1. {#1ಪೀಠಿಕೆ } [PS] [* 3 ಯೋಹಾ 1: ]ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ [† ಕೆಲವರು ಸಭೆಗೆ ಎಂದು ಅರ್ಥಮಾಡಿಕೊಳ್ಳುತ್ತಾರೆ. ]ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ;
2. ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲ ನಮ್ಮೊಂದಿಗಿರುವಂಥ ಸತ್ಯದ ನಿಮಿತ್ತ, ನಾನು ನಿಮ್ಮನ್ನು [‡ 3 ಯೋಹಾ 1; 1 ಯೋಹಾ 3:18: ]ಸತ್ಯವಾಗಿ ಪ್ರೀತಿಸುತ್ತೇನೆ. ನಾನು ಮಾತ್ರವಲ್ಲದೆ, [§ ಯೋಹಾ 1:17; 14:6: ]ಸತ್ಯವನ್ನು [* ಯೋಹಾ 8:32; 1 ತಿಮೊ. 2:4: ]ಪ್ರೀತಿಸುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.
3. [† 1 ತಿಮೊ. 1:2; ಯೂದ 2: ]ತಂದೆಯಾದ ದೇವರಿಂದಲೂ, ದೇವರ ಮಗನಾಗಿರುವ ಯೇಸು ಕ್ರಿಸ್ತನಿಂದಲೂ, ಕೃಪೆಯೂ, ಕರುಣೆಯೂ, ಶಾಂತಿಯೂ, ಸತ್ಯವೂ, ಪ್ರೀತಿಯೂ ಸದಾಕಾಲ ನಮ್ಮೊಂದಿಗಿರಲಿ. [PE]
4. {#1ದುರ್ಬೋಧಕರ ವಿಷಯದಲ್ಲಿ ಎಚ್ಚರಿಕೆ } [PS]ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ, ನಿಮ್ಮ ಮಕ್ಕಳಲ್ಲಿ ಕೆಲವರು, ಸತ್ಯವಂತರಾಗಿ ನಡೆಯುವುದನ್ನು ಕಂಡು ನಾನು [‡ 3 ಯೋಹಾ 3,4: ]ಬಹಳ ಸಂತೋಷಪಟ್ಟೆನು.
5. ಅಮ್ಮನವರೇ, [§ 1 ಯೋಹಾ 2:7: ]ನಾನು ಹೊಸ ಆಜ್ಞೆಯನ್ನು ನಿಮಗೆ ಬರೆಯದೆ, ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿಮಗೆ ಬರೆಯುವವನಾಗಿ; ನಾವು [* 1 ಯೋಹಾ 2:8; 3:11: ]ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರೋಣ ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ.
6. [† 1 ಯೋಹಾ 5:3: ]ದೇವರ ಆಜ್ಞೆಗಳನ್ನು ಅನುಸರಿಸಿ, ವಿಧೇಯರಾಗಿ ನಡೆಯುವುದೇ ಪ್ರೀತಿಯಾಗಿದೆ. ಪ್ರೀತಿಯಲ್ಲಿ ನಡೆಯಬೇಕೆಂಬುದೇ, [‡ 1 ಯೋಹಾ 2:24: ]ನೀವು ಮೊದಲಿನಿಂದಲೂ ಕೇಳಿದ ಆಜ್ಞೆಯಾಗಿದೆ.
7. ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ [§ ಮೂಲ: ಬರುವ. 1 ಯೋಹಾ 2:22; 4:2,3: ]ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ [* 1 ಯೋಹಾ 2:18,26; 4:1: ]ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.
8. [† ಕೆಲವು ಪ್ರತಿಗಳಲ್ಲಿ, ನೀವು ಎಂದು ಬರೆದದೆ. ]ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, [‡ ಗಲಾ. 3:4; ಇಬ್ರಿ. 10:35: ]ಕಳೆದುಕೊಳ್ಳದೆ [§ 1 ಕೊರಿ 3:8: ]ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.
9. ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ[* 1 ಯೋಹಾ 2:23: ]. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ.
10. ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ [† ರೋಮಾ. 16:17; ಗಲಾ. 1:8,9; 2 ಥೆಸ. 3:6,14; ತೀತ. 3:10: ]ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.
11. ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ. [PE]
12. {#1ಕೊನೆಯ ಮಾತುಗಳು } [PS] [‡ 3 ಯೋಹಾ 13: ]ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ, ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವುದಕ್ಕೆ ನನಗೆ ಇಷ್ಟವಿಲ್ಲ. ಆದರೆ, [§ 3 ಯೋಹಾ 14: ]ನಾನು ನಿಮ್ಮ ಬಳಿಗೆ ಬಂದು, ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. [* ಯೋಹಾ 15:11; 17:13; 1 ಯೋಹಾ 1:4: ]ಆಗ, ನಿಮ್ಮ ಸಂತೋಷವು ಪರಿಪೂರ್ಣವಾಗುವುದು.
13. ದೇವರು ಆರಿಸಿಕೊಂಡವರಾದ, ನಿಮ್ಮ ಸಹೋದರಿಯ ಮಕ್ಕಳು ನಿಮಗೆ ವಂದನೆ ಹೇಳುತ್ತಾರೆ.[PE]