1. {#1ವಿಶ್ವಾಸಿಗಳೊಂದಿಗಿನ ಕರ್ತವ್ಯಗಳು } [PS] [* ಯಾಜ 19:32 ]ವೃದ್ಧರನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ,
2. ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು. [PE]
3. [PS](3-4)ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ [† ಮತ್ತಾ 15:4-6; ಮಾರ್ಕ 7:10-13; ಎಫೆ 6:1,2; ಆದಿ 45:9-11 ]ಮೊದಲು ತಮ್ಮ ಮನೆಯವರಿಗೆ ಭಕ್ತಿತೋರಿಸುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. [‡ 1 ತಿಮೊ. 2:3 ]ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
4.
5. ದಿಕ್ಕಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು, ದೇವರ ಮೇಲೆ ನಿರೀಕ್ಷೆಯನ್ನಿಟ್ಟು, [§ ಲೂಕ 2:37; 18:15 ]ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
6. ಆದರೆ ಸುಖಭೋಗದಲ್ಲಿರುವ ವಿಧವೆಯು [* ಪ್ರಕ 3:1 ]ಬದುಕಿದ್ದರೂ ಸತ್ತಂತೆಯೇ.
7. ವಿಧವೆಯರು ನಿಂದೆಗೆ ಗುರಿಯಾಗದಂತೆ [† 1 ತಿಮೊ. 4:11; 6:2 ]ಈ ವಿಷಯಗಳನ್ನು ಆಜ್ಞಾಪಿಸು.
8. ಯಾವನಾದರೂ ಸ್ವಂತ ಜನರನ್ನು, [‡ ಗಲಾ. 6:10 ]ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.
9. ವಯಸ್ಸಿನಲ್ಲಿ ಅರುವತ್ತು ವರ್ಷ ಮೇಲ್ಪಟ್ಟ, ವಿಧವೆಯನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬಹುದು. ಅಂಥವಳಾದರೂ [§ 1 ತಿಮೊ. 3:2 ]ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳಾಗಿ,
10. ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, [* ದೇವಜನರ ಕಾಲುಗಳನ್ನು ತೊಳೆಯುವುದು; ಆದಿ 18:4 ]ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ. [PE]
11. [PS]ಯೌವನ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ, ಅವರು ದೈಹಿಕ ಆಸೆಗಳಿಂದ ಸೋಲಿಸಲ್ಪಟ್ಟು, ಕ್ರಿಸ್ತನಿಗೆ ವಿಮುಖರಾಗಿ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು.
12. ಅಂಥವರು ತಾವು ಮೊದಲು ಮಾಡಿದ ಪ್ರತಿಜ್ಞೆಯನ್ನು ಉಲ್ಲಂಘಿಸಿ ತೀರ್ಪಿಗೆ ಗುರಿಯಾಗಿರುವರು.
13. ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, [† 3 ಯೋಹಾ 10 ]ಹರಟೆಮಾತನಾಡುವವರೂ, [‡ 2 ಥೆಸ. 3:11; 1 ಪೇತ್ರ 4:15 ]ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ.
14. ಆದ್ದರಿಂದ ಯೌವನ [§ 1 ಕೊರಿ 7:9 ]ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ [* 1 ತಿಮೊ 1:20 ]ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.
15. ಇಷ್ಟರೊಳಗೆ ಕೆಲವರು ಅಡ್ಡದಾರಿ ಹಿಡಿದು ಸೈತಾನನನ್ನು ಹಿಂಬಾಲಿಸಿದ್ದಾರೆ.
16. ನಂಬುವವಳಾದ ಸ್ತ್ರೀಯ ಬಂಧುಭಾಂಧವರಲ್ಲಿ ವಿಧವೆಯರಿದ್ದರೆ ಆಕೆಯೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯ ಮಾಡಬೇಕಾಗಿರುವುದರಿಂದ ಆಕೆಯು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು. [PE]
17. {#1ಹಿರಿಯರ ವಿಷಯದಲ್ಲಿ ನಡೆಯಬೇಕಾದ ರೀತಿ } [PS]ಚೆನ್ನಾಗಿ [† ರೋಮಾ. 12:8; 1 ಥೆಸ. 5:12; 1 ಕೊರಿ 12:28; ಇಬ್ರಿ. 13:7, 17 ]ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.
18. [‡ ಧರ್ಮೋ 25:4; 1 ಕೊರಿ 9:9 ]“ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದು,” ಮತ್ತು “ [§ ಮತ್ತಾ 10:10; ಲೂಕ 10:7; ಯಾಜ 19:13; ಧರ್ಮೋ 19:15; 1 ಕೊರಿ 9:4 7-14 ]ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ” ಎಂದು ಶಾಸ್ತ್ರದಲ್ಲಿ ಹೇಳಿದೆಯಲ್ಲಾ.
19. ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಒಪ್ಪಿಕೊಳ್ಳಬೇಡ.
20. ಪಾಪದಲ್ಲಿ ನಡೆಯುವವರನ್ನು [* ತೀತ 1:13; 2:15 ]ಎಲ್ಲರ ಮುಂದೆಯೇ ಗದರಿಸು. [† ಧರ್ಮೋ 13:11 ]ಇವರಿಂದ ಉಳಿದವರಿಗೂ ಭಯವುಂಟಾಗುವುದು.
21. ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.
22. [‡ 1 ತಿಮೊ. 3:10 ]ಅವಸರದಿಂದ [§ ಅ. ಕೃ. 6:6 ]ಯಾರ ತಲೆಯ ಮೇಲೆಯಾದರೂ [* ಹಸ್ತವನ್ನಿಡಬೇಡ ]ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. [† 2 ಯೋಹಾ 11 ]ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.
23. ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು [‡ 1 ತಿಮೊ. 3:8 ]ಸ್ವಲ್ಪವಾಗಿ ತೆಗೆದುಕೊ.
24. ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಯಲಾಗುತ್ತವೆ, ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ.
25. ಹಾಗೆಯೇ ಕೆಲವು ಸತ್ಕ್ರಿಯೆಗಳು ಪ್ರಸಿದ್ಧವಾಗಿವೆ, ಬೇರೆ ಕೆಲವು ಸತ್ಕ್ರಿಯೆಗಳು ಬೆಳಕಿಗೆ ಬಾರದ್ದಿದ್ದರೂ [§ ಕೀರ್ತ 37:6 ]ಮರೆಯಾಗಿರಲಾರವು. [PE]