ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
1 ಅರಸುಗಳು
1. {ದೇವಾಲಯವನ್ನು ಕಟ್ಟುವುದಕ್ಕೆ ಸಿದ್ಧತೆ} [PS] ದಾವೀದನ ಜೀವಮಾನದಲ್ಲೆಲ್ಲಾ ಅವನ ಮಿತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ಅವನ ತಂದೆಯ ನಂತರ ಅಭಿಷೇಕಿಸಲ್ಪಟ್ಟನು ಎಂಬುದಾಗಿ ಕೇಳಿದಾಗ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.
2. ಅನಂತರ ಸೊಲೊಮೋನನು ದೂತರ ಮುಖಾಂತರವಾಗಿ ಹೀರಾಮನಿಗೆ,
3. “ಯೆಹೋವನ ಅನುಗ್ರಹದಿಂದ ನಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ತನ್ನ ಸುತ್ತಲೂ ಯುದ್ಧಗಳನ್ನು ನಡೆಸಬೇಕಾಯಿತು. ಆದುದರಿಂದ ಅವನು ತನ್ನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೇ.
4. ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ, ಆತನ ದಯೆಯಿಂದ ಆಪತ್ತು ನನ್ನಿಂದ ದೂರವಾಗಿದೆ.
5. ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ’ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಅಲಯವನ್ನು ಕಟ್ಟಬೇಕೆಂದಿದ್ದೇನೆ,
6. ಆದುದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು, ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲಾ” ಎಂದು ಹೇಳಿದನು. [PE][PS]
7. ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು, “ಈ ಮಹಾ ಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ” ಎಂದು ನುಡಿದನು.
8. ಇದಲ್ಲದೆ ಅವನು ಸೊಲೊಮೋನನಿಗೆ, “ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು. ದೇವದಾರು ವೃಕ್ಷಗಳನ್ನೂ, ತುರಾಯಿ ಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.
9. ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ, ಸಮುದ್ರ ಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ, ಅಲ್ಲಿ ಬಿಚ್ಚಿಸಿಕೊಡುವೆನು. ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರ ಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ” ಎಂದು ಹೇಳಿ ಕಳುಹಿಸಿದನು.
10. ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮರಗಳನ್ನೂ ಮತ್ತು ತುರಾಯಿ ಮರಗಳನ್ನೂ ಕೊಡುತ್ತಿದ್ದನು.
11. ಸೊಲೊಮೋನನಾದರೋ ಪ್ರತಿ ವರ್ಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ, ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.
12. ಯೆಹೋವನು ತಾನು ವಾಗ್ದಾನ ಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಸೊಲೊಮೋನನಿಗೂ ಹೀರಾಮನಿಗೂ ಒಳ್ಳೆಯ ಸಂಬಂಧವಿತ್ತು, ಅವರಿಬ್ಬರು ಪರಸ್ಪರವಾಗಿ ಒಡಂಬಡಿಕೆ ಮಾಡಿಕೊಂಡಿದ್ದರು. [PE][PS]
13. ಅರಸನಾದ ಸೊಲೊಮೋನನು ಎಲ್ಲಾ ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಜನರನ್ನು ಬಲವಂತವಾಗಿ ಕರೆತಂದನು.
14. ಅವರಲ್ಲಿ ತಿಂಗಳಿಗೆ ಹತ್ತು ಸಾವಿರ ಜನರಂತೆ ಪ್ರತಿತಿಂಗಳು ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು.
15. ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಜನರು ಹೊರೆ ಹೊರುವವರೂ, ಎಂಭತ್ತು ಸಾವಿರ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು.
16. ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳನ್ನು ನೇಮಿಸಿದನು.
17. ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು ಸೊಲೊಮೋನನ ಅಪ್ಪಣೆಯಂತೆ ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೆತ್ತುತ್ತಿದ್ದರು.
18. ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಹಾಗು ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕಾಗಿ ಬೇಕಾಗುವ ಕಲ್ಲು ಮತ್ತು ಮರಗಳನ್ನು ಸಿದ್ಧಪಡಿಸಿದರೂ ಇವರೇ. [PE]

ಟಿಪ್ಪಣಿಗಳು

No Verse Added

ಒಟ್ಟು 22 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 22
1 ಅರಸುಗಳು 5:40
ದೇವಾಲಯವನ್ನು ಕಟ್ಟುವುದಕ್ಕೆ ಸಿದ್ಧತೆ 1 ದಾವೀದನ ಜೀವಮಾನದಲ್ಲೆಲ್ಲಾ ಅವನ ಮಿತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ಅವನ ತಂದೆಯ ನಂತರ ಅಭಿಷೇಕಿಸಲ್ಪಟ್ಟನು ಎಂಬುದಾಗಿ ಕೇಳಿದಾಗ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು. 2 ಅನಂತರ ಸೊಲೊಮೋನನು ದೂತರ ಮುಖಾಂತರವಾಗಿ ಹೀರಾಮನಿಗೆ, 3 “ಯೆಹೋವನ ಅನುಗ್ರಹದಿಂದ ನಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ತನ್ನ ಸುತ್ತಲೂ ಯುದ್ಧಗಳನ್ನು ನಡೆಸಬೇಕಾಯಿತು. ಆದುದರಿಂದ ಅವನು ತನ್ನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೇ. 4 ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ, ಆತನ ದಯೆಯಿಂದ ಆಪತ್ತು ನನ್ನಿಂದ ದೂರವಾಗಿದೆ. 5 ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ’ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಅಲಯವನ್ನು ಕಟ್ಟಬೇಕೆಂದಿದ್ದೇನೆ, 6 ಆದುದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು, ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲಾ” ಎಂದು ಹೇಳಿದನು. 7 ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು, “ಈ ಮಹಾ ಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ” ಎಂದು ನುಡಿದನು. 8 ಇದಲ್ಲದೆ ಅವನು ಸೊಲೊಮೋನನಿಗೆ, “ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು. ದೇವದಾರು ವೃಕ್ಷಗಳನ್ನೂ, ತುರಾಯಿ ಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು. 9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ, ಸಮುದ್ರ ಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ, ಅಲ್ಲಿ ಬಿಚ್ಚಿಸಿಕೊಡುವೆನು. ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರ ಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ” ಎಂದು ಹೇಳಿ ಕಳುಹಿಸಿದನು. 10 ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮರಗಳನ್ನೂ ಮತ್ತು ತುರಾಯಿ ಮರಗಳನ್ನೂ ಕೊಡುತ್ತಿದ್ದನು. 11 ಸೊಲೊಮೋನನಾದರೋ ಪ್ರತಿ ವರ್ಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ, ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು. 12 ಯೆಹೋವನು ತಾನು ವಾಗ್ದಾನ ಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಸೊಲೊಮೋನನಿಗೂ ಹೀರಾಮನಿಗೂ ಒಳ್ಳೆಯ ಸಂಬಂಧವಿತ್ತು, ಅವರಿಬ್ಬರು ಪರಸ್ಪರವಾಗಿ ಒಡಂಬಡಿಕೆ ಮಾಡಿಕೊಂಡಿದ್ದರು. 13 ಅರಸನಾದ ಸೊಲೊಮೋನನು ಎಲ್ಲಾ ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಜನರನ್ನು ಬಲವಂತವಾಗಿ ಕರೆತಂದನು. 14 ಅವರಲ್ಲಿ ತಿಂಗಳಿಗೆ ಹತ್ತು ಸಾವಿರ ಜನರಂತೆ ಪ್ರತಿತಿಂಗಳು ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು. 15 ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಜನರು ಹೊರೆ ಹೊರುವವರೂ, ಎಂಭತ್ತು ಸಾವಿರ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು. 16 ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳನ್ನು ನೇಮಿಸಿದನು. 17 ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು ಸೊಲೊಮೋನನ ಅಪ್ಪಣೆಯಂತೆ ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೆತ್ತುತ್ತಿದ್ದರು. 18 ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಹಾಗು ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕಾಗಿ ಬೇಕಾಗುವ ಕಲ್ಲು ಮತ್ತು ಮರಗಳನ್ನು ಸಿದ್ಧಪಡಿಸಿದರೂ ಇವರೇ.
ಒಟ್ಟು 22 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 22
Common Bible Languages
West Indian Languages
×

Alert

×

kannada Letters Keypad References