ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
1 ತಿಮೊಥೆಯನಿಗೆ
1. {#1ಸಭಾಧ್ಯಕ್ಷರೂ ಸಭಾಸೇವಕರೂ ಯೋಗ್ಯರಾಗಿರಬೇಕು } [PS] [* ಅ. ಕೃ 20:28 ]ಸಭಾಧ್ಯಕ್ಷನ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.
2. [† ತೀತ 1:6-9 ]ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, [‡ ವ. 11 ]ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, [§ 1 ಪೇತ್ರ 4:9 ]ಅತಿಥಿಸತ್ಕಾರಮಾಡುವವನೂ, [* 2 ತಿಮೊ 2:24 ]ಬೋಧಿಸಲು ಶಕ್ತನಾಗಿರಬೇಕು.
3. ಅವನು ಕುಡಕನು, ಜಗಳವಾಡುವವನೂ ಆಗಿರದೆ, [† ತೀತ 3:2 ]ಸಾತ್ವಿಕನೂ, ಹೊಡೆದಾಡದವನೂ [‡ 1 ತಿಮೊ 6:10; ಇಬ್ರಿ. 13:5 ]ದ್ರವ್ಯಾಶೆಯಿಲ್ಲದವನೂ ಆಗಿರಬೇಕು.
4. ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು, ಸ್ವಂತ ಮನೆಯವರನ್ನು ಚೆನ್ನಾಗಿ ನಡೆಸುವವನಾಗಿರಬೇಕು.
5. [§ ವ 12 ]ಸ್ವಂತ ಮನೆಯವರನ್ನು ನಡೆಸುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು?
6. ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.
7. ಇದಲ್ಲದೆ ಅವನು [* ಮಾರ್ಕ 4:11; ಕೊಲೊ 4:5 ]ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು [† 2 ತಿಮೊ 2:26; 1 ತಿಮೊ 6:9 ]ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು. [PE]
8. [PS]ಅದೇ ರೀತಿಯಾಗಿ [‡ 1 ತಿಮೊ 6:9 ]ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, [§ ತೀತ 2:3; 1 ತಿಮೊ 5:23 ]ಮದ್ಯಾಸಕ್ತರೂ, [* ತೀತ 1:7; 1 ಪೇತ್ರ 5:2 ]ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ,
9. ನಂಬಿಕೆಯಿಂದ ಪ್ರಕಟವಾಗಿರುವ [† 1 ತಿಮೊ 1:19 ]ಸತ್ಯಾರ್ಥವನ್ನು ಶುದ್ಧ ಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು.
10. ಇದಲ್ಲದೆ [‡ 1 ತಿಮೊ 5:22 ]ಅವರು ಮೊದಲು ಪರೀಕ್ಷಿಸಲ್ಪಡಬೇಕು, ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನೆರವೇರಿಸಲಿ.
11. ಹಾಗೆಯೇ [§ ಅವರ ಹೆಂಡತಿಯರಾದ ]ಸಭಾಸೇವಕಿಯರಾದ ಸ್ತ್ರೀಯರೂ [* ತೀತ 2:3 ]ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.
12. ಸಭಾಸೇವಕರು ಏಕಪತ್ನಿಯುಳ್ಳವರೂ, [† 1 ತಿಮೊ 3:2,4 ]ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು.
13. [‡ ಮತ್ತಾ 25:21 ]ಸಭಾಸೇವಕರಾಗಿ ಚೆನ್ನಾಗಿ ಕೆಲಸ ಮಾಡಿರುವವರು ತಮಗೆ ಒಳ್ಳೆಯ ಪದವಿಯನ್ನೂ, ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹುಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ. [PE]
14. {#1ಮಹಾ ರಹಸ್ಯ } [PS]ಬೇಗನೆ ನಿನ್ನ ಬಳಿಗೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.
15. ಆದರೆ ಒಂದು ವೇಳೆ ನಾನು ತಡಮಾಡಿದರೂ, [§ ಎಫೆ 2:21; 2 ತಿಮೊ 2:20; ಇಬ್ರಿ 3:6 ]ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ. [PE]
16. [PS]ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, [PE][QS][* ಯೋಹ 1:14; 1 ಪೇತ್ರ 1:20; 1 ಯೋಹಾ 1:2,3,4,5,8 ]ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, [QE][QS2]ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, [QE][QS2]ದೇವದೂತರಿಗೆ ಕಾಣಿಸಿಕೊಂಡನು, [QE][QS] [† ಗಲಾ 2:2 ]ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, [QE][QS2] [‡ 2 ಥೆಸ 1:10 ]ಲೋಕದಲ್ಲಿ ನಂಬಲ್ಪಟ್ಟನು, [QE][QS2] [§ ಅ. ಕೃ 1:2 ]ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು. [QE]
ಒಟ್ಟು 6 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 6
1 2 3 4 5 6
ಸಭಾಧ್ಯಕ್ಷರೂ ಸಭಾಸೇವಕರೂ ಯೋಗ್ಯರಾಗಿರಬೇಕು 1 * ಅ. ಕೃ 20:28 ಸಭಾಧ್ಯಕ್ಷನ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ. 2 ತೀತ 1:6-9 ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ‡ ವ. 11 ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, § 1 ಪೇತ್ರ 4:9 ಅತಿಥಿಸತ್ಕಾರಮಾಡುವವನೂ, * 2 ತಿಮೊ 2:24 ಬೋಧಿಸಲು ಶಕ್ತನಾಗಿರಬೇಕು. 3 ಅವನು ಕುಡಕನು, ಜಗಳವಾಡುವವನೂ ಆಗಿರದೆ, ತೀತ 3:2 ಸಾತ್ವಿಕನೂ, ಹೊಡೆದಾಡದವನೂ ‡ 1 ತಿಮೊ 6:10; ಇಬ್ರಿ. 13:5 ದ್ರವ್ಯಾಶೆಯಿಲ್ಲದವನೂ ಆಗಿರಬೇಕು. 4 ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು, ಸ್ವಂತ ಮನೆಯವರನ್ನು ಚೆನ್ನಾಗಿ ನಡೆಸುವವನಾಗಿರಬೇಕು. 5 § ವ 12 ಸ್ವಂತ ಮನೆಯವರನ್ನು ನಡೆಸುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು? 6 ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು. 7 ಇದಲ್ಲದೆ ಅವನು * ಮಾರ್ಕ 4:11; ಕೊಲೊ 4:5 ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು † 2 ತಿಮೊ 2:26; 1 ತಿಮೊ 6:9 ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು. 8 ಅದೇ ರೀತಿಯಾಗಿ 1 ತಿಮೊ 6:9 ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, § ತೀತ 2:3; 1 ತಿಮೊ 5:23 ಮದ್ಯಾಸಕ್ತರೂ, * ತೀತ 1:7; 1 ಪೇತ್ರ 5:2 ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ, 9 ನಂಬಿಕೆಯಿಂದ ಪ್ರಕಟವಾಗಿರುವ 1 ತಿಮೊ 1:19 ಸತ್ಯಾರ್ಥವನ್ನು ಶುದ್ಧ ಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು. 10 ಇದಲ್ಲದೆ 1 ತಿಮೊ 5:22 ಅವರು ಮೊದಲು ಪರೀಕ್ಷಿಸಲ್ಪಡಬೇಕು, ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನೆರವೇರಿಸಲಿ. 11 ಹಾಗೆಯೇ § ಅವರ ಹೆಂಡತಿಯರಾದ ಸಭಾಸೇವಕಿಯರಾದ ಸ್ತ್ರೀಯರೂ * ತೀತ 2:3 ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು. 12 ಸಭಾಸೇವಕರು ಏಕಪತ್ನಿಯುಳ್ಳವರೂ, 1 ತಿಮೊ 3:2,4 ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು. 13 ಮತ್ತಾ 25:21 ಸಭಾಸೇವಕರಾಗಿ ಚೆನ್ನಾಗಿ ಕೆಲಸ ಮಾಡಿರುವವರು ತಮಗೆ ಒಳ್ಳೆಯ ಪದವಿಯನ್ನೂ, ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹುಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ. ಮಹಾ ರಹಸ್ಯ 14 ಬೇಗನೆ ನಿನ್ನ ಬಳಿಗೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ. 15 ಆದರೆ ಒಂದು ವೇಳೆ ನಾನು ತಡಮಾಡಿದರೂ, § ಎಫೆ 2:21; 2 ತಿಮೊ 2:20; ಇಬ್ರಿ 3:6 ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ. 16 ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, * ಯೋಹ 1:14; 1 ಪೇತ್ರ 1:20; 1 ಯೋಹಾ 1:2,3,4,5,8 ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಗಲಾ 2:2 ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, 2 ಥೆಸ 1:10 ಲೋಕದಲ್ಲಿ ನಂಬಲ್ಪಟ್ಟನು, § ಅ. ಕೃ 1:2 ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
ಒಟ್ಟು 6 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 6
1 2 3 4 5 6
×

Alert

×

Kannada Letters Keypad References