ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
2 ಕೊರಿಂಥದವರಿಗೆ
1. ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.
2. [* ಯೆಶಾ 49:8; ಲೂಕ 4:19] “ಸುಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು” ಎಂದು ದೇವರು ಹೇಳುತ್ತಾನಲ್ಲಾ. ನೋಡಿ, [† ಯೆಶಾ 55:6; ಇಬ್ರಿ. 3:13] ಈಗಲೇ ಆ ಸುಪ್ರಸನ್ನತೆಯ ಕಾಲವು; ಇಂದೇ ಆ ರಕ್ಷಣೆಯ ದಿನ.
3. ನಮ್ಮ ಸೇವೆಯು ಯಾರ ಮುಂದೆಯೂ ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ.
4. ಬದಲಾಗಿ, ಎಲ್ಲಾ ವಿಷಯಗಳಲ್ಲಿ ದೇವರ ಸೇವಕರೆಂದು ನಮ್ಮ ಸೇವೆಯನ್ನು ಸಮ್ಮತ ಮಾಡಿಕೊಂಡು, ನಾವು [‡ ಅ. ಕೃ. 9:16] ಸಂಕಟದಲ್ಲಿಯೂ, [§ 2 ಕೊರಿ 12:10] ಕೊರತೆಗಳಲ್ಲಿಯೂ, ಇಕ್ಕಟ್ಟುಗಳಲ್ಲಿಯೂ, [* 2 ಕೊರಿ 11:23-27; ಅ. ಕೃ. 16:23] ಪೆಟ್ಟುಗಳಲ್ಲಿಯೂ,
5. ದೊಂಬಿ, ಕಲಹ, ಸೆರೆಮನೆ, ಶಿಕ್ಷೆ ಇವುಗಳನ್ನು ಅನುಭವಿಸಿದ್ದೇವೆ. ಮೈಮುರಿದು ಕೆಲಸ ಮಾಡಿದ್ದೇವೆ. ನಿದ್ದೆಗೆಟ್ಟು ಬಳಲಿದ್ದೇವೆ; ಹಸಿವಿನಲ್ಲಿ ಸೊರಗಿದ್ದೇವೆ; [† ಅ. ಕೃ. 17:5] ಈ ಎಲ್ಲಾ ವಿಷಯಗಳಲ್ಲಿ ಬಹು ಸಮಾಧಾನವನ್ನು ತೋರಿಸಿದ್ದೇವೆ.
6. [‡ 1 ಥೆಸ. 2:10] ಶುದ್ಧಮನಸ್ಸು, [§ 2 ಕೊರಿ 11:6] ಜ್ಞಾನ, ದೀರ್ಘಶಾಂತಿ, ದಯೆ, [* ರೋಮಾ. 15:19; 1 ಥೆಸ. 1:5] ಪವಿತ್ರಾತ್ಮ, [† ರೋಮಾ. 12:9] ನಿಷ್ಕಪಟವಾದ ಪ್ರೀತಿ,
7. [‡ ಎಫೆ 1:13; ಕೊಲೊ 1:5] ಸತ್ಯವಾಕ್ಯ, ದೇವರ ಮಹತ್ವ ಇವುಗಳಿಂದ ಕೂಡಿದವರಾಗಿ, [§ 2 ಕೊರಿ 10:4; ಎಫೆ 6:11-17] ಎಡಬಲಗೈಗಳಲ್ಲಿ ನೀತಿಯೆಂಬ ಆಯುಧಗಳನ್ನು ಧರಿಸಿಕೊಂಡಿದ್ದೇವೆ.
8. ನಾವು ಮಾನ ಮತ್ತು [* ರೋಮಾ. 3:8] ಅವಮಾನ, ಕೀರ್ತಿ ಮತ್ತು ಅಪಕೀರ್ತಿಗಳಲ್ಲಿಯೂ ಸೇವೆಮಾಡಿದ್ದೇವೆ. ಸತ್ಯವಂತರಾದರೂ ಮೋಸಗಾರರೆನಿಸಿಕೊಂಡಿದ್ದೇವೆ.
9. ನಾವು ಪ್ರಸಿದ್ಧರಾಗಿದ್ದರೂ ಅಪರಿಚಿತರೆನ್ನಿಸಿಕೊಂಡು ಸೇವೆ ಮಾಡಿದ್ದೇವೆ. [† 2 ಕೊರಿ 4:10] ಸಾಯುವವರಾಗಿ ತೋರಿದರೂ, ಬದುಕಿದ್ದೇವೆ! ನೋಡಿ, ಶಿಕ್ಷೆಗೆ ಗುರಿಯಾದರೂ ಕೊಲ್ಲಲ್ಪಡದವರಾಗಿದ್ದೇವೆ,
10. [‡ ಯೋಹಾ 16:22; 2 ಕೊರಿ 7:4] ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, [§ 2 ಕೊರಿ 8:9; ಜ್ಞಾ. 13:7] ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; [* ಅ. ಕೃ. 3:6] ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ. [PE][PS]
11. ಕೊರಿಂಥದವರೇ, ಬಿಚ್ಚುಮನದಿಂದಲೂ ತೆರೆದ ಹೃದಯದಿಂದಲೂ ನಾವು ನಿಮ್ಮೊಡನೆ ಮಾತನಾಡಿದ್ದೇವೆ.
12. ನಮ್ಮಲ್ಲಿ ಸಂಕುಚಿತ ಭಾವನೆಯೇನೂ ಇಲ್ಲ. ಇದು ಇರುವುದಾದರೆ ನಿಮ್ಮಲ್ಲೇ.
13. ಆದ್ದರಿಂದ ಮಕ್ಕಳಿಗೆ ಹೇಳುವಂತೆ ಹೇಳುತ್ತಿದ್ದೇವೆ; ನಾವು ನಿಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿದಂತೆ, ನೀವು ನಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿರಿ. [PS]
14. {ಕ್ರೈಸ್ತರು ಅನ್ಯಜನಗಳ ಅನ್ಯೋನ್ಯತೆಯಲ್ಲಿ ಕೆಡಬಾರದು} [PS] ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ [† ಧರ್ಮೋ 7:3; ಯೋಹಾ 23:12; ಎಜ್ರ. 9:2; ನೆಹೆ 13:25] ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, [‡ ಎಫೆ 5:7,11; 1 ಯೋಹಾ 1:6] ಅಧರ್ಮಕ್ಕೂ ಸಹವಾಸವೇನು?
15. [§ ಅ. ಕೃ. 26:18] ಬೆಳಕಿಗೂ, ಕತ್ತಲೆಗೂ ಅನ್ಯೋನ್ಯತೆಯೇನು? [* 1 ಕೊರಿ 10:21] ಕ್ರಿಸ್ತನಿಗೂ ಸೈತಾನನಿಗೂ ಒಪ್ಪಂದವೇನು? ವಿಶ್ವಾಸಿಗೂ ಅವಿಶ್ವಾಸಿಗೂ ಪಾಲುಗಾರಿಕೆಯೇನು?
16. ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? [† ಎಫೆ 2:22; 1 ಕೊರಿ 3:16] ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, [‡ ಯಾಜ 26:11,12; ವಿಮೋ 29:45; ಪ್ರಕ 2:1; 21:3] “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು [§ ವಿಮೋ 6:7; ಯೆರೆ 31:33; ಯೆಹೆ. 11:20; ಜೆಕ. 8:8 ] ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.
17. ಆದ್ದರಿಂದ, [* ಯೆಶಾ 52:11] “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.
18. ಇದಲ್ಲದೆ, [† 2 ಸಮು 7:8, 14; ಯೆಶಾ 43:6; ಹೋಶೇ. 1:10] “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ. [PE]

ಟಿಪ್ಪಣಿಗಳು

No Verse Added

ಒಟ್ಟು 13 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 6 / 13
1 2 3 4 5 6 7 8 9 10 11 12 13
2 ಕೊರಿಂಥದವರಿಗೆ 6:18
1 ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ. 2 * ಯೆಶಾ 49:8; ಲೂಕ 4:19 “ಸುಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು” ಎಂದು ದೇವರು ಹೇಳುತ್ತಾನಲ್ಲಾ. ನೋಡಿ, † ಯೆಶಾ 55:6; ಇಬ್ರಿ. 3:13 ಈಗಲೇ ಆ ಸುಪ್ರಸನ್ನತೆಯ ಕಾಲವು; ಇಂದೇ ಆ ರಕ್ಷಣೆಯ ದಿನ. 3 ನಮ್ಮ ಸೇವೆಯು ಯಾರ ಮುಂದೆಯೂ ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ. 4 ಬದಲಾಗಿ, ಎಲ್ಲಾ ವಿಷಯಗಳಲ್ಲಿ ದೇವರ ಸೇವಕರೆಂದು ನಮ್ಮ ಸೇವೆಯನ್ನು ಸಮ್ಮತ ಮಾಡಿಕೊಂಡು, ನಾವು ಅ. ಕೃ. 9:16 ಸಂಕಟದಲ್ಲಿಯೂ, § 2 ಕೊರಿ 12:10 ಕೊರತೆಗಳಲ್ಲಿಯೂ, ಇಕ್ಕಟ್ಟುಗಳಲ್ಲಿಯೂ, * 2 ಕೊರಿ 11:23-27; ಅ. ಕೃ. 16:23 ಪೆಟ್ಟುಗಳಲ್ಲಿಯೂ, 5 ದೊಂಬಿ, ಕಲಹ, ಸೆರೆಮನೆ, ಶಿಕ್ಷೆ ಇವುಗಳನ್ನು ಅನುಭವಿಸಿದ್ದೇವೆ. ಮೈಮುರಿದು ಕೆಲಸ ಮಾಡಿದ್ದೇವೆ. ನಿದ್ದೆಗೆಟ್ಟು ಬಳಲಿದ್ದೇವೆ; ಹಸಿವಿನಲ್ಲಿ ಸೊರಗಿದ್ದೇವೆ; ಅ. ಕೃ. 17:5 ಈ ಎಲ್ಲಾ ವಿಷಯಗಳಲ್ಲಿ ಬಹು ಸಮಾಧಾನವನ್ನು ತೋರಿಸಿದ್ದೇವೆ. 6 1 ಥೆಸ. 2:10 ಶುದ್ಧಮನಸ್ಸು, § 2 ಕೊರಿ 11:6 ಜ್ಞಾನ, ದೀರ್ಘಶಾಂತಿ, ದಯೆ, * ರೋಮಾ. 15:19; 1 ಥೆಸ. 1:5 ಪವಿತ್ರಾತ್ಮ, † ರೋಮಾ. 12:9 ನಿಷ್ಕಪಟವಾದ ಪ್ರೀತಿ, 7 ಎಫೆ 1:13; ಕೊಲೊ 1:5 ಸತ್ಯವಾಕ್ಯ, ದೇವರ ಮಹತ್ವ ಇವುಗಳಿಂದ ಕೂಡಿದವರಾಗಿ, § 2 ಕೊರಿ 10:4; ಎಫೆ 6:11-17 ಎಡಬಲಗೈಗಳಲ್ಲಿ ನೀತಿಯೆಂಬ ಆಯುಧಗಳನ್ನು ಧರಿಸಿಕೊಂಡಿದ್ದೇವೆ. 8 ನಾವು ಮಾನ ಮತ್ತು * ರೋಮಾ. 3:8 ಅವಮಾನ, ಕೀರ್ತಿ ಮತ್ತು ಅಪಕೀರ್ತಿಗಳಲ್ಲಿಯೂ ಸೇವೆಮಾಡಿದ್ದೇವೆ. ಸತ್ಯವಂತರಾದರೂ ಮೋಸಗಾರರೆನಿಸಿಕೊಂಡಿದ್ದೇವೆ. 9 ನಾವು ಪ್ರಸಿದ್ಧರಾಗಿದ್ದರೂ ಅಪರಿಚಿತರೆನ್ನಿಸಿಕೊಂಡು ಸೇವೆ ಮಾಡಿದ್ದೇವೆ. 2 ಕೊರಿ 4:10 ಸಾಯುವವರಾಗಿ ತೋರಿದರೂ, ಬದುಕಿದ್ದೇವೆ! ನೋಡಿ, ಶಿಕ್ಷೆಗೆ ಗುರಿಯಾದರೂ ಕೊಲ್ಲಲ್ಪಡದವರಾಗಿದ್ದೇವೆ, 10 ಯೋಹಾ 16:22; 2 ಕೊರಿ 7:4 ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, § 2 ಕೊರಿ 8:9; ಜ್ಞಾ. 13:7 ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; * ಅ. ಕೃ. 3:6 ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ. 11 ಕೊರಿಂಥದವರೇ, ಬಿಚ್ಚುಮನದಿಂದಲೂ ತೆರೆದ ಹೃದಯದಿಂದಲೂ ನಾವು ನಿಮ್ಮೊಡನೆ ಮಾತನಾಡಿದ್ದೇವೆ. 12 ನಮ್ಮಲ್ಲಿ ಸಂಕುಚಿತ ಭಾವನೆಯೇನೂ ಇಲ್ಲ. ಇದು ಇರುವುದಾದರೆ ನಿಮ್ಮಲ್ಲೇ. 13 ಆದ್ದರಿಂದ ಮಕ್ಕಳಿಗೆ ಹೇಳುವಂತೆ ಹೇಳುತ್ತಿದ್ದೇವೆ; ನಾವು ನಿಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿದಂತೆ, ನೀವು ನಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿರಿ. ಕ್ರೈಸ್ತರು ಅನ್ಯಜನಗಳ ಅನ್ಯೋನ್ಯತೆಯಲ್ಲಿ ಕೆಡಬಾರದು 14 ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಧರ್ಮೋ 7:3; ಯೋಹಾ 23:12; ಎಜ್ರ. 9:2; ನೆಹೆ 13:25 ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ‡ ಎಫೆ 5:7,11; 1 ಯೋಹಾ 1:6 ಅಧರ್ಮಕ್ಕೂ ಸಹವಾಸವೇನು? 15 § ಅ. ಕೃ. 26:18 ಬೆಳಕಿಗೂ, ಕತ್ತಲೆಗೂ ಅನ್ಯೋನ್ಯತೆಯೇನು? * 1 ಕೊರಿ 10:21 ಕ್ರಿಸ್ತನಿಗೂ ಸೈತಾನನಿಗೂ ಒಪ್ಪಂದವೇನು? ವಿಶ್ವಾಸಿಗೂ ಅವಿಶ್ವಾಸಿಗೂ ಪಾಲುಗಾರಿಕೆಯೇನು? 16 ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ಎಫೆ 2:22; 1 ಕೊರಿ 3:16 ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, ‡ ಯಾಜ 26:11,12; ವಿಮೋ 29:45; ಪ್ರಕ 2:1; 21:3 “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು § ವಿಮೋ 6:7; ಯೆರೆ 31:33; ಯೆಹೆ. 11:20; ಜೆಕ. 8:8 ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ. 17 ಆದ್ದರಿಂದ, * ಯೆಶಾ 52:11 “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ. 18 ಇದಲ್ಲದೆ, 2 ಸಮು 7:8, 14; ಯೆಶಾ 43:6; ಹೋಶೇ. 1:10 “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
ಒಟ್ಟು 13 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 6 / 13
1 2 3 4 5 6 7 8 9 10 11 12 13
Common Bible Languages
West Indian Languages
×

Alert

×

kannada Letters Keypad References