1. {ಸಭಾಧ್ಯಕ್ಷರೂ ಸಭಾಸೇವಕರೂ ಯೋಗ್ಯರಾಗಿರಬೇಕು} [PS] [* ಅ. ಕೃ 20:28] ಸಭಾಧ್ಯಕ್ಷನ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.
2. [† ತೀತ 1:6-9] ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, [‡ ವ. 11] ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, [§ 1 ಪೇತ್ರ 4:9] ಅತಿಥಿಸತ್ಕಾರಮಾಡುವವನೂ, [* 2 ತಿಮೊ 2:24] ಬೋಧಿಸಲು ಶಕ್ತನಾಗಿರಬೇಕು.
3. ಅವನು ಕುಡಕನು, ಜಗಳವಾಡುವವನೂ ಆಗಿರದೆ, [† ತೀತ 3:2] ಸಾತ್ವಿಕನೂ, ಹೊಡೆದಾಡದವನೂ [‡ 1 ತಿಮೊ 6:10; ಇಬ್ರಿ. 13:5] ದ್ರವ್ಯಾಶೆಯಿಲ್ಲದವನೂ ಆಗಿರಬೇಕು.
4. ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು, ಸ್ವಂತ ಮನೆಯವರನ್ನು ಚೆನ್ನಾಗಿ ನಡೆಸುವವನಾಗಿರಬೇಕು.
5. [§ ವ 12] ಸ್ವಂತ ಮನೆಯವರನ್ನು ನಡೆಸುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು?
6. ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.
7. ಇದಲ್ಲದೆ ಅವನು [* ಮಾರ್ಕ 4:11; ಕೊಲೊ 4:5] ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು [† 2 ತಿಮೊ 2:26; 1 ತಿಮೊ 6:9] ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು. [PE][PS]
8. ಅದೇ ರೀತಿಯಾಗಿ [‡ 1 ತಿಮೊ 6:9] ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, [§ ತೀತ 2:3; 1 ತಿಮೊ 5:23] ಮದ್ಯಾಸಕ್ತರೂ, [* ತೀತ 1:7; 1 ಪೇತ್ರ 5:2] ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ,
9. ನಂಬಿಕೆಯಿಂದ ಪ್ರಕಟವಾಗಿರುವ [† 1 ತಿಮೊ 1:19] ಸತ್ಯಾರ್ಥವನ್ನು ಶುದ್ಧ ಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು.
10. ಇದಲ್ಲದೆ [‡ 1 ತಿಮೊ 5:22] ಅವರು ಮೊದಲು ಪರೀಕ್ಷಿಸಲ್ಪಡಬೇಕು, ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನೆರವೇರಿಸಲಿ.
11. ಹಾಗೆಯೇ [§ ಅವರ ಹೆಂಡತಿಯರಾದ] ಸಭಾಸೇವಕಿಯರಾದ ಸ್ತ್ರೀಯರೂ [* ತೀತ 2:3] ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.
12. ಸಭಾಸೇವಕರು ಏಕಪತ್ನಿಯುಳ್ಳವರೂ, [† 1 ತಿಮೊ 3:2,4] ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು.
13. [‡ ಮತ್ತಾ 25:21] ಸಭಾಸೇವಕರಾಗಿ ಚೆನ್ನಾಗಿ ಕೆಲಸ ಮಾಡಿರುವವರು ತಮಗೆ ಒಳ್ಳೆಯ ಪದವಿಯನ್ನೂ, ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹುಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ. [PS]
14. {ಮಹಾ ರಹಸ್ಯ} [PS] ಬೇಗನೆ ನಿನ್ನ ಬಳಿಗೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.
15. ಆದರೆ ಒಂದು ವೇಳೆ ನಾನು ತಡಮಾಡಿದರೂ, [§ ಎಫೆ 2:21; 2 ತಿಮೊ 2:20; ಇಬ್ರಿ 3:6] ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ. [PE][PS]
16. ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, [QBR] [* ಯೋಹ 1:14; 1 ಪೇತ್ರ 1:20; 1 ಯೋಹಾ 1:2,3,4,5,8] ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, [QBR2] ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, [QBR2] ದೇವದೂತರಿಗೆ ಕಾಣಿಸಿಕೊಂಡನು, [QBR] [† ಗಲಾ 2:2] ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, [QBR2] [‡ 2 ಥೆಸ 1:10] ಲೋಕದಲ್ಲಿ ನಂಬಲ್ಪಟ್ಟನು, [QBR2] [§ ಅ. ಕೃ 1:2 ] ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು. [PE]