1. ಸಮುವೇಲನು ಸೌಲನಿಗೆ, “ಯೆಹೋವನು ನಿನ್ನನ್ನು ತನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆ ಅರಸನನ್ನಾಗಿ ಅಭಿಷೇಕಿಸುವುದಕ್ಕೋಸ್ಕರ ನನ್ನನ್ನೇ ಕಳುಹಿಸಿದನಲ್ಲಾ; ಆತನು ಈಗ ಹೇಳುವುದನ್ನು ಕೇಳು.
|
2. ಸೇನಾಧೀಶ್ವರನಾದ ಯೆಹೋವನು ನಿನಗೆ, ‘ಇಸ್ರಾಯೇಲರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದ್ದನ್ನು ನೆನಪುಮಾಡಿಕೊಂಡು ನಾನು ಅವರಿಗೆ ಮುಯ್ಯಿತೀರಿಸುವೆನು.
|
3. ಈಗ ನೀನು ಹೋಗಿ ಅವರನ್ನು ಸೋಲಿಸಿ * ಯಾಜ 27:28,29. ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’ ” ಅಂದನು. PEPS
|
4. ಸೌಲನು ತೆಲಾಯೀಮಿನಲ್ಲಿ ಸೈನ್ಯವನ್ನು ಕೂಡಿಸಿ ಲೆಕ್ಕಿಸಲು ಎರಡು ಲಕ್ಷ ಕಾಲಾಳುಗಳು ಇದ್ದರು; ಯೆಹೂದ್ಯರು ಹತ್ತು ಸಾವಿರ ಜನರು ಇದ್ದರು.
|
6. ಆದರೆ ಅವನು † ನ್ಯಾಯ 1:16. ಕೇನ್ಯರಿಗೆ, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ. ಇಸ್ರಾಯೇಲರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ” ಎಂದು ಹೇಳಿಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.
|
7. ಆಗ ಸೌಲನು ಅಮಾಲೇಕ್ಯರನ್ನು ‡ ಆದಿ 2:11. ಹವೀಲಾ ಪ್ರಾಂತ್ಯದಿಂದ ಐಗುಪ್ತದ ಪೂರ್ವದಿಕ್ಕಿನಲ್ಲಿರುವ § ವಿಮೋ 15:22. ಶೂರಿನವರೆಗೆ ಅವರನ್ನು ಸಂಹರಿಸುತ್ತಾ ಹೋದನು.
|
9. ಸೌಲನೂ ಮತ್ತು ಇಸ್ರಾಯೇಲರೂ ಅಗಾಗನನ್ನೂ, ಉತ್ತಮವಾದ ಕುರಿದನಗಳನ್ನೂ, ಕುರಿಮರಿಗಳನ್ನೂ, ಕೊಬ್ಬಿದ ಪಶುಗಳನ್ನೂ, ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು. PS
|
10. {ಯೆಹೋವನು ಸೌಲನನ್ನು ತಳ್ಳಿಬಿಟ್ಟದ್ದು} PS ಯೆಹೋವನು ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನ್ನನ್ನು ಬಿಟ್ಟುಬಿಟ್ಟನು; ನನ್ನ ಆಜ್ಞೆಗಳನ್ನು ನೆರವೇರಿಸಲಿಲ್ಲ” ಎಂದು ಹೇಳಿದನು.
|
12. ಸಮುವೇಲನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವುದಕ್ಕೆ ಹೊರಟಾಗ ಅವನಿಗೆ, “ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನು” ಎಂಬ ವರ್ತಮಾನವು ಬಂದದ್ದರಿಂದ
|
13. ಸಮುವೇಲನು ಅಲ್ಲಿಗೆ ಹೋದನು. ಸೌಲನು ಅವನನ್ನು ಕಂಡು, “ * ರೂತ. 2:20. ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು” ಅಂದನು.
|
14. ಅದಕ್ಕೆ ಸಮುವೇಲನು, “ಹಾಗಾದರೆ ಇದೇನು? ಕುರಿಗಳ ಕೂಗು ನನ್ನ ಕಿವಿಗೆ ಬೀಳುತ್ತದೆ, ದನಗಳ ಶಬ್ದವು ನನಗೆ ಕೇಳಿಸುತ್ತದೆ” ಎನ್ನಲು
|
15. ಸೌಲನು, “ಜನರು ನಿನ್ನ ದೇವರಾದ ಯೆಹೋವನಿಗೆ ಯಜ್ಞವನ್ನು ಅರ್ಪಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಉತ್ತಮವಾದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು” ಎಂದು ಉತ್ತರಕೊಟ್ಟನು.
|
16. ಆಗ ಸಮುವೇಲನು ಅವನಿಗೆ, “ಅದಿರಲಿ; ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು” ಎನ್ನಲು ಅವನು, “ಹೇಳು” ಅಂದನು.
|
17. ಸಮುವೇಲನು, “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸನ್ನಾಗಿ ಮಾಡಿದನು.
|
18. ಆತನು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದನು.
|
20. ಆಗ ಸೌಲನು ಸಮುವೇಲನಿಗೆ, “ಏನು? ನಾನು ಯೆಹೋವನ ಮಾತನ್ನು ಕೇಳಲಿಲ್ಲವೋ? ಆತನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲಾ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದು ತಂದೆನು.
|
21. ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ ಕೊಳ್ಳೆಯಲ್ಲಿ ಉತ್ತಮವಾದ ಕುರಿದನಗಳನ್ನು ನಿನ್ನ ದೇವರಾದ ಯೆಹೋವನಿಗೆ ಗಿಲ್ಗಾಲಿನಲ್ಲಿ ಯಜ್ಞಸಮರ್ಪಣೆಮಾಡುವುದಕ್ಕಾಗಿ ಉಳಿಸಿ ತಂದರು” ಎಂದು ಉತ್ತರಕೊಟ್ಟನು.
|
22. ಅದಕ್ಕೆ ಸಮುವೇಲನು,
“ † ಕೀರ್ತ 40:6-8; ಮೀಕ. 6:6-8. ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ‡ ಪ್ರಸಂಗಿ. 5:1; ಮಾರ್ಕ 12:33. ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು. |
23. ಅವಿಧೇಯತ್ವವು § ಧರ್ಮೋ 18:10. ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು.
ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು. PEPS |
24. ಸೌಲನು ಸಮುವೇಲನಿಗೆ, “ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.
|
25. ನೀನು ದಯವಿಟ್ಟು ನನ್ನ ಪಾಪವನ್ನು ಕ್ಷಮಿಸು; ನಾನು ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಅವನನ್ನು ಬೇಡಿಕೊಂಡನು.
|
26. ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಯೆಹೋವನ ಮಾತನ್ನು ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಇಸ್ರಾಯೇಲರ ಅರಸುತನದಿಂದ ನಿವಾರಿಸಿದ್ದಾನೆ” ಎಂದು ಹೇಳಿ ತಿರುಗಿಕೊಂಡು ಹೊರಡಲು
|
28. ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.
|
29. * ಅರಣ್ಯ 23:19. ಇಸ್ರಾಯೇಲರ ನಿರಂತರ ಆಧಾರವಾಗಿ ಇರುವವನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಏಕೆಂದರೆ ವಾಗ್ದಾನ ಮಾಡಿದ ಮಾತನ್ನು ನಡೆಸದೆ ಬಿಡುವವನಲ್ಲ” ಎಂದು ಹೇಳಿದನು.
|
30. ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲರ ಮುಂದೆಯೂ, ಜನರ ಮುಂದೆಯೂ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು. ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಬೇಡಿಕೊಂಡನು.
|
32. {ಸಮುವೇಲನು ಅಗಾಗನನ್ನು ಸಂಹರಿಸಿದ್ದು} PS ತರುವಾಯ ಸಮುವೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ಕರೆತನ್ನಿರಿ” ಎಂದನು. ಅಗಾಗನು ಮರಣಭಯ ತಪ್ಪಿತೆಂದು ನೆನಪಿಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.
|
33. ಆದರೆ ಸಮುವೇಲನು ಅವನಿಗೆ,
“ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರಶೋಕವನ್ನುಂಟುಮಾಡಿದೆ; ಅದರಂತೆ ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ” ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು. PEPS |
35. ಸಮುವೇಲನು ಜೀವದಿಂದ ಇರುವವರೆಗೂ ಸೌಲನನ್ನು ನೋಡಲಿಲ್ಲ; ಆದರೆ ಯೆಹೋವನು ಸೌಲನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ವಿಷಾದಪಟ್ಟನು. ಸಮುವೇಲನು ಅವನ ಕುರಿತು ದುಃಖಪಡುತ್ತಿದ್ದನು. PE
|