1. {ದಾವೀದನು ಫಿಲಿಷ್ಟಿಯರ ನಡುವೆ ವಾಸಿಸಿದ್ದು} PS ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು.
|
3. ಅವನೂ, ಅವನ ಜನರೂ ತಮ್ಮ ತಮ್ಮ ಕುಟುಂಬ ಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ವಾಸಮಾಡಿದರು. ದಾವೀದನ ಹೆಂಡತಿಯರಾಗಿರುವ ಇಜ್ರೇಲ್ಯಳಾದ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಅವನ ಸಂಗಡ ಇದ್ದರು.
|
5. ಒಂದು ದಿನ ದಾವೀದನು ಆಕೀಷನಿಗೆ, “ನಿನ್ನ ಸೇವಕನಾದ ನಾನು ನಿನ್ನ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದಾದರೆ ಯಾವುದಾದರು ಒಂದು ಪಟ್ಟಣದಲ್ಲಿ ನನಗೆ ಸ್ಥಳಕೊಡು. ನಾನು ಅಲ್ಲಿ ವಾಸಮಾಡುವೆನು” ಅಂದನು.
|
6. ಆಕೀಷನು ಕೂಡಲೇ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟುಬಿಟ್ಟನು. ಆದ್ದರಿಂದ ಚಿಕ್ಲಗ್ ಎಂಬುದು ಇಂದಿನವರೆಗೂ ಯೆಹೂದ ರಾಜರಿಗೆ ಸೇರಿದೆ. PEPS
|
8. ಆ ಕಾಲದಲ್ಲಿ ಅವನೂ, ಅವನ ಜನರೂ ತೇಲಾಮಿನಿಂದ ಶೂರಿನವರೆಗೂ, ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಆಕ್ರಮಣ ಮಾಡಿ ಸುಲಿದುಕೊಳ್ಳುತ್ತಿದ್ದರು.
|
9. ದಾವೀದನು ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ಎಲ್ಲಾ ನಿವಾಸಿಗಳನ್ನು ಕೊಂದು, ಕುರಿ, ದನ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ಆಕೀಷನ ಬಳಿಗೆ ಹೋಗುತ್ತಿದ್ದನು.
|
10. ಆಕೀಷನು ಅವನನ್ನು “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ” ಎಂದು ಕೇಳುವನು. ದಾವೀದನು ಅವನಿಗೆ “ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ” ಹೇಳುವರು.
|
11. ದಾವೀದನು ತನ್ನ ಕೃತ್ಯವನ್ನು ಜನರು ಹೇಳಾರೆಂದು ನೆನಸಿ, ಅವನು ಯಾರನ್ನೂ ಗತ್ ಊರಿಗೆ ತಾರದೆ, ಎಲ್ಲಾ ಸ್ತ್ರೀಪುರುಷರನ್ನು ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು.
|
12. ದಾವೀದನ ಹೆಸರು ಸ್ವಜನರಾದ ಇಸ್ರಾಯೇಲರಲ್ಲಿ ತನ್ನ ಹೆಸರನ್ನು ಕೆಡಿಸಿಕೊಂಡಿದ್ದರಿಂದ ಇವನು ತನ್ನ ನಿತ್ಯ ದಾಸನಾಗಿರುವನೆಂದು ಆಕೀಷನು ನಂಬಿಕೊಂಡನು. PE
|