1. ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು.
|
2. ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಯೆಹೋವನ ವಾಕ್ಯದ ಪ್ರಕಾರ ಯೆಹೂದ ರಾಜ್ಯವನ್ನು ಹಾಳುಮಾಡುವುದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಅಲ್ಲಿಗೆ ಕಳುಹಿಸಿದನು.
|
3. ಯೆಹೂದ ರಾಜ್ಯದ ನಿರಪರಾಧಿಗಳ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸದೆ ಹೋದನು.
|
4. ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.
|
5. ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ (ಇತಿಹಾಸ) ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
|
7. ಬಾಬೆಲಿನ ಅರಸನು ಐಗುಪ್ತದ ಕಣಿವೆಯಿಂದ ಯೂಫ್ರೆಟಿಸ್ ನದಿವರೆಗೂ ಇದ್ದ, ಎಲ್ಲಾ ಭೂಪ್ರದೇಶವನ್ನು ಸ್ವಾಧೀನಮಾಡಿಕೊಂಡನು. ಅನಂತರ ಐಗುಪ್ತದ ಅರಸನು ತನ್ನ ದೇಶದಿಂದ ರಾಜ್ಯವ್ಯಾಪ್ತಿಗಾಗಿ ಹೊರಡಲಿಲ್ಲ. PS
|
8. {ಯೆಹೂದದ ಅರಸನಾದ ಯೆಹೋಯಾಖೀನನು} PS ಯೆಹೋಯಾಖೀನನು ಅರಸನಾದಾಗ ಅವನು ಹದಿನೆಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಯೆರೂಸಲೇಮಿನ ಎಲ್ನಾತಾನನ ಮಗಳಾದ ನೆಹುಷ್ಟಾ ಎಂಬಾಕೆಯು ಇವನ ತಾಯಿ.
|
10. ಇವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇಮ್ ಪಟ್ಟಣಕ್ಕೆ ವಿರುದ್ಧವಾಗಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು.
|
11. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಮುತ್ತಿಗೆ ಹಾಕಿದ ಯೆರೂಸಲೇಮ್ ಪಟ್ಟಣಕ್ಕೆ ನೆಬೂಕದ್ನೆಚ್ಚರನೂ ಬಂದನು.
|
12. ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿಯ ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಬಾಬೆಲಿನ ಅರಸನ ಬಳಿಗೆ ಹೋದನು. ಬಾಬೆಲಿನ ಅರಸನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.
|
13. ಇದಲ್ಲದೆ, ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಸನ ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದ್ರವ್ಯವನ್ನು ತೆಗೆದುಕೊಂಡು ಹೋದನು. ಇಸ್ರಾಯೇಲರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.
|
14. ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.
|
15. ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀನನನ್ನೂ, ಅವನ ತಾಯಿ, ಹೆಂಡತಿ, ಕಂಚುಕಿಗಳನ್ನೂ ಮತ್ತು ದೇಶದ ಪ್ರಧಾನ ಪುರುಷರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ತೆಗೆದುಕೊಂಡುಹೋದನು.
|
16. ಬಾಬೆಲಿನ ಅರಸನು ಏಳು ಸಾವಿರ ಮಂದಿ ಭಟರನ್ನೂ, ಸಾವಿರ ಮಂದಿ ಕಮ್ಮಾರರನ್ನೂ, ಬಡಗಿಗಳನ್ನು ಯೆರೂಸಲೇಮಿನಿಂದ ಬಾಬಿಲೋನಿಗೆ ಕರೆದುಕೊಂಡು ಹೋದನು. ಅವರೆಲ್ಲರೂ ಪರಾಕ್ರಮಶಾಲಿಗಳೂ ಯುದ್ಧವೀರರೂ ಆಗಿದ್ದರು.
|
17. ಬಾಬೆಲಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಚಿದ್ಕೀಯನೆಂದು ಹೆಸರಿಟ್ಟನು. PS
|
18. {ಯೆಹೂದದ ಅರಸನಾದ ಚಿದ್ಕೀಯನು} PS ಚಿದ್ಕೀಯನು ತನ್ನ ಇಪ್ಪತ್ತೊಂದನೆಯ ವರ್ಷ ತುಂಬಿದ ಮೇಲೆ ಅರಸನಾಗಿ ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಲಿಬ್ನ ಪಟ್ಟಣದವನಾದ, ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.
|
20. ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು. PE
|