1. {ಧರ್ಮಸಂಸ್ಥಾಪನೆ} PS ಅನಂತರ ಅರಸನು ದೂತರ ಮುಖಾಂತರವಾಗಿ ಯೆರೂಸಲೇಮಿನ ಮತ್ತು ಯೆಹೂದ ಪ್ರಾಂತ್ಯಗಳಲ್ಲಿರುವ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು.
|
2. ಅರಸನು ಯೆರೂಸಲೇಮಿನವರನ್ನೂ, ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.
|
3. ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.
|
4. ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.
|
5. ಇದಲ್ಲದೆ, ಯೆಹೂದ ಪ್ರಾಂತ್ಯದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಸುತ್ತಣ ಪ್ರದೇಶಗಳಲ್ಲಿಯೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ, ಬಾಳನಿಗೂ, ಸೂರ್ಯ, ಚಂದ್ರ ಹಾಗೂ ನಕ್ಷತ್ರಗಳು ಎನಿಸಿಕೊಳ್ಳುವ ಆಕಾಶಸೈನ್ಯಕ್ಕೂ, ಧೂಪಹಾಕುವುದಕ್ಕಾಗಿ ಯೆಹೂದ ರಾಜರಿಂದ ನೇಮಿಸಲ್ಪಟ್ಟ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು.
|
6. ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.
|
7. ಯೆಹೋವನ ಆಲಯದ ಪ್ರಾಕಾರದೊಳಗಿದ್ದ ದೇವದಾಸ, ವೇಶ್ಯವೃತ್ತಿಯವರ ಮನೆಗಳನ್ನು ಕೆಡವಿಹಾಕಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ್ ದೇವತೆಗಳಿಗಾಗಿ ಗುಡಾರದ ಬಟ್ಟೆಗಳನ್ನು ನೇಯುತ್ತಿದ್ದರು.
|
8. ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಯೆಹೂದ ಪಟ್ಟಣಗಳ ಎಲ್ಲಾ ಯಾಜಕರನ್ನು ಕರೆಯಿಸಿಕೊಂಡು ಅವರು ಧೂಪಹಾಕುತ್ತಿದ್ದ ಪೂಜಾಸ್ಥಳಗಳನ್ನು ನಾಶಮಾಡಿಸಿದನು. ಪುರಾಧಿಕಾರಿಯಾದ ಯೆಹೋಶುವನ ಬಾಗಿಲಿನ ಎಡಗಡೆಯಲ್ಲಿದ್ದ ದ್ವಾರಗಳ ದೇವತೆಯ ಪೂಜಾಸ್ಥಳಗಳನ್ನು ಕೆಡವಿ ಹಾಕಿಸಿದನು.
|
9. ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕಿದರೂ, ಅವರಿಗೆ ಯೆರೂಸಲೇಮಿನಲ್ಲಿದ್ದ ಯೆಹೋವನ ಯಜ್ಞವೇದಿಯ ಸಮೀಪಕ್ಕೆ ಹೋಗುವುದಕ್ಕೆ ಅಪ್ಪಣೆಯಿರಲಿಲ್ಲ.
|
10. ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೆನ್ ಹಿನ್ನೋಮ್ ತಗ್ಗಿನಲ್ಲಿದ್ದ “ತೋಫೆತ್” ಎಂಬ ಯಜ್ಞವೇದಿಯ ಸ್ಥಳವನ್ನು ಹೊಲೆಮಾಡಿದನು.
|
11. ಯೆಹೂದ ರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಟ್ಟುಬಿಟ್ಟನು. ಅವು ಯೆಹೋವನ ಆಲಯದ ಹೆಬ್ಬಾಗಿಲಿನ ಹೊರಗೆ “ಪರ್ವರೀಮ್” ಎಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು.
|
12. ಇದಲ್ಲದೆ, ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ, ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿ ಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
|
13. ಇಸ್ರಾಯೇಲರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್ ದೇವತೆ, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಯೆರೂಸಲೇಮಿನ ಎದುರಿನಲ್ಲಿಯೂ, ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ್ದ ಪೂಜಾಸ್ಥಳಗಳನ್ನು ಅರಸನು ಹೊಲೆ ಮಾಡಿದನು.
|
14. ಕಲ್ಲು ಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಬಿಟ್ಟು ಅವುಗಳಲ್ಲಿದ್ದ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
|
15. ಇದಲ್ಲದೆ, ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ನಿರ್ಮಿಸಿದ್ದ ಪೂಜಾಸ್ಥಳವನ್ನೂ, ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿನು.
|
16. ಯೋಷೀಯನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡಗಳಲ್ಲಿ ಸಮಾಧಿಗಳನ್ನು ಕಂಡು, ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ ಆ ಯಜ್ಞವೇದಿಯ ಮೇಲೆ ಸುಟ್ಟು ಅವುಗಳನ್ನು ನಾಶಮಾಡಿದನು. ಹೀಗೆ ದೇವರ ಮನುಷ್ಯನೊಬ್ಬನು ಪ್ರಕಟಿಸಿದ ಯೆಹೋವನ ವಾಕ್ಯವು ನೆರವೇರಿತು.
|
17. ಇದಲ್ಲದೆ, ಅವನು ಒಂದು ಸಮಾಧಿಶಿಲೆಯನ್ನು ಕಂಡು, ಅದು ಏನು? ಎಂದು ವಿಚಾರಿಸಲು ಆ ಊರಿನವರು, “ನೀನು ಈಗ ಬೇತೇಲಿನ ಯಜ್ಞವೇದಿಗೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದ ದೇಶದವನಾದ ದೇವರ ಮನುಷ್ಯನ ಸಮಾಧಿ” ಎಂದು ಉತ್ತರಕೊಟ್ಟರು.
|
18. ಆಗ ಯೋಷೀಯನು, “ಬಿಡಿರಿ, ಆ ಮನುಷ್ಯನ ಎಲುಬುಗಳನ್ನು ಯಾರೂ ಮುಟ್ಟಬಾರದು” ಎಂದು ಹೇಳಿದನು. ಆದುದರಿಂದ ಅವರು ಅವನ ಮತ್ತು ಸಮಾರ್ಯದೇಶದ ಪ್ರವಾದಿಯ ಎಲುಬುಗಳನ್ನು ಮುಟ್ಟಲಿಲ್ಲ.
|
19. ಇಸ್ರಾಯೇಲ್ ರಾಜರು ಸಮಾರ್ಯದ ಪಟ್ಟಣಗಳಲ್ಲಿ ಪೂಜಾಸ್ಥಳಗಳನ್ನು ಗುಡಿಗಳನ್ನು ಕಟ್ಟಿಸಿ, ಯೆಹೋವನ ಕೋಪಕ್ಕೆ ಕಾರಣವಾದಂಥವುಗಳನ್ನು ಯೋಷೀಯನು ತೆಗೆದುಕೊಂಡು, ಬೇತೇಲಿನಲ್ಲಿ ನಾಶಮಾಡಿದ ಹಾಗೆ ಅವೆಲ್ಲವನ್ನು ನಾಶಮಾಡಿದನು.
|
20. ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಯ ಮೇಲೆ ವಧಿಸಿ ಆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ಹಿಂದಿರುಗಿ ಹೋದನು. PS
|
21. {ಪಸ್ಕಹಬ್ಬದ ಆಚರಣೆ} PS ಅನಂತರ ಅರಸನು ಎಲ್ಲಾ ಜನರಿಗೆ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು” ಎಂದು ಆಜ್ಞಾಪಿಸಿದನು.
|
22. ಇಂಥ ಪಸ್ಕಹಬ್ಬವು ಇಸ್ರಾಯೇಲರನ್ನು ಪಾಲಿಸಿದ ನ್ಯಾಯಸ್ಥಾಪಕರ ಕಾಲದಲ್ಲಾಗಲಿ, ಇಸ್ರಾಯೇಲರ ಮತ್ತು ಯೆಹೂದ್ಯರ ಅರಸರ ಕಾಲದಲ್ಲಾಗಲಿ ನಡೆಯಲೇ ಇಲ್ಲ.
|
23. ಈ ಪಸ್ಕಹಬ್ಬವು ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಯೆರೂಸಲೇಮಿನಲ್ಲಿ ಯೆಹೋವನಿಗಾಗಿ ಆಚರಿಸಲ್ಪಟ್ಟಿತು.
|
24. ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು.
|
25. ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಹಿಂದಿನ ಕಾಲದಲ್ಲೂ ಆ ನಂತರದ ಕಾಲದಲ್ಲೂ ಇರಲಿಲ್ಲ.
|
27. ಯೆಹೋವನು, “ಇಸ್ರಾಯೇಲರನ್ನು ತೆಗೆದುಹಾಕಿದಂತೆ, ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು, ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮದ ಮಹಿಮೆಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು. PEPS
|
29. ಅವನ ಕಾಲದಲ್ಲಿ, ಐಗುಪ್ತದ ಅರಸನಾದ ಫರೋಹ ನೆಕೋ ಎಂಬುವವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ಎದ್ದು ಯುದ್ಧಮಾಡುವುದಕ್ಕಾಗಿ ಯೂಫ್ರೆಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಅಲ್ಲಿ ಅವನಿಂದ ಹತನಾದನು.
|
30. ಯೋಷೀಯನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ನಂತರ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು. PS
|
31. {ಯೆಹೂದದ ಅರಸನಾದ ಯೆಹೋವಾಹಾಜನು} PS ಯೆಹೋವಾಹಾಜನು ಅರಸನಾದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಲಿಬ್ನದವನಾದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.
|
33. ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ * ನೂರು ತಲಾಂತು ಬೆಳ್ಳಿಯನ್ನೂ ಮೂರು ಸಾವಿರದ ನಾಲ್ಕು ನೂರು ಕಿಲೋಗ್ರಾಂ. , ಒಂದು ತಲಾಂತು ಬಂಗಾರವನ್ನೂ † ಒಂದು ತಲಾಂತು ಬಂಗಾರವನ್ನೂ ಮೂವತ್ತನಾಲ್ಕು ಕಿಲೋಗ್ರಾಂ. ದಂಡ ತೆರಬೇಕಾಯಿತು.
|
34. ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು. ಯೆಹೋವಾಹಾಜನು ಅಲ್ಲಿ ಮರಣ ಹೊಂದಿದನು.
|
35. ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿ ಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ದೇಶದಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ವಸೂಲಿಮಾಡಿಕೊಂಡು ಫರೋಹ ನೆಕೋವನಿಗೆ ತಂದೊಪ್ಪಿಸಿದನು. PS
|
36. {ಯೆಹೂದದ ಅರಸನಾದ ಯೆಹೋಯಾಕೀಮನು} PS ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ರೂಮನ ಪೆದಾಯನ ಮಗಳಾದ ಜೆಬೂದಾ ಎಂಬಾಕೆಯು ಅವನ ತಾಯಿ.
|