ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
2 ಪೂರ್ವಕಾಲವೃತ್ತಾ
1. {ಯೆಹೂದದ ಅರಸನಾದ ಯೆಹೋವಾಹಾಜನು} [PS] ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು.
2. ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
3. ಐಗುಪ್ತದ ಅರಸನು ಯೆರೂಸಲೇಮಿಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ, ಯೆಹೂದ್ಯರು ತನಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.
4. ಐಗುಪ್ತದ ಅರಸನಾದ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು. [PS]
5. {ಯೆಹೂದದ ಅರಸನಾದ ಯೆಹೋಯಾಕೀಮನು} [PS] ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
6. ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,
7. ಯೆಹೋವನ ಆಲಯದ ಹಲವು ಸಾಮಾನುಗಳನ್ನು ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.
8. ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನು ನಡಿಸಿದ ಅಸಹ್ಯ ಕೃತ್ಯಗಳೂ, ಅವನಲ್ಲಿ ಕಂಡುಬಂದದ್ದೆಲ್ಲವೂ ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಅರಸನಾದನು. [PS]
9. {ಯೆಹೂದದ ಅರಸನಾದ ಯೆಹೋಯಾಕೀನನು} [PS] ಯೆಹೋಯಾಕೀನನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿನಗಳ ಕಾಲ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
10. ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ [* ಚಿಕ್ಕಪ್ಪನಾದ ಅಥವಾ ಸಹೋದರನಾದ.] ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು. [PS]
11. {ಯೆಹೂದದ ಅರಸನಾದ ಚಿದ್ಕೀಯನು} [PS] ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು.
12. ಅವನು ತನ್ನ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದದ್ದಲ್ಲದೆ ಅವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.
13. ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.
14. ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು. [PS]
15. {ಯೆರೂಸಲೇಮಿನ ಪತನ} [PS] ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.
16. ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.
17. ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.
18. ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.
19. ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.
20. ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
21. ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು. [PS]
22. {ಕೋರೆಷನ ಪ್ರಕಟಣೆ} [PS] ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,
23. ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು. [PE]

ಟಿಪ್ಪಣಿಗಳು

No Verse Added

ಒಟ್ಟು 36 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 36 / 36
2 ಪೂರ್ವಕಾಲವೃತ್ತಾ 36:15
ಯೆಹೂದದ ಅರಸನಾದ ಯೆಹೋವಾಹಾಜನು 1 ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು. 2 ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. 3 ಐಗುಪ್ತದ ಅರಸನು ಯೆರೂಸಲೇಮಿಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ, ಯೆಹೂದ್ಯರು ತನಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರುವಂತೆ ಮಾಡಿದನು. 4 ಐಗುಪ್ತದ ಅರಸನಾದ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು. ಯೆಹೂದದ ಅರಸನಾದ ಯೆಹೋಯಾಕೀಮನು 5 ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. 6 ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ, 7 ಯೆಹೋವನ ಆಲಯದ ಹಲವು ಸಾಮಾನುಗಳನ್ನು ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು. 8 ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನು ನಡಿಸಿದ ಅಸಹ್ಯ ಕೃತ್ಯಗಳೂ, ಅವನಲ್ಲಿ ಕಂಡುಬಂದದ್ದೆಲ್ಲವೂ ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಅರಸನಾದನು. ಯೆಹೂದದ ಅರಸನಾದ ಯೆಹೋಯಾಕೀನನು 9 ಯೆಹೋಯಾಕೀನನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿನಗಳ ಕಾಲ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. 10 ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ * ಚಿಕ್ಕಪ್ಪನಾದ ಅಥವಾ ಸಹೋದರನಾದ. ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು. ಯೆಹೂದದ ಅರಸನಾದ ಚಿದ್ಕೀಯನು 11 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. 12 ಅವನು ತನ್ನ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದದ್ದಲ್ಲದೆ ಅವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ. 13 ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು. 14 ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು. ಯೆರೂಸಲೇಮಿನ ಪತನ 15 ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು. 16 ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ. 17 ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು. 18 ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು. 19 ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು. 20 ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು. 21 ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು. ಕೋರೆಷನ ಪ್ರಕಟಣೆ 22 ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, 23 ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು.
ಒಟ್ಟು 36 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 36 / 36
Common Bible Languages
West Indian Languages
×

Alert

×

kannada Letters Keypad References