1. {ಯೆಹೂದದ ಅರಸನಾದ ಯೋಷೀಯನು} PS ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆಯು ಅವನ ತಾಯಿ.
|
2. ಅರಸನಾದ ಯೋಷೀಯನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಜನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು. PEPS
|
3. ಅರಸನಾದ ಯೋಷೀಯನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಚಲ್ಯನ ಮಗನೂ, ಮೆಷುಲ್ಲಾಮನ ಮೊಮ್ಮಗನೂ, ಯೆಹೋವನ ಆಲಯದ ಲೇಖಕನೂ * ಲೇಖಕನೂ ಕಾರ್ಯದರ್ಶಿ. ಆದ ಶಾಫಾನನನ್ನು ಕರೆದು ಅವನಿಗೆ,
|
4. “ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ, ಅವನಿಗೆ ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಬೇಕು,
|
5. ಅದಲ್ಲದೆ ಆಲಯದ ಕೆಲಸಮಾಡಿಸುವ ಮುಖ್ಯಸ್ಥರಿಗೆ ಅದನ್ನು ಒಪ್ಪಿಸು ಎಂದು ಹೇಳಬೇಕು, ಮುಖ್ಯಸ್ಥರು ಅದನ್ನು ಯೆಹೋವನ ಆಲಯದ ದುರಸ್ತಿ ಕೆಲಸಕ್ಕೆ ಉಪಯೋಗಿಸಲಿ,
|
6. ಬಡಗಿ, ಶಿಲ್ಪಿ, ಮೇಸ್ತ್ರಿ ಮೊದಲಾದವರ ಸಂಬಳಕ್ಕಾಗಿಯೂ, ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಅದನ್ನು ಉಪಯೋಗಿಸಿಕೊಳ್ಳಲಿ,
|
7. ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲ್ಪಡುವ ಹಣದ ಲೆಕ್ಕವನ್ನು ಕೇಳಬಾರದು” ಎಂದು ಆಜ್ಞಾಪಿಸಿ ಅವನನ್ನು ಯೆಹೋವನ ಆಲಯಕ್ಕೆ ಕಳುಹಿಸಿದನು. PS
|
8. {ಧರ್ಮೋಪದೇಶಗ್ರಂಥವು ದೊರೆತದ್ದು} PS ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ, ಅದನ್ನು ಅವನ ಕೈಯಲ್ಲಿ ಕೊಟ್ಟನು. ಶಾಫಾನನು ಅದನ್ನು ಓದಿದನು.
|
9. ಅನಂತರ ಲೇಖಕನಾದ ಶಾಫಾನನು ಹಿಂತಿರುಗಿ ಅರಸನ ಬಳಿಗೆ ಹೋಗಿ, “ನಿನ್ನ ಸೇವಕರು ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮುಖ್ಯಸ್ಥರಿಗೆ ಒಪ್ಪಿಸಿದರು.
|
10. ಇದಲ್ಲದೆ, ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು. PEPS
|
12. ಅರಸನು ಯಾಜಕನಾದ ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕಾಯನ ಮಗನಾದ ಅಕ್ಬೋರ್, ಲೇಖಕನಾದ ಶಾಫಾನ್, ತನ್ನ ಸಹಾಯಕನಾದ ಅಸಾಯ ಎಂಬುವವರಿಗೆ,
|
13. “ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.
|
14. ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ, ಎಂಬುವವರು “ಹುಲ್ದ” ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ, ತಿಕ್ವನ ಮಗನೂ, ಯಾಜಕವಸ್ತ್ರಾಗಾರದ † ಯಾಜಕವಸ್ತ್ರಾಗಾರದ ಅಥವಾ ರಾಜವಸ್ತ್ರಾಗಾರದ. ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಪತಿ. ಈಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸಿಸುತ್ತಿದ್ದಳು.
|
16. ಯೆಹೋವನು, ‘ಈ ದೇಶದ ಮೇಲೆಯೂ ಮತ್ತು ಜನರ ಮೇಲೆಯೂ ಯೆಹೂದದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಆಪತ್ತುಗಳನ್ನು ಬರಮಾಡುವನು.
|
17. ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ’ ಎನ್ನುತ್ತಾನೆ.
|
18. ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಇಸ್ರಾಯೇಲರ ದೇವರಾದ ಯೆಹೋವನ ಮಾತೇನೆಂದರೆ,
|
19. ‘ನಾನು ಈ ದೇಶವನ್ನೂ, ನಿವಾಸಿಗಳನ್ನೂ, ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುವುದನ್ನು ನೀನು ಕೇಳಿದಾಗ, ದುಃಖಪಟ್ಟು ಯೆಹೋವನಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು’
|
20. ಆದುದರಿಂದ, ‘ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಆಶೀರ್ವದಿಸುವೆನು’ ಎಂದು ಹೇಳಿದ್ದನ್ನು ತಿಳಿಸಿರಿ” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು. PE
|