1. [PS]ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. [* ಧರ್ಮೋ 19:15; ಅರಣ್ಯ 35:30 ]“ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.
2. ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ [† 2 ಕೊರಿ 13:10; 1 ಕೊರಿ 4:21 ]ತಿರುಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ: [‡ 2 ಕೊರಿ 12:21 ]ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುವವರಿಗೂ ಮತ್ತು ಮಿಕ್ಕಾದವರೆಲ್ಲರಿಗೂ ಹೇಳುತ್ತೇನೆ.
3. ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುವುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ [§ 2 ಕೊರಿ 10:4 ]ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.
4. [* ಫಿಲಿ. 2:7,8; 1 ಪೇತ್ರ 3:18 ]ಆತನು ಬಲಹೀನಾವಸ್ಥೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟನು ನಿಜ; [† ರೋಮಾ. 1:4; 6:4 ]ಆದರೂ ದೇವರ ಬಲದಿಂದ ಜೀವಿಸುವವನಾಗಿದ್ದಾನೆ. [‡ 2 ಕೊರಿ 12:10 ]ನಾವೂ ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ, [§ ರೋಮಾ. 6:8 ]ಆದರೂ ಆತನೊಂದಿಗೆ ದೇವರ ಬಲದಿಂದ ನಿಮಗಾಗಿ ಬದುಕುವವರಾಗಿದ್ದೇವೆ. [PE]
5. [PS]ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. [* ರೋಮಾ. 8:10; ಗಲಾ. 4:19 ]ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ.
6. ನಾವಂತೂ ಆಯೋಗ್ಯರಲ್ಲವೆಂದು ನಿಮಗೆ ಗೊತ್ತಾಗುವುದೆಂಬುದಾಗಿ ನನಗೆ ಭರವಸೆವುಂಟು.
7. ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷೆಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷೆಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ.
8. ಸತ್ಯಕ್ಕೆ ವಿರೋಧವಾಗಿ ನಾವೇನೂ ಮಾಡಲಾರೆವು, ಸತ್ಯಾಭಿವೃದ್ದಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ.
9. [† 1 ಕೊರಿ 4:10; 2 ಕೊರಿ 4:12; 12:5; 9:10 ]ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ. [PE]
10.
2. [PS]ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ. [‡ 2 ಕೊರಿ 10:8 ]ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ [§ 2 ಕೊರಿ 2:3 ]ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ. [PE]{#1ಕಡೆ ಮಾತುಗಳು } [PS]ಕಡೆಯದಾಗಿ ಸಹೋದರರೇ, [* ನಿಮಗೆ ಕ್ಷೇಮವಾಗಲಿ ]ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, [† ರೋಮಾ. 12:16 ]ಏಕ ಮನಸ್ಸುಳ್ಳವರಾಗಿರಿ, [‡ ಮಾರ್ಕ 9:50 ]ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, [§ ರೋಮಾ. 15:33 ]ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.
12. [* ರೋಮಾ. 16:16 ]ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
13. [† ಫಿಲಿ. 4:22 ]ದೇವಜನರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.
14. [‡ ರೋಮಾ. 16:20; 1 ಕೊರಿ 16:23 ]ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, [§ ಯೂದ. 21 ]ದೇವರ ಪ್ರೀತಿಯೂ, [* ಫಿಲಿ. 2:1 ]ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.[PE]