1. {ದಾವೀದನು ಅದುಲ್ಲಾಮ್ ಗವಿಗೆ ಹೋದದ್ದು} PS ದಾವೀದನು ಅಕೀಷ ರಾಜನಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ, ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಲಾಗಿ, ಅವರೂ ಬಂದು ಅವನನ್ನು ಸೇರಿಕೊಂಡರು.
|
2. ಇದಲ್ಲದೆ ಕುಗ್ಗಿದವರೂ, ಸಾಲಗಾರರೂ, ಮನನೊಂದವರೂ, ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು, ಅವನು ಸುಮಾರು ನಾನೂರು ಜನರಿಗೆ ನಾಯಕನಾದನು. PEPS
|
3. ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಪೆ ಎಂಬಲ್ಲಿಗೆ ಕರೆದುಕೊಂಡು ಹೋಗಿ ಅಲ್ಲಿಯ ಅರಸನಿಗೆ, “ದೇವರು ನನಗೆ ಮಾರ್ಗತೋರಿಸುವವರೆಗೆ ನನ್ನ ತಂದೆತಾಯಿಗಳು ನಿನ್ನ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡು, ಅವರನ್ನು ಅವನ ಬಳಿಯಲ್ಲಿ ಬಿಟ್ಟನು.
|
5. * 1ಪೂರ್ವ 21:9; 2 ಪೂರ್ವ 29:25. ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು, ಇದನ್ನು ಬಿಟ್ಟು ಯೆಹೂದ ದೇಶಕ್ಕೆ ಹೋಗು” ಎಂದು ಹೇಳಿದ್ದರಿಂದ ಅವನು ಹೆರೆತ್ ಅರಣ್ಯಕ್ಕೆ ಹೋದನು. PS
|
6. {ಸೌಲನು ನೋಬಿನ ಯಾಜಕರನ್ನು ಕೊಲ್ಲಿಸಿದ್ದು} PS ಒಂದು ದಿನ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಬರ್ಜಿಯನ್ನು ಹಿಡಿದುಕೊಂಡು, ಗಿಬೆಯ ಗುಡ್ಡದ † ಆದಿ 21:33. ಪಿಚುಲ ವೃಕ್ಷದ ಕೆಳಗೆ ಕುಳಿತುಕೊಂಡಿರಲು ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳವು ತಿಳಿದುಬಂದಿದೆ ಎಂಬ ಸುದ್ದಿಯು ಅವನಿಗೆ ಮುಟ್ಟಿತು.
|
7. ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಮಕ್ಕಳೇ ಕೇಳಿರಿ. ನೀವೆಲ್ಲರೂ ನನಗೆ ಒಳಸಂಚು ಮಾಡುವುದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಡುವನೋ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುವನೋ?
|
8. ನನ್ನ ಮಗನು ಇಷಯನ ಮಗನೊಡನೆ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಒಬ್ಬನಾದರೂ ನನಗೆ ತಿಳಿಸಲಿಲ್ಲವಲ್ಲಾ. ನನ್ನ ಸೇವಕನು ನನಗೆ ವಿರೋಧವಾಗಿ ಒಳಸಂಚುಮಾಡುವ ಹಾಗೆ ನನ್ನ ಮಗನೇ, ಅವನನ್ನು ಎಬ್ಬಿಸಿದ್ದಾನೆಂಬುದನ್ನು ಒಬ್ಬನಾದರೂ ನನಗೆ ಯಾಕೆ ತಿಳಿಸಲಿಲ್ಲ? ನೀವು ನನ್ನ ಚಿಂತೆಯನ್ನೇ ಬಿಟ್ಟಿದ್ದೀರಿ” ಅಂದನು
|
9. ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, “ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ಕಂಡೆನು.
|
10. ಅವನು ಇವನಿಗೆ ‡ 2 ಸಮು 5:19; ಅರಣ್ಯ 27:21. ಯೆಹೋವನ ಚಿತ್ತವನ್ನು ತಿಳಿಸಿ, § 1 ಸಮು 21:6,9. ಆಹಾರವನ್ನೂ, ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು” ಎಂದು ಹೇಳಿದನು.
|
11. ಕೂಡಲೆ ಸೌಲನು ಅಹೀಟೂಬನ ಮಗನೂ ಯಾಜಕನೂ ಆಗಿದ್ದ ಅಹೀಮೆಲೆಕನನ್ನೂ, ಅವನ ಕುಟುಂಬಕ್ಕೆ ಸೇರಿದ ನೋಬದ ಬೇರೆ ಎಲ್ಲಾ ಯಾಜಕರೊಡನೆ ಕರೆದುಕೊಂಡು ಬರುವಂತೆ ಕಳುಹಿಸಿದನು. ಅವರೆಲ್ಲರೂ ಅರಸನ ಸನ್ನಿಧಿಗೆ ಬರಲು,
|
13. ಆಗ ಸೌಲನು ಅವನಿಗೆ, “ನೀನು ನನಗೆ ವಿರೋಧವಾಗಿ ಇಷಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಕತ್ತಿಗಳನ್ನು ಕೊಟ್ಟು, ದೈವೋತ್ತರವನ್ನು ತಿಳಿಸಿದ್ದೇಕೆ?” ಎಂದು ಕೇಳಿದನು
|
14. ಅವನು, “ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು * ಅಥವಾ ನಿನ್ನ ಮೈಗಾವಲಿನ ನಾಯಕನು. ನಿನ್ನ ಆಲೋಚಕರಲ್ಲೊಬ್ಬನು, ನಿನ್ನ ಮನೆಯಲ್ಲಿ ಗೌರವಸ್ಥನೂ ಆಗಿದ್ದನಲ್ಲವೇ?
|
15. ನಾನು ಅವನಿಗೋಸ್ಕರ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೋ? ಇದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕರ ಮೇಲೆ ಅವನ ಮನೆಯವರ ಮೇಲೆ ಇಂಥ ಮಾತನ್ನು ಹೊರಿಸಬಾರದು. ಈ ವಿಷಯದಲ್ಲಿ ನಿನ್ನ ಸೇವಕನಿಗೆ ಸ್ವಲ್ಪವೂ ಗೊತ್ತಿರಲಿಲ್ಲ” ಎಂದು ಉತ್ತರ ಕೊಟ್ಟನು.
|
17. ಸಿಪಾಯಿಗಳಿಗೆ, “ನೀವು ಯೆಹೋವನ ಈ ಯಾಜಕರನ್ನು ಕೊಲ್ಲಿರಿ. ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೇ ಅವನಿಗೆ ಸಹಾಯ ಮಾಡಿದ್ದಾರೆ” ಎಂದು ಹೇಳಿ ಅವರನ್ನು ಕೊಲ್ಲಲು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸು ಮಾಡಲಿಲ್ಲ.
|
18. ಆದ್ದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು” ಎಂದು ಆಜ್ಞಾಪಿಸಲು, † 1 ಸಮು 2:31. ಅವನು ನಾರು ಬಟ್ಟೆಯ ಎಪೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಯಾಜಕರನ್ನು ಆ ದಿನ ಕೊಂದುಹಾಕಿದನು.
|
19. ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ, ಶಿಶುಬಾಲಕರನ್ನೂ ದನ, ಕುರಿ, ಕತ್ತೆಗಳನ್ನು, ಕತ್ತಿಯಿಂದ ಸಂಹರಿಸಿದನು.
|
20. ಅಹೀಟೂಬನ ಮಗನಾದ ‡ 1 ಸಮು 23:6,9. ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನೆಂಬುವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು,
|
22. ದಾವೀದನು ಎದೋಮ್ಯನಾದ ದೋಯೇಗನನ್ನು, “ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ತಿಳಿದುಕೊಂಡೆನು. ನಿನ್ನ ಸಂಬಂಧಿಕರ ಸಾವಿಗೆ ನಾನೇ ಕಾರಣನಾದೆನಲ್ಲಾ.
|
23. § 1 ಅರಸು. 2:26. ನೀನಾದರೋ ಹೆದರದೆ ನನ್ನ ಸಂಗಡ ಇರು. ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನೇ ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿರುವುದಾದರೆ ಸುರಕ್ಷಿತನಾಗಿರುವಿ” ಎಂದನು. PE
|