1. {ಅರಸನಾದ ಯೆಹೋರಾಮನು} PS ಯೆಹೋಷಾಫಾಟನು ಪೂರ್ವಿಕರ ಬಳಿಗೆ ಸೇರಿದನು. ದಾವೀದನಗರದಲ್ಲಿ ಅವನನ್ನು ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದ ಮೇಲೆ, ಅವನ ಮಗನಾದ ಯೆಹೋರಾಮನು ಅರಸನಾದನು.
|
2. ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮಿಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರೂ ಇಸ್ರಾಯೇಲರ ಅರಸನಾದ ಯೆಹೋಷಾಫಾಟನ ಮಕ್ಕಳು.
|
3. ಇವರ ತಂದೆಯು ಇವರಿಗೆ ಯೆಹೂದದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನಲ್ಲದೆ ಬೆಳ್ಳಿ ಬಂಗಾರ, ಶ್ರೇಷ್ಠವಸ್ತು ಇತ್ಯಾದಿ ವಿಶೇಷ ದಾನಗಳನ್ನು ಕೊಟ್ಟನು. ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.
|
4. ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನ ಆಳ್ವಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ, ತನ್ನ ಎಲ್ಲಾ ಸಹೋದರರನ್ನೂ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನೂ ಕತ್ತಿಯಿಂದ ಸಂಹರಿಸಿದನು.
|
6. ಅವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ, ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
|
7. ಆದರೂ ಯೆಹೋವನು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ” ಎಂದು ಒಡಂಬಡಿಕೆ ಮಾಡಿ ಹೇಳಿದ್ದರಿಂದ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ. PEPS
|
8. ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು.
|
9. ಆಗ ಯೆಹೋರಾಮನು ರಾತ್ರಿಯಲ್ಲಿ ತನ್ನ ಸರದಾರರನ್ನೂ ಎಲ್ಲಾ ರಥಬಲವನ್ನೂ ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿದನು.ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲೇ ದಂಡೆತ್ತಿ ಹೋಗಿ ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು.
|
10. ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನ ವರೆಗೂ ಅವರ ಶತ್ರುಗಳಾಗಿಯೇ ಇದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಹೀಗಾಯಿತು.
|
11. ಅವನು ಯೆಹೂದದ ಗುಡ್ಡಗಳಲ್ಲಿ, ಪೂಜಾ ಸ್ಥಳಗಳನ್ನು ಏರ್ಪಡಿಸಿ ಯೆರೂಸಲೇಮಿನವರನ್ನು ದೈವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.
|
12. ಹೀಗಿರಲಾಗಿ, ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ, “ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು; ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸನಾದ ಆಸನ ಮಾರ್ಗದಲ್ಲಿ ನಡೆಯಲಿಲ್ಲ;
|
13. ಇಸ್ರಾಯೇಲ್ ರಾಜರ ಮಾರ್ಗದಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಪ್ರೇರೇಪಿಸಿರುವೆ; ಮತ್ತು ನಿನ್ನ ತಂದೆಯ ಕುಂಟುಂಬದವರೂ ನಿನಗಿಂತ ಉತ್ತಮರೂ, ನಿನ್ನ ಸಹೋದರರನ್ನೂ ಕೊಂದು ಹಾಕಿರುವೆ.
|
14. ಆದುದರಿಂದ ಯೆಹೋವನು ನಿನ್ನ ಪ್ರಜೆಗಳ, ಹೆಂಡತಿ ಮಕ್ಕಳನ್ನೂ, ಆಸ್ತಿಪಾಸ್ತಿ ಸರ್ವಸ್ವವನ್ನೂ ಮಹಾ ಆಪತ್ತಿಗೆ ಗುರಿಮಾಡುವನು.
|
15. ನಿನಗಾದರೋ ಕರುಳು ಬೇನೆಯ ಕಠಿಣ ರೋಗ ಬರುವುದು. ಅದು ಬಹು ದಿನಗಳವರೆಗೂ ಇದ್ದು ವಾಸಿಯಾಗದೇ ನಿನ್ನ ಕರುಳುಗಳು ಹೊರಗೆ ಬೀಳುವುವು” ಎಂದು ತಿಳಿಸಿದನು.
|
17. ಅವರು ಯೆಹೂದದ ಮೇಲೆ ಯುದ್ಧಕ್ಕೆ ಬಂದು, ದೇಶದೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲಾ ವಸ್ತುಗಳನ್ನೂ, ಅರಸನ ಹೆಂಡತಿಯರನ್ನೂ ಮತ್ತು ಮಕ್ಕಳನ್ನೂ ಸೆರೆಯಾಗಿ ಒಯ್ದರು. ಅವನಿಗೆ ಕಿರಿಯ ಮಗನಾದ ಯೆಹೋವಾಹಾಜನ ಹೊರತು, ಯಾವ ಮಕ್ಕಳೂ ಉಳಿಯಲಿಲ್ಲ.
|
19. ಕ್ರಮೇಣವಾಗಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಆದೇ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪ್ರಜೆಗಳು ಅವನ ಪೂರ್ವಿಕರಿಗಾಗಿ ಧೂಪಹಾಕಿದ ಹಾಗೆ ಅವನಿಗೆ ಹಾಕಲಿಲ್ಲ. PEPS
|
20. ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ರಾಜ್ಯಭಾರಮಾಡಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ. ಅವನು ಯಾರಿಗೂ ಇಷ್ಟವಿಲ್ಲದವನಾಗಿ ಗತಿಸಿಹೋದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜರ ಸಮಾಧಿಗಳಲ್ಲಿ ಅವನನ್ನು ಸಮಾಧಿಮಾಡಲಿಲ್ಲ. PE
|