ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
1 ಯೋಹಾನನು
1. {#1ದೇವರ ಮಕ್ಕಳೂ ಮತ್ತು ಸೈತಾನನ ಮಕ್ಕಳನ್ನು ಕುರಿತದ್ದು } [PS]ಇಗೋ, ನಾವು [* ಯೋಹಾ 1:12: ]ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು [† 1 ಯೋಹಾ 4:10; 3:16: ]ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.
2. ಪ್ರಿಯರೇ, ನಾವು [‡ ಯೋಹಾ 1:12; ರೋಮಾ. 8:15; ಗಲಾ. 3:26; ಎಫೆ 1:5 ]ಈಗ ದೇವರ ಮಕ್ಕಳಾಗಿದ್ದೇವೆ. [§ ರೋಮಾ. 8:18; 2 ಕೊರಿ 4:17: ]ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ [* ಮೂಲ: ಆತನು, ಅಥವಾ ಅದು; 1 ಯೋಹಾ 2:28: ]ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು [† ಅಥವಾ, ದೇವರ. ರೋಮಾ. 8:29; 2 ಕೊರಿ 3:18; 4:11; ಫಿಲಿ. 3:21; 2 ಪೇತ್ರ. 1:4: ]ಆತನ ಹಾಗಿರುವೆವೆಂದು ಬಲ್ಲೆವು. [‡ ಯೋಹಾ 17:24; 1 ಕೊರಿ 13:12; ಪ್ರಕ 22:4: ]ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.
3. [§ ರೋಮಾ. 15:12: ]ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ. [PE]
4. [PS]ಪಾಪಮಾಡುವ ಪ್ರತಿಯೊಬ್ಬನೂ ಅಧರ್ಮವನ್ನು ಮಾಡುವವನಾಗಿದ್ದಾನೆ; [* 1 ಯೋಹಾ 5:17; ರೋಮಾ. 4:15: ]ಪಾಪವು ಅಧರ್ಮವೇ.
5. [† ಯೋಹಾ 1:29: ]ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ [‡ ಇಬ್ರಿ. 9:26; 1 ಯೋಹಾ 1:2: ]ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು [§ 1 ಪೇತ್ರ. 2:22: ]ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.
6. ಆತನಲ್ಲಿ ನೆಲೆಗೊಂಡಿರುವವನು ಪಾಪವನ್ನುಮಾಡುವುದಿಲ್ಲ; [* 1 ಯೋಹಾ 2:4; 4:8; 3 ಯೋಹಾ 11: ]ಪಾಪಮಾಡುವವನು ಆತನನ್ನು ನೋಡಿಲ್ಲ, ತಿಳಿದೂ ಇಲ್ಲ;
7. ಪ್ರಿಯರಾದ ಮಕ್ಕಳೇ, ಯಾರೂ [† 1 ಯೋಹಾ 2:26: ]ನಿಮ್ಮನ್ನು ಮೋಸಗೊಳಿಸದಿರಲಿ. [‡ 1 ಯೋಹಾ 2:29: ]ಕ್ರಿಸ್ತನು ಹೇಗೆ ನೀತಿವಂತನಾಗಿದ್ದನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
8. [§ ಮತ್ತಾ 13:38; ಯೋಹಾ 8:44: ]ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ [* ಇಬ್ರಿ. 2:14; ಆದಿ 3:15; ಲೂಕ 10:18; ಯೋಹಾ 16:11: ]ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು. [PE]
9. [PS] [† 1 ಯೋಹಾ 5:18: ]ದೇವರಿಂದ ಹುಟ್ಟಿದವನು ಪಾಪಮಾಡುವುದಿಲ್ಲ. ಏಕೆಂದರೆ ದೇವರ [‡ ಮೂಲ: ಬೀಜವು. ]ಸ್ವಭಾವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡಲಾರನು.
10. ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ [§ 1 ಯೋಹಾ 4:8, 20, 21: ]ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.
11. [* ಯೋಹಾ 13:34; 1 ಯೋಹಾ 2:8: ]ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ [† 1 ಯೋಹಾ 1:5; 2:24: ]ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ.
12. ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ [‡ ಆದಿ 4:4, 8; ಇಬ್ರಿ. 11:4; ಯೂದ. 11: ]ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? [§ ಕೀರ್ತ 38:20; ಜ್ಞಾ. 29:10: ]ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ. [PE]
13. {#1ನಿತ್ಯಜೀವದಲ್ಲಿ ಸೇರಿರುವವರಿಗೆ ಪರರ ಪ್ರೀತಿಯಿರುವುದು } [PS]ನನ್ನ ಸಹೋದರರೇ, [* ಯೋಹಾ 15:18; 17:14: ]ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.
14. ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ [† ಯೋಹಾ 5:24: ]ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
15. [‡ ಮತ್ತಾ 5:21, 22: ]ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು [§ ಗಲಾ. 5:21; ಪ್ರಕ 21:8: ]ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.
16. [* ಯೋಹಾ 10:11; 15:13; ರೋಮಾ. 5:7, 8; ಎಫೆ 5:2; ಮತ್ತಾ 20:28; 1 ತಿಮೊ. 2:6: ]ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. [† ಫಿಲಿ. 2:17: ]ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
17. ಆದರೆ [‡ ಯಾಕೋಬ 2:15, 16: ]ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ [§ ಧರ್ಮೋ 15:7. 1 ಯೋಹಾ 4:20: ]ಕನಿಕರಪಡದೆ ಬಿಟ್ಟರೆ [* ಯೋಹಾ 4:20: ]ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?
18. ನನ್ನ ಪ್ರಿಯ ಮಕ್ಕಳೇ, ನೀವು [† ಯೆಹೆ. 33:31; ಎಫೆ 4:15: ]ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, [‡ ಯಾಕೋಬ 2:14-16: ]ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು. [PE]
19. {#1ಯೇಸುವಿನಲ್ಲಿ ನಂಬಿಕೆಯಿಟ್ಟು ಪ್ರೀತಿಯಲ್ಲಿ ನಡೆದರೆ ಮನಸ್ಸಿಗೆ ಸಮಾಧಾನ ಉಂಟಾಗುವುದಲ್ಲದೆ ನಾವು ಮಾಡುವ ಪ್ರಾರ್ಥನೆ ಸಫಲವಾಗುವುದು } [PS]ನಾವು ಸತ್ಯಕ್ಕೆ ಸೇರಿದವರೆಂಬುದು ಇದರಿಂದಲೇ ನಮಗೆ ತಿಳಿಯುತ್ತದೆ, ನಮ್ಮ ಹೃದಯವು ದೇವರ ಸಮಕ್ಷಮದಲ್ಲಿ ದೋಷರಹಿತವಾಗಿರುತ್ತದೆ.
20. ಏಕೆಂದರೆ ನಮ್ಮ ಹೃದಯವು ಯಾವ ವಿಷಯದಲ್ಲಾದರು ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೆ, ದೇವರು ನಮ್ಮ ಹೃದಯವನ್ನು ಬಲ್ಲವನಾಗಿರುವುದರಿಂದ ನಮ್ಮ ಹೃದಯವನ್ನು ಆತನಲ್ಲಿ ದೃಢಪಡಿಸಬಹುದು.
21. ಪ್ರಿಯರೇ, [§ 1 ಕೊರಿ 4:4: ]ನಮ್ಮ ಹೃದಯವು ನಮ್ಮನ್ನು ದೋಷಿಗಳೆಂದು ಖಂಡಿಸಿ ನಡೆದರೆ ದೇವರ ಸನ್ನಿಧಿಯಲ್ಲಿ ನಮಗೆ ಭರವಸೆ ದೊರೆಯುತ್ತದೆ.
22. ಆತನ ಆಜ್ಞೆಗಳನ್ನು ಕೈಕೊಂಡು [* ಯೋಹಾ 8:29: ]ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು [† ಮತ್ತಾ 7:7; 18:19; 21:22; ಮಾರ್ಕ 11:24; ಯೋಹಾ 14:13; 15:7, 16; 16:23, 24; ಯಾಕೋಬ 1:5, 6; 1 ಯೋಹಾ 5:14, 15: ]ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.
23. ದೇವರ ಆಜ್ಞೆ ಯಾವುದೆಂದರೆ [‡ ಯೋಹಾ 6:29: ]ನಾವು ಆತನ ಮಗನಾದ ಯೇಸು [§ 1 ಯೋಹಾ 2:8; 3:11: ]ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.
24. ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು [* ಯೋಹಾ 6:56; 14:20; 15:4, 5; 17:21: ]ಆತನಲ್ಲಿ ನೆಲೆಗೊಂಡಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಗೊಂಡಿರುತ್ತಾನೆ. ಆತನು ಅವನಲ್ಲಿ ನೆಲೆಗೊಂಡಿರುತ್ತಾನೆ. [† 1 ಯೋಹಾ 4:13; ರೋಮಾ. 8:9: ]ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿರುವ ಆತ್ಮನಿಂದ ನಾವು ಬಲ್ಲವರಾಗಿದ್ದೇವೆ. [PE]
ಒಟ್ಟು 5 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 5
1 2 3 4 5
ದೇವರ ಮಕ್ಕಳೂ ಮತ್ತು ಸೈತಾನನ ಮಕ್ಕಳನ್ನು ಕುರಿತದ್ದು 1 ಇಗೋ, ನಾವು * ಯೋಹಾ 1:12: ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು † 1 ಯೋಹಾ 4:10; 3:16: ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ. 2 ಪ್ರಿಯರೇ, ನಾವು ಯೋಹಾ 1:12; ರೋಮಾ. 8:15; ಗಲಾ. 3:26; ಎಫೆ 1:5 ಈಗ ದೇವರ ಮಕ್ಕಳಾಗಿದ್ದೇವೆ. § ರೋಮಾ. 8:18; 2 ಕೊರಿ 4:17: ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ * ಮೂಲ: ಆತನು, ಅಥವಾ ಅದು; 1 ಯೋಹಾ 2:28: ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು † ಅಥವಾ, ದೇವರ. ರೋಮಾ. 8:29; 2 ಕೊರಿ 3:18; 4:11; ಫಿಲಿ. 3:21; 2 ಪೇತ್ರ. 1:4: ಆತನ ಹಾಗಿರುವೆವೆಂದು ಬಲ್ಲೆವು. ಯೋಹಾ 17:24; 1 ಕೊರಿ 13:12; ಪ್ರಕ 22:4: ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು. 3 § ರೋಮಾ. 15:12: ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ. 4 ಪಾಪಮಾಡುವ ಪ್ರತಿಯೊಬ್ಬನೂ ಅಧರ್ಮವನ್ನು ಮಾಡುವವನಾಗಿದ್ದಾನೆ; * 1 ಯೋಹಾ 5:17; ರೋಮಾ. 4:15: ಪಾಪವು ಅಧರ್ಮವೇ. 5 ಯೋಹಾ 1:29: ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ‡ ಇಬ್ರಿ. 9:26; 1 ಯೋಹಾ 1:2: ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು § 1 ಪೇತ್ರ. 2:22: ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು. 6 ಆತನಲ್ಲಿ ನೆಲೆಗೊಂಡಿರುವವನು ಪಾಪವನ್ನುಮಾಡುವುದಿಲ್ಲ; * 1 ಯೋಹಾ 2:4; 4:8; 3 ಯೋಹಾ 11: ಪಾಪಮಾಡುವವನು ಆತನನ್ನು ನೋಡಿಲ್ಲ, ತಿಳಿದೂ ಇಲ್ಲ; 7 ಪ್ರಿಯರಾದ ಮಕ್ಕಳೇ, ಯಾರೂ 1 ಯೋಹಾ 2:26: ನಿಮ್ಮನ್ನು ಮೋಸಗೊಳಿಸದಿರಲಿ. ‡ 1 ಯೋಹಾ 2:29: ಕ್ರಿಸ್ತನು ಹೇಗೆ ನೀತಿವಂತನಾಗಿದ್ದನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ. 8 § ಮತ್ತಾ 13:38; ಯೋಹಾ 8:44: ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ * ಇಬ್ರಿ. 2:14; ಆದಿ 3:15; ಲೂಕ 10:18; ಯೋಹಾ 16:11: ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು. 9 1 ಯೋಹಾ 5:18: ದೇವರಿಂದ ಹುಟ್ಟಿದವನು ಪಾಪಮಾಡುವುದಿಲ್ಲ. ಏಕೆಂದರೆ ದೇವರ ‡ ಮೂಲ: ಬೀಜವು. ಸ್ವಭಾವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡಲಾರನು. 10 ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ § 1 ಯೋಹಾ 4:8, 20, 21: ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ. 11 * ಯೋಹಾ 13:34; 1 ಯೋಹಾ 2:8: ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ † 1 ಯೋಹಾ 1:5; 2:24: ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ. 12 ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಆದಿ 4:4, 8; ಇಬ್ರಿ. 11:4; ಯೂದ. 11: ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? § ಕೀರ್ತ 38:20; ಜ್ಞಾ. 29:10: ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ. ನಿತ್ಯಜೀವದಲ್ಲಿ ಸೇರಿರುವವರಿಗೆ ಪರರ ಪ್ರೀತಿಯಿರುವುದು 13 ನನ್ನ ಸಹೋದರರೇ, * ಯೋಹಾ 15:18; 17:14: ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ. 14 ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಯೋಹಾ 5:24: ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ. 15 ಮತ್ತಾ 5:21, 22: ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು § ಗಲಾ. 5:21; ಪ್ರಕ 21:8: ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ. 16 * ಯೋಹಾ 10:11; 15:13; ರೋಮಾ. 5:7, 8; ಎಫೆ 5:2; ಮತ್ತಾ 20:28; 1 ತಿಮೊ. 2:6: ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. † ಫಿಲಿ. 2:17: ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. 1 7 ಆದರೆ ಯಾಕೋಬ 2:15, 16: ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ [§ ಧರ್ಮೋ 15: 7 1 ಯೋಹಾ 4:20: ]ಕನಿಕರಪಡದೆ ಬಿಟ್ಟರೆ * ಯೋಹಾ 4:20: ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ? 18 ನನ್ನ ಪ್ರಿಯ ಮಕ್ಕಳೇ, ನೀವು ಯೆಹೆ. 33:31; ಎಫೆ 4:15: ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ‡ ಯಾಕೋಬ 2:14-16: ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು. ಯೇಸುವಿನಲ್ಲಿ ನಂಬಿಕೆಯಿಟ್ಟು ಪ್ರೀತಿಯಲ್ಲಿ ನಡೆದರೆ ಮನಸ್ಸಿಗೆ ಸಮಾಧಾನ ಉಂಟಾಗುವುದಲ್ಲದೆ ನಾವು ಮಾಡುವ ಪ್ರಾರ್ಥನೆ ಸಫಲವಾಗುವುದು 19 ನಾವು ಸತ್ಯಕ್ಕೆ ಸೇರಿದವರೆಂಬುದು ಇದರಿಂದಲೇ ನಮಗೆ ತಿಳಿಯುತ್ತದೆ, ನಮ್ಮ ಹೃದಯವು ದೇವರ ಸಮಕ್ಷಮದಲ್ಲಿ ದೋಷರಹಿತವಾಗಿರುತ್ತದೆ. 20 ಏಕೆಂದರೆ ನಮ್ಮ ಹೃದಯವು ಯಾವ ವಿಷಯದಲ್ಲಾದರು ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೆ, ದೇವರು ನಮ್ಮ ಹೃದಯವನ್ನು ಬಲ್ಲವನಾಗಿರುವುದರಿಂದ ನಮ್ಮ ಹೃದಯವನ್ನು ಆತನಲ್ಲಿ ದೃಢಪಡಿಸಬಹುದು. 21 ಪ್ರಿಯರೇ, § 1 ಕೊರಿ 4:4: ನಮ್ಮ ಹೃದಯವು ನಮ್ಮನ್ನು ದೋಷಿಗಳೆಂದು ಖಂಡಿಸಿ ನಡೆದರೆ ದೇವರ ಸನ್ನಿಧಿಯಲ್ಲಿ ನಮಗೆ ಭರವಸೆ ದೊರೆಯುತ್ತದೆ. 22 ಆತನ ಆಜ್ಞೆಗಳನ್ನು ಕೈಕೊಂಡು * ಯೋಹಾ 8:29: ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು † ಮತ್ತಾ 7:7; 18:19; 21:22; ಮಾರ್ಕ 11:24; ಯೋಹಾ 14:13; 15:7, 16; 16:23, 24; ಯಾಕೋಬ 1:5, 6; 1 ಯೋಹಾ 5:14, 15: ಏನು ಬೇಡಿಕೊಂಡರೂ ಆತನಿಂದ ಹೊಂದುವೆವು. 23 ದೇವರ ಆಜ್ಞೆ ಯಾವುದೆಂದರೆ ಯೋಹಾ 6:29: ನಾವು ಆತನ ಮಗನಾದ ಯೇಸು § 1 ಯೋಹಾ 2:8; 3:11: ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ. 24 ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು * ಯೋಹಾ 6:56; 14:20; 15:4, 5; 17:21: ಆತನಲ್ಲಿ ನೆಲೆಗೊಂಡಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಗೊಂಡಿರುತ್ತಾನೆ. ಆತನು ಅವನಲ್ಲಿ ನೆಲೆಗೊಂಡಿರುತ್ತಾನೆ. † 1 ಯೋಹಾ 4:13; ರೋಮಾ. 8:9: ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿರುವ ಆತ್ಮನಿಂದ ನಾವು ಬಲ್ಲವರಾಗಿದ್ದೇವೆ.
ಒಟ್ಟು 5 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 5
1 2 3 4 5
×

Alert

×

Kannada Letters Keypad References