ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
2 ಕೊರಿಂಥದವರಿಗೆ
1. [* ರೋಮಾ. 15:25] ದೇವಜನರಿಗೋಸ್ಕರ ನೀವು ಸಂಗ್ರಹಿಸುತ್ತಿರುವ ಹಣದ ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.
2. ನಿಮ್ಮ ಮನಸ್ಸಿನ ಬಯಕೆ ಏನೆಂಬುದು ನನಗೆ ಗೊತ್ತುಂಟು. ಕಳೆದ ವರ್ಷದಿಂದಲೂ ಅಖಾಯದವರು ಸಹಾಯಮಾಡುವುದಕ್ಕೆ ಸಿದ್ಧರಾಗಿದ್ದರೆಂದು ಮಕೆದೋನ್ಯದವರ ಮುಂದೆ [† 2 ಕೊರಿ 8:24] ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು.
3. ಆದರೂ ನಾವು ನಿಮ್ಮನ್ನು ಹೊಗಳಿದ್ದು ಆಧಾರರಹಿತವಾಗದೆ ನಾನು ಹೇಳಿದ ಪ್ರಕಾರವೇ [‡ 1 ಕೊರಿ 16:2] ನೀವು ಸಿದ್ಧರಾಗಿರಬಹುದೆಂದು ಆ ಸಹೋದರರನ್ನು ಕಳುಹಿಸಿದ್ದೇನೆ.
4. ನೀವು ಸಿದ್ಧವಾಗದಿದ್ದರೆ [§ ಅ. ಕೃ. 20:4] ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬುದನ್ನು ಕಂಡು ನಮಗೆ ನಿಮ್ಮ ಮೇಲೆ ಇಂಥ ಭರವಸೆ ಇಟ್ಟಿದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ನಿಮಗೂ ನಾಚಿಕೆಯಾಗುವುದೆಂದು ನಾನು ಹೀಗೆ ಹೇಳುತ್ತೇನೆ.
5. ಹೀಗಿರಲಾಗಿ ಈ ಸಹೋದರರು ಮುಂಚಿತವಾಗಿ ನಿಮ್ಮ ಬಳಿಗೆ ಬಂದು ನೀವು ಮೊದಲೇ ವಾಗ್ದಾನಮಾಡಿದ ಕೊಡುಗೆಯನ್ನು ಸಿದ್ಧಪಡಿಸಲು ನಿಮಗೆ ಸಹಾಯಮಾಡುವಂತೆ ಇವರನ್ನು ಬೇಡಿಕೊಳ್ಳುವುದು ಅವಶ್ಯವೆಂದು ನನಗೆ ತೋಚಿತು. ಹೀಗೆ ಈ ದಾನ ಒತ್ತಾಯದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ದಾನ ಆಗಿರುತ್ತದೆ. [PS]
6. {ಪೌಲನು ಕೊರಿಂಥದ ಸಭೆಯವರನ್ನು ಉದಾರವಾಗಿ ಕೊಡುವುದಕ್ಕೆ ಪ್ರೇರೇಪಿಸಿದ್ದು} [PS] ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ.
7. ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; [* ಧರ್ಮೋ 15:10; 2 ಕೊರಿ 8:12] ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ [† ವಿಮೋ 25:2] ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.
8. [‡ ಫಿಲಿ. 4:19; ಎಫೆ 3:20] ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.
9. [§ ಕೀರ್ತ 112:9] “ಅವನು ಬಡವರಿಗೆ ಧಾರಾಳವಾಗಿ ನೀಡುವನು; ಅವನ ನೀತಿಯು ಸದಾಕಾಲವೂ ಇರುವುದು.”
10. [* ಯೆಶಾ 55:10] ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.
11. ಹೀಗೆ ನೀವು [† 1 ಕೊರಿ 1:5] ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ.
12. ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು [‡ 2 ಕೊರಿ 8; 14] ದೇವಜನರ ಕೊರತೆಗಳನ್ನು ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ.
13. ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, [§ 1 ತಿಮೊ. 6:12,13; ಇಬ್ರಿ. 3:4,14; 10:23 ] ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು [* ಮತ್ತಾ 5:16; 1 ಪೇತ್ರ 2:12] ದೇವರನ್ನು ಕೊಂಡಾಡುವರು.
14. ಇದಲ್ಲದೆ ನಿಮಗೋಸ್ಕರ ವಿಜ್ಞಾಪನೆ ಮಾಡಿ ದೇವರ ಅತಿಶಯವಾದ ಕೃಪೆಯು ನಿಮಗೆ ದೊರೆತಿರುವುದರಿಂದ ಅವರು ನಿಮ್ಮನ್ನು ನೋಡಲು ಬಯಸಿರುವರಲ್ಲದೆ ನಿಮಗಾಗಿ ಪ್ರಾರ್ಥಿಸುವರು.
15. [† ಯೋಹಾ 3:16; ಎಫೆ 2:8] ವರ್ಣಿಸಲಸಾಧ್ಯವಾದ ದಾನಗಳ ನಿಮಿತ್ತ ದೇವರಿಗೆ ಸ್ತೋತ್ರವಾಗಲಿ. [PE]

ಟಿಪ್ಪಣಿಗಳು

No Verse Added

ಒಟ್ಟು 13 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 9 / 13
1 2 3 4 5 6 7 8 9 10 11 12 13
2 ಕೊರಿಂಥದವರಿಗೆ 9:33
1 * ರೋಮಾ. 15:25 ದೇವಜನರಿಗೋಸ್ಕರ ನೀವು ಸಂಗ್ರಹಿಸುತ್ತಿರುವ ಹಣದ ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. 2 ನಿಮ್ಮ ಮನಸ್ಸಿನ ಬಯಕೆ ಏನೆಂಬುದು ನನಗೆ ಗೊತ್ತುಂಟು. ಕಳೆದ ವರ್ಷದಿಂದಲೂ ಅಖಾಯದವರು ಸಹಾಯಮಾಡುವುದಕ್ಕೆ ಸಿದ್ಧರಾಗಿದ್ದರೆಂದು ಮಕೆದೋನ್ಯದವರ ಮುಂದೆ 2 ಕೊರಿ 8:24 ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು. 3 ಆದರೂ ನಾವು ನಿಮ್ಮನ್ನು ಹೊಗಳಿದ್ದು ಆಧಾರರಹಿತವಾಗದೆ ನಾನು ಹೇಳಿದ ಪ್ರಕಾರವೇ 1 ಕೊರಿ 16:2 ನೀವು ಸಿದ್ಧರಾಗಿರಬಹುದೆಂದು ಆ ಸಹೋದರರನ್ನು ಕಳುಹಿಸಿದ್ದೇನೆ. 4 ನೀವು ಸಿದ್ಧವಾಗದಿದ್ದರೆ § ಅ. ಕೃ. 20:4 ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬುದನ್ನು ಕಂಡು ನಮಗೆ ನಿಮ್ಮ ಮೇಲೆ ಇಂಥ ಭರವಸೆ ಇಟ್ಟಿದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ನಿಮಗೂ ನಾಚಿಕೆಯಾಗುವುದೆಂದು ನಾನು ಹೀಗೆ ಹೇಳುತ್ತೇನೆ. 5 ಹೀಗಿರಲಾಗಿ ಈ ಸಹೋದರರು ಮುಂಚಿತವಾಗಿ ನಿಮ್ಮ ಬಳಿಗೆ ಬಂದು ನೀವು ಮೊದಲೇ ವಾಗ್ದಾನಮಾಡಿದ ಕೊಡುಗೆಯನ್ನು ಸಿದ್ಧಪಡಿಸಲು ನಿಮಗೆ ಸಹಾಯಮಾಡುವಂತೆ ಇವರನ್ನು ಬೇಡಿಕೊಳ್ಳುವುದು ಅವಶ್ಯವೆಂದು ನನಗೆ ತೋಚಿತು. ಹೀಗೆ ಈ ದಾನ ಒತ್ತಾಯದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ದಾನ ಆಗಿರುತ್ತದೆ. ಪೌಲನು ಕೊರಿಂಥದ ಸಭೆಯವರನ್ನು ಉದಾರವಾಗಿ ಕೊಡುವುದಕ್ಕೆ ಪ್ರೇರೇಪಿಸಿದ್ದು 6 ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ. 7 ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; * ಧರ್ಮೋ 15:10; 2 ಕೊರಿ 8:12 ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ † ವಿಮೋ 25:2 ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು. 8 ಫಿಲಿ. 4:19; ಎಫೆ 3:20 ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು. 9 § ಕೀರ್ತ 112:9 “ಅವನು ಬಡವರಿಗೆ ಧಾರಾಳವಾಗಿ ನೀಡುವನು; ಅವನ ನೀತಿಯು ಸದಾಕಾಲವೂ ಇರುವುದು.” 10 * ಯೆಶಾ 55:10 ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು. 11 ಹೀಗೆ ನೀವು 1 ಕೊರಿ 1:5 ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ. 12 ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು 2 ಕೊರಿ 8; 14 ದೇವಜನರ ಕೊರತೆಗಳನ್ನು ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ. 13 ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, § 1 ತಿಮೊ. 6:12,13; ಇಬ್ರಿ. 3:4,14; 10:23 ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು * ಮತ್ತಾ 5:16; 1 ಪೇತ್ರ 2:12 ದೇವರನ್ನು ಕೊಂಡಾಡುವರು. 14 ಇದಲ್ಲದೆ ನಿಮಗೋಸ್ಕರ ವಿಜ್ಞಾಪನೆ ಮಾಡಿ ದೇವರ ಅತಿಶಯವಾದ ಕೃಪೆಯು ನಿಮಗೆ ದೊರೆತಿರುವುದರಿಂದ ಅವರು ನಿಮ್ಮನ್ನು ನೋಡಲು ಬಯಸಿರುವರಲ್ಲದೆ ನಿಮಗಾಗಿ ಪ್ರಾರ್ಥಿಸುವರು. 15 ಯೋಹಾ 3:16; ಎಫೆ 2:8 ವರ್ಣಿಸಲಸಾಧ್ಯವಾದ ದಾನಗಳ ನಿಮಿತ್ತ ದೇವರಿಗೆ ಸ್ತೋತ್ರವಾಗಲಿ.
ಒಟ್ಟು 13 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 9 / 13
1 2 3 4 5 6 7 8 9 10 11 12 13
Common Bible Languages
West Indian Languages
×

Alert

×

kannada Letters Keypad References