1. ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೂ, ರಾಜ್ಯವನ್ನು ತಿರುಗಿ ತನ್ನ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಭತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.
|
4. ಯೆಹೋವನು ಇಂತೆನ್ನುತ್ತಾನೆ, ‘ನೀವು ನಿಮ್ಮ ಸಹೋದರರೊಡನೆ * ಸಹೋದರರೊಡನೆ ಅಥವಾ ಸಂಬಂಧಿಕರೊಡನೆ ಅಥವಾ ಉತ್ತರ ರಾಜ್ಯದವರಾದ ಯೆಹೂದ್ಯರೊಂದಿಗೆ. ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು’ ” ಎಂಬ ಯೆಹೋವನ ವಾಕ್ಯವುಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಡದೆ ಹಿಂತಿರುಗಿ ಹೋದರು. PS
|
5. {ಅರಸನಾದ ರೆಹಬ್ಬಾಮನು} PS ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸವಾಗಿದ್ದು ಯೆಹೂದ ಸಂರಕ್ಷಣೆಗಾಗಿ ಪಟ್ಟಣಗಳನ್ನು ಕಟ್ಟಿಸಿದನು.
|
11. ಅವನು ಈ ಕೋಟೆಗಳನ್ನು ಬಲಪಡಿಸಿ, ನಾಯಕರ ವಶಕ್ಕೆ ಕೊಟ್ಟು, ಪ್ರತಿ ಒಂದರಲ್ಲಿ ಆಹಾರಪದಾರ್ಥ, ಎಣ್ಣೆ, ದ್ರಾಕ್ಷಾರಸವನ್ನು ಸಂಗ್ರಹಿಸಿಟ್ಟನು. ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿಟ್ಟನು.
|
12. ಪ್ರತಿಯೊಂದು ಪಟ್ಟಣದಲ್ಲಿ ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿ, ಅವುಗಳನ್ನು ಮತ್ತಷ್ಟು ಭದ್ರಪಡಿಸಿದನು. ಯೆಹೂದ ಬೆನ್ಯಾಮೀನ್ ಕುಲಗಳು ಅವನ ಸ್ವಾಧೀನದಲ್ಲಿದ್ದವು.
|
14. ಲೇವಿಯರು ಯೆಹೋವನಿಗೆ ಯಾಜಕ ಸೇವೆ ಮಾಡದಂತೆ ಯಾರೊಬ್ಬಾಮನೂ ಮತ್ತು ಅವನ ಮಕ್ಕಳೂ ಅವರನ್ನು ಬಹಿಷ್ಕರಿಸಿದ್ದರಿಂದ ಲೇವಿಯರು ತಮ್ಮ ಹುಲ್ಲುಗಾವಲುಗಳಿದ್ದ ತಮ್ಮ ಆಸ್ತಿಗಳನ್ನು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
|
15. ಯಾರೊಬ್ಬಾಮನು ತಾನು ಏರ್ಪಡಿಸಿದ ಪೂಜಾ ಸ್ಥಳಗಳಿಗಾಗಿ ಹಾಗೂ ಹೋರಿಕುರಿಗಳ ಮೂರ್ತಿ ಪೂಜೆಗಳಿಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿದನು.
|
16. ಇಸ್ರಾಯೇಲರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.
|
17. ಇವರೆಲ್ಲರೂ ಮೊದಲನೆಯ ಮೂರು ವರ್ಷಗಳಲ್ಲಿ ದಾವೀದ ಹಾಗು ಸೊಲೊಮೋನರ ಮಾರ್ಗದಲ್ಲೇ ನಡೆಯುತ್ತಿದ್ದರು. ಅಂತೆಯೇ ಯೆಹೂದ ರಾಜ್ಯವು ಆ ವರ್ಷಗಳಲ್ಲಿ ಅಭಿವೃದ್ಧಿಯಾಗಿ, ಸೊಲೊಮೋನನ ಮಗನಾದ ರೆಹಬ್ಬಾಮನು ಬಲಗೊಂಡನು. PS
|
18. {ರೆಹಬ್ಬಾಮನ ಕುಟುಂಬ} PS ರೆಹಬ್ಬಾಮನು ದಾವೀದನ ಮಗನಾದ ಯೆರೀಮೋತನ ಮಗಳಾದ ಮಹ್ಲತ್ತಳನ್ನು, ಇಷಯನ ಮೊಮ್ಮಗಳೂ ಎಲೀಯಾಬನ ಮಗಳೂ ಆದ ಅಬೀಹೈಲಳನ್ನೂ ಹೆಂಡತಿಯನ್ನಾಗಿ ಮಾಡಿಕೊಂಡನು.
|
20. ಅನಂತರ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬಾಕೆಯನ್ನು ಮದುವೆಮಾಡಿಕೊಂಡನು; ಆಕೆಯು ಅವನಿಂದ ಅಬೀಯ, ಅತ್ತೈ, ಜೀಜ, ಶೆಲೋಮೀತ್ ಎಂಬುವರನ್ನು ಹೆತ್ತಳು.
|
21. ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ, ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ, ಅರುವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತೆಂಟು ಮಂದಿ ಗಂಡುಮಕ್ಕಳೂ ಅರುವತ್ತು ಮಂದಿ ಹೆಣ್ಣುಮಕ್ಕಳೂ ಹುಟ್ಟಿದರು.
|
22. ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅರಸನನ್ನಾಗಿ ಮಾಡಬೇಕೆಂದು ಅವನನ್ನು ಅವನ ಅಣ್ಣ ತಮ್ಮಂದಿರಲ್ಲಿ ಪ್ರಧಾನನ್ನಾಗಿಯೂ ಪ್ರಭುವನ್ನಾಗಿಯೂ ನೇಮಿಸಿದನು.
|
23. ತನ್ನ ಉಳಿದ ಎಲ್ಲಾ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ, ಯೆಹೂದ ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಕೊತ್ತಲುಗಳುಳ್ಳ ಆಯಾ ಪಟ್ಟಣಗಳಲ್ಲಿರಿಸಿ, ಅವರಿಗೆ ಬೇಕಾದಷ್ಟು ಆಹಾರವನ್ನು ಏರ್ಪಡಿಸಿ, ಅನೇಕ ಮಂದಿ ಹೆಂಡತಿಯರನ್ನೂ ಗೊತ್ತು ಮಾಡಿಕೊಟ್ಟನು. PE
|