ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
1 ತಿಮೊಥೆಯನಿಗೆ
1. ನಮ್ಮ ರಕ್ಷಕನಾದ ದೇವರ [* ಕೊಲೊ 1:27] ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನ ಆಜ್ಞೆಯ ಮೇರೆಗೆ ನೇಮಿಸಲ್ಪಟ್ಟ ಕ್ರಿಸ್ತ ಯೇಸುವಿನ [† 2 ಕೊರಿ 1:1] ಅಪೊಸ್ತಲನಾದ ಪೌಲನು
2. [‡ ತೀತ 1:4] ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, [§ 2 ತಿಮೊ 1:2; 2 ಯೊಹಾ 3; ಯೂದ 2] ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ. [PS]
3. {ಸುಳ್ಳುಬೋಧನೆಯ ಬಗ್ಗೆ ಎಚ್ಚರಿಕೆ} [PS] ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, [* 1 ತಿಮೊ 6:3 ಗಲಾ 1:6,7] ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ,
4. [† 1 ತಿಮೊ 4:7; 2 ತಿಮೊ 4:4; ತೀತ 1:14; 2 ಪೇತ್ರ 1:16] ಕಲ್ಪಿತಕಥೆಗಳಿಗೂ, ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ, ಆಜ್ಞಾಪಿಸಬೇಕೆಂಬುದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತಿದೇನೆ. ಅಂತಹ ಕಥೆಗಳೂ, [‡ ತೀತ 3:9] ವಂಶಾವಳಿಗಳೂ [§ 1 ತಿಮೊ. 6:4 ] ವಿವಾದಕ್ಕೆ ಎಡೆಮಾಡಿಕೊಡುತ್ತದೆಯೇ ಹೊರತು ದೇವರ ಯೋಜನೆಗಳಿಗೆ ಅನುಕೂಲವಾಗಿರುವುದಿಲ್ಲ. ನಂಬಿಕೆಯಿಂದ ಮಾತ್ರ ಅದು ಸಾಧ್ಯವಾಗುತ್ತದೆ.
5. [* 2 ತಿಮೊ. 2:22] ಶುದ್ಧಹೃದಯ, [† 1 ಪೇತ್ರ. 3:16, 21] ಒಳ್ಳೆಯ ಮನಸ್ಸಾಕ್ಷಿ, [‡ 2 ತಿಮೊ 1:5] ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ.
6. ಕೆಲವರು ಈ ಗುರಿಯನ್ನು ಬಿಟ್ಟು [§ ತೀತ 1:10] ವ್ಯರ್ಥವಾದ ವಿಚಾರಗಳ ಕಡೆಗೆ ತಿರುಗಿಕೊಂಡಿದ್ದಾರೆ.
7. ಅವರು ಧರ್ಮೋಪದೇಶಕರಾಗಬೇಕೆಂದು ಬಯಸುತ್ತಿದ್ದರೂ ತಾವು ಹೇಳುವುದಾಗಲಿ, [* 1 ತಿಮೊ 6:4; ಕೊಲೊ 2:18] ತಾವು ದೃಢವಾಗಿ ಮಾತನಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ.
8. [† ರೋಮ 7:16] ಧರ್ಮಶಾಸ್ತ್ರವು ಒಳ್ಳೆಯದೆಂದು ಬಲ್ಲೆವು. ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು.
9. ಧರ್ಮಶಾಸ್ತ್ರವು [‡ ಗಲಾ 5:23] ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು,
10. ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, [§ 2 ತಿಮೊ 4:3; ತೀತ 1:9; 2:1; 1 ತಿಮೊ 6:3; 2 ತಿಮೊ 1:13; ತೀತ 1:13, 2:2] ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.
11. ಈ ಬೋಧನೆಯು [* 1 ತಿಮೊ 6:15] ಭಾಗ್ಯವಂತನಾದ [† 2 ಕೊರಿ 4:4] ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. [‡ ತೀತ 1:3,4; ಗಲಾ 2:7] ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು. [PE][PS]
12. (12-13) [§ ಆ. ಕೃ 9:22; ಫಿಲಿ 4:13; 2 ತಿಮೊ 4:17] ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, [* ಆ. ಕೃ 8:3] ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, [† 2 ಕೊರಿ 3:6] ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ [‡ ಆ. ಕೃ. 3:17] ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ [§ 1 ಕೊರಿ 7:25; 2 ಕೊರಿ 4:1] ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು;
13. ಆದರೆ [* ರೋಮ 5:20] ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ [† ಲೂಕ 7:47, 50; 1 ಥೆಸ. 1:3] ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು.
14. [‡ ಮತ್ತಾ 9:13; ಯೋಹಾ 3:17; ರೋಮ 4:25] ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು [§ 1 ತಿಮೊ 3:1; 4:9; 2 ತಿಮೊ. 2:11; ತೀತ 3:8] ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ [* 1 ಕೊರಿ 15:9 ] ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು.
15. ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು.
16. [† ಪ್ರಕ 15:3; 4:9,10] ಸರ್ವಯುಗಗಳ ಅರಸನೂ, [‡ 1 ತಿಮೊ 6:15,16; ರೋಮ 1:23] ಅಮರನೂ, [§ ಯೋಹಾ 1:18; ಕೊಲೊ 1:15; ಇಬ್ರಿ 11:27; 1 ಯೋಹಾ 4:12] ಅದೃಶ್ಯನೂ ಆಗಿರುವ [* ಯೂದ 25] ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್. [PE][PS]
17. ಮಗನಾದ ತಿಮೊಥೆಯನೇ, [† 1 ತಿಮೊ 4:14] ನಿನ್ನ ವಿಷಯದಲ್ಲಿ ಮೊದಲು ಉಂಟಾಗಿದ್ದ ಪ್ರವಾದನೆಗಳನ್ನು ನೆನಪಿಸಿಕೊಂಡು, [‡ 1 ಕೊರಿ 9:7; 2 ಕೊರಿ 10:4; 2 ತಿಮೊ 2:3,4] ನೀನು ಅವುಗಳಿಂದ ಧೈರ್ಯಹೊಂದಿ ಒಳ್ಳೆಯ ಯುದ್ಧವನ್ನು ನಡೆಸಬೇಕೆಂದು ನಿನಗೆ ಆಜ್ಞಾಪಿಸುತ್ತಿದ್ದೇನೆ.
18. [§ 1 ತಿಮೊ 3:9 ] ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ.
19. [* 2 ತಿಮೊ 2:7; ] ಹುಮೆನಾಯನೂ [† 1 ತಿಮೊ 4:14] ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ [‡ ಕೊರಿ 5:5] ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು. [PE]
20.

ಟಿಪ್ಪಣಿಗಳು

No Verse Added

ಒಟ್ಟು 6 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 6
1 2 3 4 5 6
1 ತಿಮೊಥೆಯನಿಗೆ 1:13
1 ನಮ್ಮ ರಕ್ಷಕನಾದ ದೇವರ * ಕೊಲೊ 1:27 ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನ ಆಜ್ಞೆಯ ಮೇರೆಗೆ ನೇಮಿಸಲ್ಪಟ್ಟ ಕ್ರಿಸ್ತ ಯೇಸುವಿನ † 2 ಕೊರಿ 1:1 ಅಪೊಸ್ತಲನಾದ ಪೌಲನು 2 ತೀತ 1:4 ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, § 2 ತಿಮೊ 1:2; 2 ಯೊಹಾ 3; ಯೂದ 2 ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ. ಸುಳ್ಳುಬೋಧನೆಯ ಬಗ್ಗೆ ಎಚ್ಚರಿಕೆ 3 ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, * 1 ತಿಮೊ 6:3 ಗಲಾ 1:6,7 ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ, 4 1 ತಿಮೊ 4:7; 2 ತಿಮೊ 4:4; ತೀತ 1:14; 2 ಪೇತ್ರ 1:16 ಕಲ್ಪಿತಕಥೆಗಳಿಗೂ, ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ, ಆಜ್ಞಾಪಿಸಬೇಕೆಂಬುದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತಿದೇನೆ. ಅಂತಹ ಕಥೆಗಳೂ, ‡ ತೀತ 3:9 ವಂಶಾವಳಿಗಳೂ § 1 ತಿಮೊ. 6:4 ವಿವಾದಕ್ಕೆ ಎಡೆಮಾಡಿಕೊಡುತ್ತದೆಯೇ ಹೊರತು ದೇವರ ಯೋಜನೆಗಳಿಗೆ ಅನುಕೂಲವಾಗಿರುವುದಿಲ್ಲ. ನಂಬಿಕೆಯಿಂದ ಮಾತ್ರ ಅದು ಸಾಧ್ಯವಾಗುತ್ತದೆ. 5 * 2 ತಿಮೊ. 2:22 ಶುದ್ಧಹೃದಯ, † 1 ಪೇತ್ರ. 3:16, 21 ಒಳ್ಳೆಯ ಮನಸ್ಸಾಕ್ಷಿ, ‡ 2 ತಿಮೊ 1:5 ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ. 6 ಕೆಲವರು ಈ ಗುರಿಯನ್ನು ಬಿಟ್ಟು § ತೀತ 1:10 ವ್ಯರ್ಥವಾದ ವಿಚಾರಗಳ ಕಡೆಗೆ ತಿರುಗಿಕೊಂಡಿದ್ದಾರೆ. 7 ಅವರು ಧರ್ಮೋಪದೇಶಕರಾಗಬೇಕೆಂದು ಬಯಸುತ್ತಿದ್ದರೂ ತಾವು ಹೇಳುವುದಾಗಲಿ, * 1 ತಿಮೊ 6:4; ಕೊಲೊ 2:18 ತಾವು ದೃಢವಾಗಿ ಮಾತನಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ. 8 ರೋಮ 7:16 ಧರ್ಮಶಾಸ್ತ್ರವು ಒಳ್ಳೆಯದೆಂದು ಬಲ್ಲೆವು. ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು. 9 ಧರ್ಮಶಾಸ್ತ್ರವು ಗಲಾ 5:23 ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು, 10 ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, § 2 ತಿಮೊ 4:3; ತೀತ 1:9; 2:1; 1 ತಿಮೊ 6:3; 2 ತಿಮೊ 1:13; ತೀತ 1:13, 2:2 ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ. 11 ಈ ಬೋಧನೆಯು * 1 ತಿಮೊ 6:15 ಭಾಗ್ಯವಂತನಾದ † 2 ಕೊರಿ 4:4 ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. ‡ ತೀತ 1:3,4; ಗಲಾ 2:7 ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು. 12 (12-13) § ಆ. ಕೃ 9:22; ಫಿಲಿ 4:13; 2 ತಿಮೊ 4:17 ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, * ಆ. ಕೃ 8:3 ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, † 2 ಕೊರಿ 3:6 ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ‡ ಆ. ಕೃ. 3:17 ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ § 1 ಕೊರಿ 7:25; 2 ಕೊರಿ 4:1 ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು; 13 ಆದರೆ * ರೋಮ 5:20 ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ † ಲೂಕ 7:47, 50; 1 ಥೆಸ. 1:3 ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು. 14 ಮತ್ತಾ 9:13; ಯೋಹಾ 3:17; ರೋಮ 4:25 ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು § 1 ತಿಮೊ 3:1; 4:9; 2 ತಿಮೊ. 2:11; ತೀತ 3:8 ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ * 1 ಕೊರಿ 15:9 ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು. 15 ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು. 16 ಪ್ರಕ 15:3; 4:9,10 ಸರ್ವಯುಗಗಳ ಅರಸನೂ, ‡ 1 ತಿಮೊ 6:15,16; ರೋಮ 1:23 ಅಮರನೂ, § ಯೋಹಾ 1:18; ಕೊಲೊ 1:15; ಇಬ್ರಿ 11:27; 1 ಯೋಹಾ 4:12 ಅದೃಶ್ಯನೂ ಆಗಿರುವ * ಯೂದ 25 ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್. 17 ಮಗನಾದ ತಿಮೊಥೆಯನೇ, 1 ತಿಮೊ 4:14 ನಿನ್ನ ವಿಷಯದಲ್ಲಿ ಮೊದಲು ಉಂಟಾಗಿದ್ದ ಪ್ರವಾದನೆಗಳನ್ನು ನೆನಪಿಸಿಕೊಂಡು, ‡ 1 ಕೊರಿ 9:7; 2 ಕೊರಿ 10:4; 2 ತಿಮೊ 2:3,4 ನೀನು ಅವುಗಳಿಂದ ಧೈರ್ಯಹೊಂದಿ ಒಳ್ಳೆಯ ಯುದ್ಧವನ್ನು ನಡೆಸಬೇಕೆಂದು ನಿನಗೆ ಆಜ್ಞಾಪಿಸುತ್ತಿದ್ದೇನೆ. 18 § 1 ತಿಮೊ 3:9 ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ. 19 * 2 ತಿಮೊ 2:7; ಹುಮೆನಾಯನೂ † 1 ತಿಮೊ 4:14 ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ‡ ಕೊರಿ 5:5 ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು. 20
ಒಟ್ಟು 6 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 6
1 2 3 4 5 6
Common Bible Languages
West Indian Languages
×

Alert

×

kannada Letters Keypad References