1. {ಯೆಹೂದದ ಅರಸನಾದ ಯೆಹೋವಾಹಾಜನು} PS ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು.
|
2. ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
|
3. ಐಗುಪ್ತದ ಅರಸನು ಯೆರೂಸಲೇಮಿಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ, ಯೆಹೂದ್ಯರು ತನಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.
|
4. ಐಗುಪ್ತದ ಅರಸನಾದ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು. PS
|
5. {ಯೆಹೂದದ ಅರಸನಾದ ಯೆಹೋಯಾಕೀಮನು} PS ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
|
6. ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,
|
8. ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನು ನಡಿಸಿದ ಅಸಹ್ಯ ಕೃತ್ಯಗಳೂ, ಅವನಲ್ಲಿ ಕಂಡುಬಂದದ್ದೆಲ್ಲವೂ ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಅರಸನಾದನು. PS
|
9. {ಯೆಹೂದದ ಅರಸನಾದ ಯೆಹೋಯಾಕೀನನು} PS ಯೆಹೋಯಾಕೀನನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿನಗಳ ಕಾಲ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
|
10. ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ * ಚಿಕ್ಕಪ್ಪನಾದ ಅಥವಾ ಸಹೋದರನಾದ. ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು. PS
|
11. {ಯೆಹೂದದ ಅರಸನಾದ ಚಿದ್ಕೀಯನು} PS ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು.
|
12. ಅವನು ತನ್ನ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದದ್ದಲ್ಲದೆ ಅವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.
|
13. ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.
|
14. ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು. PS
|
15. {ಯೆರೂಸಲೇಮಿನ ಪತನ} PS ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.
|
16. ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.
|
17. ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.
|
18. ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.
|
19. ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.
|
20. ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
|
21. ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು. PS
|
22. {ಕೋರೆಷನ ಪ್ರಕಟಣೆ} PS ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,
|
23. ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು. PE
|