್ತಾ 16:6-12; ಮಾರ್ಕ 8:15; ಲೂಕ 12:1 ]ಅಂದರೆ ದುರ್ಮಾರ್ಗತ್ವ ಮತ್ತು ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೇ ಪ್ರಾಮಾಣಿಕತೆ ಹಾಗೂ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ. [PE]
9. [PS]ಜಾರರ ಸಹವಾಸ ಮಾಡಬಾರದೆಂದು ನನ್ನ ಪತ್ರಿಕೆಯಲ್ಲಿ ಬರೆದಿದ್ದೇನೆ.
10. ಅದು ಈ ಲೋಕದಲ್ಲಿರುವ ಜಾರರು, ಆಸೆಬುರುಕರು, ಸುಲುಕೊಳ್ಳುವವರು, ವಿಗ್ರಹಾರಾಧಕರು, ಮೊದಲಾದವರ ಸಹವಾಸವನ್ನು ಬಿಟ್ಟುಬಿಡಬೇಕೆಂಬ ಅರ್ಥದಲ್ಲಿ ಅಲ್ಲ; [† ಯೋಹಾ 17:15 ]ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು.
11. ಆದರೆ [‡ 2 ಥೆಸ. 3:6 ]ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.
12. ಸಭೆಯ ಹೊರಗಿರುವವರನ್ನು ತೀರ್ಪುಮಾಡುವುದಕ್ಕೆ ನನಗೇನಧಿಕಾರವಿದೆ? [§ 1 ಕೊರಿ 6:1-4 ]ಒಳಗಿನವರನ್ನು ತೀರ್ಪುಮಾಡುವವರು ನೀವೇ ಅಲ್ಲವೇ.
13. ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ [* ಧರ್ಮೋ 13:5; 17:7; 12:22-24 ]ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.” [PE]
ಒಟ್ಟು 16 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 16
1 2 3 4 5 6 7 8 9 10 11 12 13
14 15 16
ಸಭೆಯಲ್ಲಿ ನಡೆದಿದ್ದ ವಿಪರೀತ ಜಾರತ್ವವನ್ನು ಕುರಿತದ್ದು 1 ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. * ಯಾಜ 18:8; ಧರ್ಮೋ 22:30; 27:20 ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ. 2 ಹೀಗಿದ್ದರೂ 2 ಕೊರಿ 7:7 ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ. 3 2 ಕೊಲೊ 2:5 ನಾನಂತೂ ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ, ಆತ್ಮದಿಂದ ಹತ್ತಿರದಲ್ಲಿದ್ದು ಈ ಕಾರ್ಯ ಮಾಡಿದವನನ್ನು ಕುರಿತು ಆಗಲೇ ನಿಮ್ಮ ಹತ್ತಿರವಿದ್ದವನಂತೆ ತೀರ್ಪು ಮಾಡಿದ್ದೇನೆ. 4 § 2 ಥೆಸ. 3:6; ಮತ್ತಾ 16:19; 18:18; ಯೋಹಾ 20:23; 2 ಕೊರಿ 13:10 ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು * ಪೌಲನು ತನ್ನ ಯೋಚನೆ ಅಥವಾ ಅಭಿಪ್ರಾಯದ ಮೂಲಕ ಅವರೊಂದಿಗಿದ್ದಾನೆ. ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂ 5 ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ 1 ಕೊರಿ 1:8 ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ. 6 ನೀವು ಹೊಗಳಿಕೊಳ್ಳುವುದು ಒಳ್ಳೆಯದಲ್ಲ. ಗಲಾ. 5:9; 1 ಕೊರಿ 15:33 ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ? 7 ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ. 8 ಆದಕಾರಣ ನಾವು § ವಿಮೋ 12:15; 13:7; ಧರ್ಮೋ 16:3 ಹಳೇ ಹುಳಿಯನ್ನು * ಮತ್ತಾ 16:6-12; ಮಾರ್ಕ 8:15; ಲೂಕ 12:1 ಅಂದರೆ ದುರ್ಮಾರ್ಗತ್ವ ಮತ್ತು ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೇ ಪ್ರಾಮಾಣಿಕತೆ ಹಾಗೂ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ. 9 ಜಾರರ ಸಹವಾಸ ಮಾಡಬಾರದೆಂದು ನನ್ನ ಪತ್ರಿಕೆಯಲ್ಲಿ ಬರೆದಿದ್ದೇನೆ. 10 ಅದು ಈ ಲೋಕದಲ್ಲಿರುವ ಜಾರರು, ಆಸೆಬುರುಕರು, ಸುಲುಕೊಳ್ಳುವವರು, ವಿಗ್ರಹಾರಾಧಕರು, ಮೊದಲಾದವರ ಸಹವಾಸವನ್ನು ಬಿಟ್ಟುಬಿಡಬೇಕೆಂಬ ಅರ್ಥದಲ್ಲಿ ಅಲ್ಲ; ಯೋಹಾ 17:15 ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು. 11 ಆದರೆ 2 ಥೆಸ. 3:6 ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ. 12 ಸಭೆಯ ಹೊರಗಿರುವವರನ್ನು ತೀರ್ಪುಮಾಡುವುದಕ್ಕೆ ನನಗೇನಧಿಕಾರವಿದೆ? § 1 ಕೊರಿ 6:1-4 ಒಳಗಿನವರನ್ನು ತೀರ್ಪುಮಾಡುವವರು ನೀವೇ ಅಲ್ಲವೇ. 13 ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ * ಧರ್ಮೋ 13:5; 17:7; 12:22-24 ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”
ಒಟ್ಟು 16 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 16
1 2 3 4 5 6 7 8 9 10 11 12 13
14 15 16
×

Alert

×

Kannada Letters Keypad References