1. {ಯೆಹೂದದ ಅರಸನಾದ ಅಜರ್ಯ} PS ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ಅರಸನಾದನು.
|
2. ಅಜರ್ಯನು ಪಟ್ಟಕ್ಕೆ ಬಂದಾಗ ಅವನು ಹದಿನಾರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆ ಇವನ ತಾಯಿ.
|
4. ಆದರೆ, ಇವನ ಕಾಲದಲ್ಲಿಯೂ ಪೂಜಾಸ್ಥಳಗಳು ತೆಗೆಯಲ್ಪಡಲಿಲ್ಲವಾದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.
|
5. ಯೆಹೋವನು ಅವನನ್ನು ಕುಷ್ಠರೋಗದಿಂದ ಶಿಕ್ಷಿಸಿದನು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾಧಿಪತ್ಯವನ್ನೂ, ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು. PEPS
|
7. ಅಜರ್ಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ರಾಜಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೋತಾಮನು ಅರಸನಾದನು. PS
|
8. {ಇಸ್ರಾಯೇಲರ ಅರಸನಾದ ಜೆಕರ್ಯ} PS ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಆರು ತಿಂಗಳು ಆಳಿದನು.
|
9. ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. PEPS
|
10. ಯಾಬೇಷನ ಮಗನಾದ ಶಲ್ಲೂಮನು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಪ್ರಜೆಗಳ ಮುಂದೆಯೇ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.
|
12. “ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂಬುದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು. PS
|
13. {ಇಸ್ರಾಯೇಲರ ಅರಸನಾದ ಶಲ್ಲೂಮನು} PS ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.
|
14. ಗಾದಿಯ ಮಗನಾದ ಮೆನಹೇಮನೆಂಬುವನು ತಿರ್ಚದಿಂದ ಸಮಾರ್ಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದು, ಅವನಿಗೆ ಬದಲಾಗಿ ತಾನು ಅರಸನಾದನು.
|
15. ಶಲ್ಲೂಮನ ಉಳಿದ ಚರಿತ್ರೆಯೂ ಮತ್ತು ಅವನ ಒಳಸಂಚಿನ ವಿವರವೂ ಇಸ್ರಾಯೇಲ್ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.
|
16. ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ, ಆದುದರಿಂದ ಅವನು ಆ ಊರನ್ನು ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಯನ್ನು ಸೀಳಿಹಾಕಿಸಿದನು. PS
|
17. {ಇಸ್ರಾಯೇಲರ ಅರಸನಾದ ಮೆನಹೇಮನು} PS ಯೆಹೂದದ ಅರಸನಾದ * ಅಂದರೆ ಉಜ್ಜೀಯ. ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರ್ಷ ಆಳಿದನು.
|
18. ಇವನು ಜೀವದಿಂದ ಇರುವವರೆಗೂ ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
|
19. ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ † ಸುಮಾರು 34,000 ಕಿಲೋಗ್ರಾಂ. ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.
|
20. ಮೆನಹೇಮನು ಅಶ್ಶೂರದ ಅರಸನಿಗೆ ಆ ಹಣವನ್ನು ಕೊಡುವುದಕ್ಕಾಗಿ ಇಸ್ರಾಯೇಲರ ಪ್ರತಿಯೊಬ್ಬ ಐಶ್ವರ್ಯವಂತನಿಂದ ‡ ಸುಮಾರು 570 ಕಿಲೋಗ್ರಾಂ. ಐವತ್ತು ರೂಪಾಯಿಗಳನ್ನು ವಸೂಲಿಮಾಡಿಕೊಂಡನು. ಆ ಹಣವು ಸಿಕ್ಕಿದ ನಂತರ ಅಶ್ಶೂರದ ಅರಸನು ಅಲ್ಲಿ ನಿಲ್ಲದೆ ಹಿಂತಿರುಗಿ ಹೋದನು. PEPS
|
23. {ಇಸ್ರಾಯೇಲರ ಅರಸನಾದ ಪೆಕಹ್ಯ} PS ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳಿದನು.
|
24. ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. PEPS
|
25. ಇವನ ಸರದಾರನೂ, ರೆಮಲ್ಯನ ಮಗನೂ ಆಗಿದ್ದ ಪೆಕಹನು, ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಇವನನ್ನೂ ಅರ್ಗೋಬ್, ಅರ್ಯೇ ಎಂಬವರನ್ನೂ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.
|
26. ಪೆಕಹ್ಯನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ. PS
|
27. {ಇಸ್ರಾಯೇಲರ ಅರಸನಾದ ಪೆಕಹ} PS ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತು ವರ್ಷ ಆಳಿದನು.
|
28. ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. PEPS
|
29. ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.
|
30. ಆಗ ಏಲನ ಮಗನಾದ ಹೋಶೇಯನು, ರೆಮಲ್ಯನ ಮಗನಾದ ಪೆಕಹನಿಗೆ ವಿರುದ್ಧವಾಗಿ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.
|
31. ಪೆಕಹನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ. PS
|
32. {ಇಸ್ರಾಯೇಲರ ಅರಸನಾದ ಯೋತಾಮನು} PS ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಉಜ್ಜೀಯನ ಮಗನಾದ ಯೋತಾಮನು ಆಳತೊಡಗಿದನು.
|
33. ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಇವನು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷಾ ಇವನ ತಾಯಿ.
|
35. ಆದರೆ ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಸಮರ್ಪಿಸುತ್ತಿದ್ದರು. ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿದವನು ಇವನೇ.
|
36. ಯೋತಾಮನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ. PEPS
|
37. ಯೆಹೋವನು ಆ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನನ್ನೂ, ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದ್ಯರಿಗೆ ವಿರೋಧವಾಗಿ ಕಳುಹಿಸತೊಡಗಿದನು.
|
38. ಯೋತಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಅವನ ಪೂರ್ವಿಕರ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಆಹಾಜನು ಅರಸನಾದನು. PE
|