1. {#1ಆತ್ಮಪ್ರೇರಿತ ನುಡಿಗಳು ಸತ್ಯವೋ ಅಸತ್ಯವೋ ಎಂದು ತಿಳಿದುಕೊಳ್ಳುವುದಕ್ಕಾಗಿ ಅವುಗಳನ್ನು ಪರೀಕ್ಷಿಸಿ ನೋಡಬೇಕು } [PS]ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
2. ದೇವರಾತ್ಮ ಪ್ರೇರಿತವಾದ ನುಡಿಗಳು ಎಂದು ತಿಳಿದುಕೊಳ್ಳುವುದು ಹೇಗೆಂದರೆ, ಯೇಸು ಕ್ರಿಸ್ತನು ಮನುಷ್ಯ ರೂಪವನ್ನು ಧರಿಸಿಕೊಂಡು ಬಂದನು ಎಂದು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾಗಿ ಬಂದದ್ದಾಗಿದೆ.
3. ಯೇಸುಕ್ರಿಸ್ತನನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ [* ಅಥವಾ, ಪ್ರೇರಿತವಾದದ್ದಲ್ಲ. ]ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುತ್ತದೆಂಬುದನ್ನು ನೀವು ಕೇಳಿದ್ದೀರಲ್ಲಾ. ಅದು ಈಗಾಗಲೇ ಲೋಕದಲ್ಲಿ ಇದೆ. [PE]
4. [PS]ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.
5. ಅವರು ಲೋಕಸಂಬಂಧಿಗಳಾಗಿದ್ದಾರೆ. ಈ ಕಾರಣದಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
6. ನಾವಂತೂ ದೇವರಿಗೆ ಸಂಬಂಧಪಟ್ಟವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸಂಬಂಧಪಡದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದರಿಂದಲೇ ಸತ್ಯವನ್ನು ಬೋಧಿಸುವ ಆತ್ಮ ಯಾವುದು ಮತ್ತು ಸುಳ್ಳನ್ನು ಬೋಧಿಸುವ ಆತ್ಮ ಯಾವುದು ಎಂದು ನಾವು ತಿಳಿದುಕೊಳ್ಳುತ್ತೇವೆ. [PE]
7. {#1ದೇವರಿಂದ ಹುಟ್ಟಿದವರಲ್ಲಿ ಪ್ರೀತಿಸ್ವಭಾವವೇ ವಿಶೇಷ } [PS]ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.
8. ಪ್ರೀತಿ ಇಲ್ಲದವನು ದೇವರನ್ನು ಬಲ್ಲವನಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪನಾಗಿದ್ದಾನೆ.
9. ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.
10. ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ. [PE]
11. [PS]ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವೂ ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.
12. ದೇವರನ್ನು ಯಾರೂ ಎಂದೂ ನೋಡಿಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನ ಪ್ರೀತಿಯು ನಮ್ಮಲ್ಲಿ ಪರಿಪೂರ್ಣಗೊಂಡಿರುತ್ತದೆ.
13. ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆ ಮತ್ತು ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ತಿಳಿದುಕೊಳ್ಳುತ್ತೇವೆ.
14. ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ.
15. ಯೇಸುಕ್ರಿಸ್ತನು ದೇವರ ಮಗನಾಗಿದ್ದಾನೆಂದು ಯಾರು ಒಪ್ಪಿಕೊಳ್ಳುತ್ತಾರೋ ಅವರಲ್ಲಿ ದೇವರು ನೆಲೆಗೊಂಡಿರುತ್ತಾನೆ, ಹಾಗೂ ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
16. ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
17. ನ್ಯಾಯತೀರ್ಪಿನ ದಿನದಲ್ಲಿ ನಾವು ಧೈರ್ಯದಿಂದಿರುವುದಕ್ಕಾಗಿ ಆತನ ಪ್ರೀತಿಯು ನಮ್ಮೊಳಗೆ ಪೂರ್ಣಗೊಂಡಿದೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.
18. ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ [† ಶಿಕ್ಷೆಯ ಭಯವಿರುತ್ತದೆ. ]ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. [‡ ಅಥವಾ, ಭಯಪಡುವವನು ]ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.
19. ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
20. ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?
21. ದೇವರನ್ನು ಪ್ರೀತಿಸುವವನು, ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ. [PE]