1. {ಸತಿಪತಿಯರು} [PS] (1-2) ಅದೇ ರೀತಿಯಾಗಿ ಪತ್ನಿಯರೇ, [* ಆದಿ 3:16:] ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ [† 1 ಕೊರಿ 7:16:] ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು.
2. [‡ 1 ತಿಮೊ. 2:9; ಯೆಶಾ 3:18-23:] ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.
3. ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ [§ ರೋಮಾ. 2:29:] ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.
4. ಪೂರ್ವ ಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯನ್ನಿಟ್ಟಿದ್ದ ಭಕ್ತೆಯರಾದ ಸ್ತ್ರೀಯರೂ ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡಿದ್ದರು. ಅವರು ತಮ್ಮ ತಮ್ಮ ಗಂಡಂದಿರಿಗೆ [* ಅಥವಾ, ಅಧೀನರಾಗಿದ್ದರು. ಸಾರಳು ಹಾಗೆಯೇ ಕರೆದಳು. ನೀವು ಒಳ್ಳೆಯದನ್ನು ಮಾಡುವವರಾಗಿ ಯಾವ ಭೀತಿಗೂ ಗಾಬರಿಪಡದೆ ಇದ್ದರೆ ನೀವು ಸಾರಳ ಕುಮಾರ್ತೆಯರೇ. ] ಅಧೀನರಾಗಿದ್ದರು.
5. ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು [† ಆದಿ 18:12:] ಅವನನ್ನು ಯಜಮಾನ ಎಂದು ಕರೆದಳು. ನೀವು ಒಳ್ಳೆಯದನ್ನು ಮಾಡುತ್ತಾ [‡ ಜ್ಞಾ. 3:25:] ಯಾವ ಭೀತಿಗೂ ಭಯಪಡುವುದಿಲ್ಲವಾದರೆ ನೀವು ಆಕೆಯ ಕುವರಿಯರೇ ಆಗುವಿರಿ. [PE][PS]
6. [§ ಎಫೆ 5:25; ಕೊಲೊ 3:19:] ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ. [PS]
7. {ನೀತಿಗಾಗಿ ಬಾಧೆಯನ್ನನುಭವಿಸುವುದು} [PS] ಕಡೆಗೆ [* ರೋಮಾ. 12:16:] ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, [† ಇಬ್ರಿ. 13:1:] ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, [‡ ಎಫೆ 4:32:] ಕರುಣೆಯೂ, [§ ಎಫೆ 4:2:] ದೀನಭಾವವೂ ಉಳ್ಳವರಾಗಿರಿ.
8. [* 1 ಪೇತ್ರ. 2:23; ರೋಮಾ. 12:17:] ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ [† ಲೂಕ 6:28; ರೋಮಾ. 12:14; 1 ಕೊರಿ 4:12:] ಆಶೀರ್ವದಿಸಿರಿ. [‡ 1 ಪೇತ್ರ. 2:21:] ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.
9. ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ, [QBR] [§ ಕೀರ್ತ 34:12-16:] “ಜೀವವನ್ನು ಬಯಸುತ್ತಾ [QBR2] ಸುದಿನಗಳನ್ನು ನೋಡುವುದಕ್ಕೆ ಕಾದಿರುವಾತನು [QBR2] ಕೆಟ್ಟದ್ದನ್ನು ನುಡಿಯದಂತೆ [QBR2] ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ. [QBR]
10. ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆದನ್ನು ಮಾಡಲಿ. [QBR2] ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ. [QBR]
11. ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ [QBR2] ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. [QBR2] ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ.” [PE][PS]
12. ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
13. ಒಂದು ವೇಳೆ ನೀವು [* 1 ಪೇತ್ರ. 2:19, 20; 4:14, 16; ಮತ್ತಾ 5:10:] ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. [† ಅಥವಾ, ಅವರು ಯಾವುದಕ್ಕೆ ಹೆದರುತ್ತಾರೋ ಅದಕ್ಕೆ ನೀವು ಹೆದರದೆ; ವ. 6; ಯೆಶಾ 8:12, 13; ಮತ್ತಾ 10:28:] ಅವರ ಬೆದರಿಕೆಗೆ ಹೆದರಬೇಡಿರಿ, [‡ ಯೋಹಾ 14:1, 27:] ಕಳವಳಪಡಬೇಡಿರಿ.
14. ಆದರೆ [§ ಯೆಶಾ 8:13; 29:23:] ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ [* ಕೊಲೊ 4:6:] ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.
15. [† ಇಬ್ರಿ. 13:18:] ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ [‡ 1 ಪೇತ್ರ. 2:12:] ಆಗ ಕ್ರಿಸ್ತನಲ್ಲಿರುವ ನಿಮ್ಮ [§ 1 ಪೇತ್ರ. 2:20; 1 ಪೇತ್ರ. 4:15, 16:] ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು.
16. ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ.
17. ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು [* ರೋಮಾ. 5:2:] ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ [† ಇಬ್ರಿ. 9:26, 28:] ಒಂದೇ ಸಾರಿ ಪಾಪನಿವಾರಣೆಗೋಸ್ಕರ [‡ 1 ಪೇತ್ರ. 2:21; 4:1; ರೋಮಾ. 4:25:] ಬಾಧೆಪಟ್ಟು ಸತ್ತನು. [§ 1 ಪೇತ್ರ. 4:1; ಕೊಲೊ 1:22:] ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.
18. [* ಅಥವಾ, ಇದಲ್ಲದೆ ಸೆರೆಯಲ್ಲಿರುವ ಆತ್ಮಗಳು ಪೂರ್ವದಲ್ಲಿ ನಂಬದೆ ಇದ್ದಾಗ, ಅಂದರೆ ನೋಹನು ಕಾದಿದ್ದಾಗ ಆತನು ಆತ್ಮ ಸ್ವರೂಪವಾಗಿಯೇ ಅವುಗಳ ಬಳಿಗೆ ಹೋಗಿ. ] ಇದಲ್ಲದೆ ಆತನು ಆತ್ಮರೂಪನಾಗಿ ಸೆರೆಯಲ್ಲಿದ್ದ ಆತ್ಮಗಳ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು.
19. ಅಂದರೆ ಪೂರ್ವಕಾಲದಲ್ಲಿ [† ಇಬ್ರಿ. 11:7:] ನೋಹನು ನಾವೆಯನ್ನು ಕಟ್ಟುತ್ತಿರಲು [‡ ಆದಿ 6:3, 5, 13, 14:] ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ [§ ಆದಿ 7:1,7,23; 8:18.] ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು.
20. ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು [* 1 ಪೇತ್ರ. 1:3.] ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ [† ಮಾರ್ಕ 16:16; ಅ. ಕೃ. 16:33; ರೋಮಾ. 6:3-6; ತೀತ. 3:5.] ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ [‡ ಅಥವಾ. ಒಳ್ಳೆಯ ಮನಸ್ಸಾಕ್ಷಿಯಿಂದ. ] ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.
21. [§ ಅ. ಕೃ. 2:33, 34; ರೋಮಾ. 8:34; ಎಫೆ 1:20; ಕೊಲೊ; 3:1; ಇಬ್ರಿ. 1:3:] ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, [* ರೋಮಾ. 8:38; 1 ಕೊರಿ 15:24; ಎಫೆ 1:21:] ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ. [PE]
22.