1. {#1ಮಣ್ಣಿನ ಪಾತ್ರೆಯಲ್ಲಿ ಇರುವ ನಿಕ್ಷೇಪ } [PS]ಆದ್ದರಿಂದ ದೇವರ ಕರುಣೆಯಿಂದ [* 2 ಕೊರಿ 3:6 ]ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.
2. [† ರೋಮಾ. 6:21 ]ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ [‡ 2 ಕೊರಿ 2:17 ]ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ [§ 2 ಕೊರಿ 5:11-12 ]ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.
3. [* 2 ಕೊರಿ 3:14 ]ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ [† 1 ಕೊರಿ 1:18, 2 ಕೊರಿ 2:15 ]ನಾಶಮಾರ್ಗದಲ್ಲಿರುವವರಿಗೇ ಅದು [‡ ಮತ್ತಾ 13:15 ]ಮರೆಯಾಗಿರುವುದು.
4. ಇವರಲ್ಲಿ [§ ಕೊಲೊ 1:15, ಫಿಲಿ. 2:, ಯೋಹಾ 14:9 ]ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ [* ಅ. ಕೃ. 26:18 ]ಸುವಾರ್ತೆಯ ಬೆಳಕನ್ನು ನೋಡಬಾರದೆಂದು [† ಯೋಹಾ 12:31 ]ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.
5. ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ [‡ 1 ಕೊರಿ 9:19, 2 ಕೊರಿ 1:24 ]ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.
6. ಯಾಕೆಂದರೆ [§ ಆದಿ 1:3 ]“ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ [* ವ 4 ನೋಡಿರಿ ]ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ [† 2 ಪೇತ್ರ. 1:19 ]ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು. [PE]
7. [PS] [‡ 2 ತಿಮೊ. 2:20, 2 ಕೊರಿ 5:1 ]ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ [§ 1 ಕೊರಿ 2:5 ]ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ.
8. [* 2 ಕೊರಿ 7:5 ]ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ.
9. ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ.
10. [† 2 ತಿಮೊ. 2:11 ]ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ [‡ 2 ಕೊರಿ 6:9, 1 ಕೊರಿ 4:9; 15:31 ]ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ.
11. ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
12. ಹೀಗೆ ನಮ್ಮಲ್ಲಿ ಮರಣವು ನಿಮ್ಮಲ್ಲಿ ಜೀವವು ವ್ಯಾಪಿಸುತ್ತಿದೆ. [PE]
13. [PS]“ನಾನು [§ ಕೀರ್ತ 116:10 ]ನಂಬಿದೆನು. ಆದ್ದರಿಂದ ಮಾತನಾಡಿದೆನು.” ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವಹಾಗೆ ನಂಬಿಕೆಯ ಅದೇ ಆತ್ಮನು ನಮ್ಮಲ್ಲಿರುವುದರಿಂದ ನಾವು ನಂಬಿದವರಾಗಿ ಮಾತನಾಡುತ್ತೇವೆ.
14. [* 1 ಥೆಸ. 4:14, 1 ಕೊರಿ 1:9, ಅ. ಕೃ. 2:24 ]ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.
15. ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. [† 2 ಕೊರಿ 1:19, 9:11-12 ]ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು. [PE]
16. {#1ಪರಲೋಕ ಭಾಗ್ಯವನ್ನು ಆಲೋಚಿಸುವಾಗ ಕ್ರಿಸ್ತನಲ್ಲಿರುವವರಿಗೆ ಧೈರ್ಯವಾಗುತ್ತದೆ ಎಂಬುದು } [PS]ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ [‡ ರೋಮಾ. 12:2, ಯೆಶಾ 40:30-31 ]ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.
17. ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.
18. ನಾವು [§ 2 ಕೊರಿ 5:7, ರೋಮಾ. 8:24 ]ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು. [PE]