ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
1 ಥೆಸಲೊನೀಕದವರಿಗೆ
1. ಆದುದರಿಂದ ನಾನು ಇನ್ನು ತಾಳಲಾರದೆ [* ಅ. ಕೃ. 17:15, 16:] ಅಥೇನೆಯಲ್ಲಿ ಒಬ್ಬಂಟಿಗನಾಗಿಯೇ ಇರುವುದು ಒಳ್ಳೆಯದೆಂದು ಯೋಚಿಸಿ,
2. ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ [† 2 ಕೊರಿ 1:1; ಕೊಲೊ 1:1; ಫಿಲೆ. 1; ಇಬ್ರಿ. 13:23:] ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ [‡ ಫಿಲಿ. 2:19:] ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.
3. [§ ಅ. ಕೃ. 9:16; 14:22:] ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.
4. ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಈ ಮೊದಲೇ ಹೇಳಿದ್ದೆವಲ್ಲಾ. [* 1 ಥೆಸ. 2:14:] ಅದರಂತೆಯೇ ಆಯಿತು, ಅದು ನಿಮ್ಮ ಅನುಭವಕ್ಕೂ ಬಂದಿತು.
5. ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ [† ಫಿಲಿ. 2:16:] ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು. [PE][PS]
6. [‡ ಅ. ಕೃ. 18:5; 2 ಕೊರಿ 7:6, 9:] ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು [§ 1 ಥೆಸ 1:3:] ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, [* 1 ಕೊರಿ 11:2:] ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ. [PE][PS]
7. ಸಹೋದರರೇ, ಈ ವಾರ್ತೆಯನ್ನು ಕೇಳಿ [† 2 ಕೊರಿ 1:4:] ನಮ್ಮ ಎಲ್ಲಾ ಕಷ್ಟದಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮುಖಾಂತರ ನಮಗೆ ಸಮಾಧಾನವಾಯಿತು.
8. [‡ 1 ಕೊರಿ 16:13:] ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಮಗೆ ಜೀವಕಳೆ.
9. ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ [§ 1 ಥೆಸ. 1:2:] ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ?
10. [* 1 ಥೆಸ. 2:17:] ನಿಮ್ಮ ಮುಖವನ್ನು ನೋಡುವುದಕ್ಕೂ [† ಎಫೆ 4:12,13:] ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವುದಕ್ಕೂ ನಾವು [‡ 2 ತಿಮೊ. 1:3:] ಹಗಲಿರುಳು ದೇವರನ್ನು ತುಂಬಾ ಕಳಕಳಿಯಿಂದ ಬೇಡುವವರಾಗಿದ್ದೇವೆ.
11. ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು, ನಾವು ನಿಮ್ಮ ಬಳಿಗೆ ಬರುವುದಕ್ಕೆ ಮಾರ್ಗವನ್ನು ಸರಾಗಮಾಡಿಕೊಡಲಿ. [PE][PS]
12. ನಿಮ್ಮಲ್ಲಿ ನಮ್ಮ ಪ್ರೀತಿಯು ಹೆಚ್ಚಾದ ಹಾಗೆಯೇ ನಿಮ್ಮ ಪ್ರೀತಿಯು [§ 1 ಥೆಸ. 4:9; 5:15 ] ಒಬ್ಬರಿಂದೊಬ್ಬರಿಗೆ ಹರಡಿ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ಆಶೀರ್ವದಿಸಲಿ.
13. ನಮ್ಮ ಕರ್ತನಾದ ಯೇಸು ತನ್ನ [* ಜೆಕ. 14:5; ಯೂದ 14:] ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ [† ಯಾಕೋಬ 5:8; 1 ಪೇತ್ರ 5:10:] ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ. [PE]

ಟಿಪ್ಪಣಿಗಳು

No Verse Added

ಒಟ್ಟು 5 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 5
1 2 3 4 5
1 ಥೆಸಲೊನೀಕದವರಿಗೆ 3
1 ಆದುದರಿಂದ ನಾನು ಇನ್ನು ತಾಳಲಾರದೆ * ಅ. ಕೃ. 17:15, 16: ಅಥೇನೆಯಲ್ಲಿ ಒಬ್ಬಂಟಿಗನಾಗಿಯೇ ಇರುವುದು ಒಳ್ಳೆಯದೆಂದು ಯೋಚಿಸಿ, 2 ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ 2 ಕೊರಿ 1:1; ಕೊಲೊ 1:1; ಫಿಲೆ. 1; ಇಬ್ರಿ. 13:23: ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ‡ ಫಿಲಿ. 2:19: ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು. 3 § ಅ. ಕೃ. 9:16; 14:22: ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ. 4 ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಈ ಮೊದಲೇ ಹೇಳಿದ್ದೆವಲ್ಲಾ. * 1 ಥೆಸ. 2:14: ಅದರಂತೆಯೇ ಆಯಿತು, ಅದು ನಿಮ್ಮ ಅನುಭವಕ್ಕೂ ಬಂದಿತು. 5 ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ಫಿಲಿ. 2:16: ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು. 6 ಅ. ಕೃ. 18:5; 2 ಕೊರಿ 7:6, 9: ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು § 1 ಥೆಸ 1:3: ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, * 1 ಕೊರಿ 11:2: ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ. 7 ಸಹೋದರರೇ, ಈ ವಾರ್ತೆಯನ್ನು ಕೇಳಿ 2 ಕೊರಿ 1:4: ನಮ್ಮ ಎಲ್ಲಾ ಕಷ್ಟದಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮುಖಾಂತರ ನಮಗೆ ಸಮಾಧಾನವಾಯಿತು. 8 1 ಕೊರಿ 16:13: ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಮಗೆ ಜೀವಕಳೆ. 9 ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ § 1 ಥೆಸ. 1:2: ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ? 10 * 1 ಥೆಸ. 2:17: ನಿಮ್ಮ ಮುಖವನ್ನು ನೋಡುವುದಕ್ಕೂ † ಎಫೆ 4:12,13: ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವುದಕ್ಕೂ ನಾವು ‡ 2 ತಿಮೊ. 1:3: ಹಗಲಿರುಳು ದೇವರನ್ನು ತುಂಬಾ ಕಳಕಳಿಯಿಂದ ಬೇಡುವವರಾಗಿದ್ದೇವೆ. 11 ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು, ನಾವು ನಿಮ್ಮ ಬಳಿಗೆ ಬರುವುದಕ್ಕೆ ಮಾರ್ಗವನ್ನು ಸರಾಗಮಾಡಿಕೊಡಲಿ. 12 ನಿಮ್ಮಲ್ಲಿ ನಮ್ಮ ಪ್ರೀತಿಯು ಹೆಚ್ಚಾದ ಹಾಗೆಯೇ ನಿಮ್ಮ ಪ್ರೀತಿಯು § 1 ಥೆಸ. 4:9; 5:15 ಒಬ್ಬರಿಂದೊಬ್ಬರಿಗೆ ಹರಡಿ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ಆಶೀರ್ವದಿಸಲಿ. 13 ನಮ್ಮ ಕರ್ತನಾದ ಯೇಸು ತನ್ನ * ಜೆಕ. 14:5; ಯೂದ 14: ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ † ಯಾಕೋಬ 5:8; 1 ಪೇತ್ರ 5:10: ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.
ಒಟ್ಟು 5 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 5
1 2 3 4 5
Common Bible Languages
West Indian Languages
×

Alert

×

kannada Letters Keypad References