1. {ಹೊಸ ಒಡಂಬಡಿಕೆಯ ಸೇವಕರು} PS * 2 ಕೊರಿ 5:12, 10:12, 12:11 ನಮ್ಮನ್ನು ನಾವೇ ಮತ್ತೆ ಹೊಗಳಿಕೊಳ್ಳುವುದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡೆದುಕೊಳ್ಳಬೇಕೋ?
|
2. ಸ್ವತಃ † 1 ಕೊರಿ 9:2 “ನೀವೇ ನಮ್ಮ ಯೋಗ್ಯತಾ ಪತ್ರ” ಅದು ನಮ್ಮ ಹೃದಯಗಳಲ್ಲೇ ಬರೆದಿದೆ ಆ ಪತ್ರವನ್ನು ಎಲ್ಲರೂ ಬಲ್ಲರು. ಎಲ್ಲರೂ ಓದುತ್ತಾರೆ.
|
3. ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. ‡ ವಿಮೋ 24:12, ಧರ್ಮೋ 4:13 ಕಲ್ಲಿನ ಹಲಿಗೆಯ ಮೇಲಲ್ಲಾ, § ಜ್ಞಾ. 3:3, 7:, ಯೆಹೆ. 11:19, 36:26 ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.
|
5. * ಎಫೆ 2:8 ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವುದಕ್ಕೆ ನಮಗೆ ನಾವೇ ಯೋಗ್ಯರಲ್ಲ † 1 ಕೊರಿ 5:10 ನಮಗಿರುವ ಯೋಗ್ಯತೆಯೂ ದೇವರಿಂದಲೇ ಬಂದದ್ದು.
|
6. ಆತನು ‡ ಯೆರೆ 31:31, ಲೂಕ 22:30, 1 ಕೊರಿ 11:25 ಹೊಸ ಒಡಂಬಡಿಕೆಗೆ § ಎಫೆ 3:7, 2 ಕೊರಿ 4:1, 5:18 ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ * ಆತ್ಮೀಕವಾದದ್ದು ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. † ಯೋಹಾ 6:63 ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.
|
7. ‡ 2 ಕೊರಿ 3:9, ರೋಮಾ. 4:15 ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ.
|
9. * 2 ಕೊರಿ 3:7, ಇಬ್ರಿ. 12:18-21 ಅಪರಾಧ ನಿರ್ಣಯಕ್ಕೆ ಸಾಧನವಾಗಿರುವ ಸೇವೆಯು ಮಹಿಮೆಹೊಂದಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೆಷ್ಟೋ ಅಧಿಕ ಮಹಿಮೆಯುಳ್ಳದ್ದಾಗಿ ಇರತ್ತದಲ್ಲವೋ?
|
11. ಅಳಿದು ಹೋಗುವಂಥದ್ದೇ, ಅಷ್ಟು ಪ್ರಭಾವವುಳ್ಳದ್ದಾಗಿದ್ದರೆ ಶಾಶ್ವತವಾಗಿ ಉಳಿಯುವಂಥದ್ದು ಮತ್ತೆಷ್ಟು ಹೆಚ್ಚಾದ ಪ್ರಭಾವವುಳ್ಳದ್ದಾಗಿರಬೇಕಲ್ಲವೋ?
|
13. ಕುಂದಿಹೋಗುವಂಥ ಮಹಿಮೆಯು ಕುಂದಿಹೋಗುವುದನ್ನು ಇಸ್ರಾಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಳ್ಳುತ್ತಿದ್ದನು. ನಾವು ಮೋಶೆಯಂತೆ ಮಾಡುವುದಿಲ್ಲ.
|
14. ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು † ಅ. ಕೃ. 13:15, 21 ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.
|
18. ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ * 2 ಕೊರಿ 4:4-6, ಯೋಹಾ 17:24 ಕರ್ತನ ಪ್ರಭಾವವನ್ನು † 1 ಕೊರಿ 13:12 ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ. PE
|