1.
1. [PS]ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, [* 1 ಪೇತ್ರ 2:11; 1 ಯೊಹಾ. 3:3 ]ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ. [PE]{#1ಪೌಲನು ತಾನು ಮೊದಲು ಬರೆದ ಪತ್ರಿಕೆಯಿಂದ ಒಳ್ಳೆಯ ಫಲವುಂಟಾಯಿತೆಂದು ಸಂತೋಷಪಟ್ಟಿದ್ದು } [PS] [† 2 ಕೊರಿ 6:11-13 ]ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ; ನಿಮ್ಮಲ್ಲಿ ಯಾರಿಗೂ [‡ ಅ. ಕೃ. 20:33 ]ನಾವು ಅನ್ಯಾಯ ಮಾಡಲಿಲ್ಲ, ಯಾರಿಗೂ ಹಾನಿಯುಂಟುಮಾಡಿಲ್ಲ, ಯಾರನ್ನೂ ವಂಚಿಸಲಿಲ್ಲ.
3. ನಿಮ್ಮ ಮೇಲೆ ತಪ್ಪುಹೊರಿಸಬೇಕೆಂದು ನಾನು ಇದನ್ನು ಹೇಳುತ್ತಿಲ್ಲ; ನಿಮ್ಮ ಜೊತೆ ಸಾಯುವುದಕ್ಕೂ, ಬದುಕುವುದಕ್ಕೂ ಎನ್ನುವಷ್ಟರ ಮಟ್ಟಿಗೆ [§ 2 ಕೊರಿ 6:11-13 ]ನೀವು ನಮ್ಮ ಹೃದಯದಲ್ಲಿದ್ದೀರೆಂದು ನಾನು ಮೊದಲೇ ಹೇಳಿದ್ದೆನಲ್ಲಾ.
4. ನಿಮ್ಮಲ್ಲಿ ನನಗೆ ಬಹಳ ಭರವಸೆ ಉಂಟು, ಗಾಢವಾದ ಅಭಿಮಾನವುಂಟು. ನಾನು ಎಲ್ಲಾ ಸಂಕಟಗಳಲ್ಲಿಯೂ ಎದೆಗುಂದದೆ ಆನಂದಭರಿತನಾಗಿದ್ದೇನೆ. [PE]
5. [PS] [* 2 ಕೊರಿ 2:13 ]ನಾವು ಮಕೆದೋನ್ಯಕ್ಕೆ ಬಂದ ಮೇಲೂ ನಮ್ಮ ದೇಹಕ್ಕೆ ನೆಮ್ಮದಿ ಇರಲಿಲ್ಲ, ಬದಲಾಗಿ ಎಲ್ಲಾ ವಿಷಯಗಳಲ್ಲಿಯೂ ನಮಗೆ ತೊಂದರೆಗಳಿದ್ದವು. ಹೊರಗೆ ಜಗಳ, ಒಳಗೆ ಭಯ
6. ಆದರೆ [† 2 ಕೊರಿ 1:4 ]ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು [‡ ಅ. ಕೃ. 20:33 ]ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು.
7. ಅವನ ಬರುವಿಕೆಯಿಂದ ಮಾತ್ರವಲ್ಲದೆ ನಿಮ್ಮಿಂದ ಅವನು ಬಹಳ ಸಮಾಧಾನವನ್ನು ಹೊಂದಿದೆನೆಂದೂ, ನಿಮ್ಮ ಹಂಬಲ, ನಿಮ್ಮ ದುಃಖ, ನನ್ನ ಮೇಲಿರುವ ನಿಮ್ಮ ಕಾಳಜಿ; ಇವುಗಳನ್ನು ನಮಗೆ ತಿಳಿಸಿದಾಗ ನಾನು ಇನ್ನೂ ಹೆಚ್ಚಾಗಿ ಸಂತೋಷಪಟ್ಟೆನು. [PE]
8. [PS]ನಾನು ಬರೆದ ಪತ್ರದಿಂದ [§ 2 ಕೊರಿ 2:2 ]ನಿಮಗೆ ದುಃಖವಾಗಿದ್ದರೂ ನನಗೆ ವಿಷಾದವಿಲ್ಲ, ಅದು ನಿಮ್ಮನ್ನು ಸ್ವಲ್ಪ ಸಮಯ ದುಃಖಪಡಿಸಿತೆಂದು [* 2 ಕೊರಿ 2:4 ]ನಾನು ಮೊದಲು ಪಶ್ಚಾತ್ತಾಪ ಪಟ್ಟಿದ್ದರೂ ಈಗ ಸಂತೋಷಪಡುತ್ತೇನೆ.
9. ನಿಮಗೆ ಯಾತನೆಯಾಯಿತೆಂದು ನಾನು ಈಗ ಸಂತೋಷಪಡದೆ [† 1 ಕೊರಿ 5:2 ]ನೀವು ದುಃಖಪಟ್ಟು ಪಶ್ಚಾತ್ತಾಪಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಸಂತೋಷಪಡುತ್ತೇನೆ. ನೀವು ದೇವರ ಚಿತ್ತಾನುಸಾರವಾಗಿ ದುಃಖಿಸಿದ್ದರಿಂದ ನಮ್ಮಿಂದಾಗಿ ಯಾವುದರಲ್ಲಿಯೂ ನಿಮಗೆ ನಷ್ಟವಾಗಲಿಲ್ಲವಲ್ಲಾ.
10. [‡ 2 ಸಮು 12:13; ಅ. ಕೃ. 11:18 ]ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.
11. ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮ್ಮಲ್ಲಿ ಎಂಥ ಶ್ರದ್ದೆಯನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸಾಬೀತುಪಡಿಸುವುದಕ್ಕೆ ಎಂಥ ಪ್ರಯಾಸ, ಎಂಥ ರೋಷ; ಎಂಥ ಭಯ; ಎಂಥ ಹಂಬಲ; ಎಂಥ ಉತ್ಸಾಹ; ತಪ್ಪಿತಸ್ಥರನ್ನು ಶಿಕ್ಷಿಸಲು ಎಂಥ ಬಯಕೆ. ನೀವು ಆ ಕಾರ್ಯದಲ್ಲಿ ನಿರ್ದೋಷಿಗಳೆಂದು ಎಲ್ಲಾ ವಿಧದಲ್ಲಿಯೂ ತೋರಿಸಿದ್ದೀರಿ.
12. ನಾನು ನಿಮಗೆ ಬರೆದದ್ದು [§ 1 ಕೊರಿ 5:1-2 ]ತಪ್ಪುಮಾಡಿದವನಿಗೆ ದಂಡನೆಯಾಗಲಿ ಎಂದಲ್ಲ, ಆ ತಪ್ಪಿನಿಂದ ನೊಂದವನಿಗೆ ನ್ಯಾಯ ದೊರಕಲೆಂದೂ ಅಲ್ಲ; ನಮ್ಮ ಬಗ್ಗೆ ನಿಮಗಿರುವ ಅಕ್ಕರೆ, ಆಸಕ್ತಿಗಳು ದೇವರ ಸನ್ನಿಧಿಯಲ್ಲಿ ನಿಮಗೆ ವ್ಯಕ್ತವಾಗಲೆಂದೇ ಬರೆದೆನು. ಆದ್ದರಿಂದಲೇ ನಮ್ಮ ಮನಸ್ಸಿಗೆ ನೆಮ್ಮದಿ ಉಂಟಾಗಿದೆ. [PE]
13. [PS]ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.
14. ಯಾಕೆಂದರೆ ನಾನು ಅವನ ಮುಂದೆ [* 2 ಕೊರಿ 8:24; 9:2 ]ನಿಮ್ಮನ್ನು ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿ ಬರಲಿಲ್ಲ. ಬದಲಾಗಿ ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವೆಂದು ಕಂಡುಬಂದವು.
15. ನೀವು ವಿಧೇಯತೆಯಲ್ಲಿ ಭಯಭಕ್ತಿಯಿಂದ ಅವನನ್ನು ಸ್ವೀಕರಿಸಿಕೊಂಡಿದ್ದನ್ನು [† 2 ಕೊರಿ 2:9; 10:6 ]ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನಿಗಿರುವ ಪ್ರೀತಿ ಹೆಚ್ಚಾಗಿದೆ.
16. ನಿಮ್ಮ ಮೇಲೆ ನನಗೆ ಎಲ್ಲಾ ವಿಧಗಳಲ್ಲಿಯೂ ಪೂರ್ಣ ಭರವಸೆ ಇರುವುದರಿಂದ ನಾನು ಸಂತೋಷಪಡುತ್ತೇನೆ. [PE]