5. ನಾತಾನನ ಮಗನಾದ ಅಜರ್ಯನು ದೇಶಾಧಿಪತಿಗಳ ಮುಖ್ಯಸ್ಥನು. ನಾತಾನನ ಮಗನಾದ ಜಾಬೂದನು ಯಾಜಕನೂ ಹಾಗು ಅರಸನ ಮಿತ್ರನೂ ಆಗಿದ್ದನು.
|
7. ಸೊಲೊಮೋನನು ಎಲ್ಲಾ ಇಸ್ರಾಯೇಲರ ಮೇಲ್ವಿಚಾರಣೆಗಾಗಿ ಹನ್ನೆರಡು ಕಾರ್ಯನಿರ್ವಾಹಕರನ್ನು ನೇಮಿಸಿದನು. ಅವರಲ್ಲಿ ಪ್ರತಿಯೊಬ್ಬನು ಒಂದೊಂದು ತಿಂಗಳು ಅರಸನಿಗೂ ಮತ್ತು ಅವನ ಮನೆಯವರಿಗೂ ಬೇಕಾದ ಆಹಾರ ಪದಾರ್ಥಗಳನ್ನು ಪ್ರತಿವರ್ಷವೂ ಒದಗಿಸಿಕೊಡಬೇಕಾಗಿತ್ತು.
|
12. ತಾಣಕ್ ಮತ್ತು ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಕೆಳಗಣಭಾಗಗಳೂ, ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್ ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಹೀಲೂದನ ಮಗನಾದ ಬಾಣಾ ಅಧಿಪತಿಯಾಗಿದ್ದನು.
|
13. ರಾಮೋತ್ ಗಿಲ್ಯಾದಿನಲ್ಲಿದ್ದ ಗೆಬೇರನ ಮಗ, ಅವನು ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದನು.
|
19. ಅಮೋರಿಯರ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ರಾಜ್ಯವಾಗಿದ್ದ ಗಿಲ್ಯಾದ್ ಪ್ರದೇಶಕ್ಕೆಲ್ಲಾ ಒಬ್ಬನೇ ಅಧಿಪತಿಯಾಗಿದ್ದನು ಅವನು ಊರಿಯನ ಮಗನಾದ ಗೆಬೆರ್ ಎಂಬುವವನು. PS
|
20. {ಸೊಲೊಮೋನನ ವೈಭವವೂ ಜ್ಞಾನವೂ} PS ಇಸ್ರಾಯೇಲರು ಮತ್ತು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯರಾಗಿ ಅಭಿವೃದ್ಧಿಯಾದರು. ಅವರು ಅನ್ನಪಾನಗಳನ್ನು ಮಾಡುತ್ತಾ ತೃಪ್ತರಾಗಿ ಸಂತೋಷದಿಂದಿದ್ದರು.
|
21. ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು. PEPS
|
22. ಸೊಲೊಮೋನನ ಅರಮನೆಗೆ ಪ್ರತಿದಿನ ಬೇಕಾಗುವ ಆಹಾರಪದಾರ್ಥಗಳು, ಮೂವತ್ತು ಕೋರ್ ಗೋದಿಯ ಹಿಟ್ಟು, ಅರುವತ್ತು ಕೋರ್ ಜವೆಗೋದಿಯ ಹಿಟ್ಟು,
|
23. ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಹುಲ್ಲುಗಾವಲಿನಲ್ಲಿರುವ ಎತ್ತುಗಳು, ನೂರು ಕುರಿಗಳು ಇವುಗಳಲ್ಲದೆ ಕಡವೆ, ಜಿಂಕೆ, ಸಾರಂಗ, ಕೊಬ್ಬಿದ ಕೋಳಿಗಳು ಇವುಗಳೇ.
|
24. ಅವನು ಯೂಫ್ರೆಟಿಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ಅರಸರಿಗೂ ದೊರೆಯಾಗಿದ್ದನು. ಅವನು ಸುತ್ತಣ ರಾಜರೊಡನೆ ಸಮಾಧಾನದಿಂದಿದ್ದನು.
|
25. ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದ್ಯರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು.
|
26. ಸೊಲೊಮೋನನ ಲಾಯಗಳಲ್ಲಿ ನಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು. ಅವನಿಗೆ ಹನ್ನೆರಡು ಸಾವಿರ ಕುದುರೆಸವಾರರಿದ್ದರು.
|
27. ಮೇಲೆ ಕಾಣಿಸಿರುವ ಕಾರ್ಯನಿರ್ವಾಹಕರು ತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೂ, ಅವನ ಪಂಕ್ತಿಯಲ್ಲಿ ಊಟಕ್ಕೆ ಕುಳಿತುಕೊಳ್ಳುವವರೆಲ್ಲರಿಗೂ ಬೇಕಾಗುವ ಆಹಾರ ಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡುತ್ತಿದ್ದರು.
|
28. ಇದಲ್ಲದೆ ಅವರು ರಥಾಶ್ವಗಳಿಗಾಗಿಯೂ ಮತ್ತು ಸವಾರಿಕುದುರೆಗಳಿಗಾಗಿಯೂ ನೇಮಕವಾದಷ್ಟು ಜವೆಗೋದಿಯನ್ನು, ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೇ ತಂದೊಪ್ಪಿಸುತ್ತಿದ್ದರು. PEPS
|
29. ದೇವರು ಸೊಲೊಮೋನನಿಗೆ ವಿಶೇಷವಾದ ಜ್ಞಾನ, ವಿವೇಕಗಳನ್ನೂ, ಸಮುದ್ರ ತೀರದ ಮರಳಿನಷ್ಟು ಅಪರಿಮಿತವಾದ ಮನೋವಿಶಾಲತೆಯನ್ನೂ ಅನುಗ್ರಹಿಸಿದನು.
|
31. ಅವನು ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಣ ಎಲ್ಲಾ ಜನಾಂಗಗಳಲ್ಲಿ ಅವನ ಹೆಸರು ಸುಪ್ರಸಿದ್ಧವಾಯಿತು.
|
33. ಅವನು ಲೆಬನೋನಿನ ದೇವದಾರು ವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ, ಎಲ್ಲಾ ಪಶುಪಕ್ಷಿ, ಜಲಚರಗಳು, ಕ್ರಿಮಿಕೀಟಗಳನ್ನೂ ಕುರಿತು ಪ್ರಸ್ತಾಪಿಸ ಬಲ್ಲವನಾಗಿದ್ದನು.
|
34. ಎಲ್ಲಾ ಜನಾಂಗಗಳಲ್ಲಿಯೂ ಸೊಲೊಮೋನನ ಜ್ಞಾನದ ವಿಶೇಷತೆಯನ್ನು ಕುರಿತು ಕೇಳಿದ ಅನೇಕ ರಾಜರೂ ಮತ್ತು ವಿದ್ವಾಂಸರು ಅವನ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಬರುತ್ತಿದ್ದರು. PE
|