1. {#1ದಾವೀದನ ರಚಿಸಿದ ಸ್ತುತಿಗೀತೆ }
2. [PS]ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಜಯ ಗೀತೆಯನ್ನು ರಚಿಸಿ ಹೀಗೆ ಹಾಡಿದನು: [PE][QS]ಯೆಹೋವನು ನನ್ನ ಬಂಡೆಯೂ, ನನ್ನ ಕೋಟೆಯೂ ನನ್ನ ವಿಮೋಚಕನೂ ಆಗಿದ್ದಾನೆ. [QE]
3. [QS]ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ, ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ, ನನ್ನ ದುರ್ಗವೂ, ನನ್ನ ಶರಣನೂ, ಹಿಂಸೆಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ. [QE]
4. [QS]ಯೆಹೋವನು ಸ್ತೋತ್ರಕ್ಕೆ ಅರ್ಹನು. ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ. [QE]
5. [QS]ಮರಣ ಪ್ರವಾಹದ ಅಲ್ಲಕಲ್ಲೋಲಗಳು ನನ್ನನ್ನು ಸುತ್ತಿಕೊಂಡವು. ನಾಶಪ್ರವಾಹವು ನನ್ನನ್ನು ನಡುಗಿಸಿತು. [QE]
6. [QS]ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು, ಮರಣಕರವಾದ ಉರುಲುಗಳು ನನ್ನನ್ನು ಸುತ್ತಿಕೊಂಡವು. [QE]
7. [QS]ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಸ್ವರವನ್ನು ಕೇಳಿದನು. ನನ್ನ ಪ್ರಾರ್ಥನೆ ಆತನ ಸನ್ನಿಧಿಗೆ ಕೇಳಿಸಿತು. [QE]
8. [QS]ಆಗ ಆತನ ಕೋಪದಿಂದ ಭೂಮಿಯು ಕಂಪಿಸಿತು. ಆಕಾಶದ ಆಧಾರಗಳು ನಡುಗಿ ಕದಲಿದವು. [QE]
9. [QS]ಆತನ ಮೂಗಿನಿಂದ ಹೊಗೆಯು ಬಂದಿತು. ಆತನ ಬಾಯಿಂದ ಅಗ್ನಿಜ್ವಾಲೆಯು ಹೊರಟು ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು. [QE]
10. [QS]ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು. ಆತನ ಪಾದಗಳ ಕೆಳಗೆ ಕಾರ್ಗತ್ತಲಿತ್ತು. [QE]
11. [QS]ಕೆರೂಬಿವಾಹನನಾಗಿ ಹಾರಿದನು. ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಪ್ರತ್ಯಕ್ಷನಾದನು. [QE]
12. [QS]ಕತ್ತಲನ್ನೂ, ಜಲಮಯವಾಗಿರುವ ನೀಲಮೇಘಗಳನ್ನೂ, ತನ್ನ ಸುತ್ತಲೂ ಗುಡಾರದಂತೆ ಕವಿಸಿಕೊಂಡನು. [QE]
13. [QS]ಆತನ ಸಾನ್ನಿಧ್ಯ ಪ್ರಕಾಶದಿಂದ ಉರಿಗೆಂಡಗಳು ಹೊರಟವು. [QE]
14. [QS]ಯೆಹೋವನು ಆಕಾಶದಿಂದ ಗುಡುಗಿದನು. ಪರಾತ್ಪರನಾದ ದೇವರು ಧ್ವನಿಗೊಟ್ಟನು. [QE]
15. [QS]ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದುರಿಸಿಬಿಟ್ಟನು. ಸಿಡಿಲಿನಿಂದ ಅವುಗಳನ್ನು ಕಳವಳಗೊಳಿಸಿದನು. [QE]
16. [QS]ಆಗ ಯೆಹೋವನ ಗದರಿಕೆಯಿಂದಲೂ ಆತನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ಥಿವಾರವು ತೋರಿಬಂದವು. [QE]
17. [QS]ಆತನು ಮೇಲಣಲೋಕದಿಂದ ಕೈಚಾಚಿ ನನ್ನನ್ನು ಹಿಡಿದು! ಮಹಾಜಲರಾಶಿಯೊಳಗಿಂದ ನನ್ನನ್ನು ಎಳೆದನು. [QE]
18. [QS]ನನಗಿಂತ ಬಲಿಷ್ಠರೂ, ಪುಷ್ಠರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು. [QE]
19. [QS]ಅವರು ನನ್ನ ಆಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು. ಆಗ ಯೆಹೋವನು ನನಗೆ ಉದ್ಧಾರಕನಾದನು. [QE]
20. [QS]ಆತನು ನನ್ನನ್ನು ಅಪಾಯದಿಂದ ಬಿಡಿಸಿದನು. ನನ್ನನ್ನು ಮೆಚ್ಚಿ [* ಅಥವಾ ವಿಶಾಲ ಸ್ಥಳದಲ್ಲಿ ಸೇರಿಸಿದನು. ]ರಕ್ಷಿಸಿದನು. [QE]
21. [QS]ಯೆಹೋವನು ನನ್ನ ಸನ್ನಡತೆಗೆ ತಕ್ಕ ಪ್ರತಿಫಲ ನೀಡಿದನು. ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲಕೊಟ್ಟನು. [QE]
22. [QS]ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ ನನ್ನ ದೇವರನ್ನು ಬಿಟ್ಟು ದ್ರೋಹ ಮಾಡಲಿಲ್ಲ. [QE]
23. [QS]ನಾನು ಆತನ ಆಜ್ಞೆಗಳನ್ನು ಯಾವಾಗಲೂ ನನ್ನೆದುರಿನಲ್ಲಿ ಇಟ್ಟುಕೊಂಡೆನು. ಆತನ ವಿಧಿಗಳಿಂದ ತಪ್ಪಿ ಹೋಗಲಿಲ್ಲ. [QE]
24. [QS]ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು. ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು. [QE]
25. [QS]ಆದ್ದರಿಂದ ನನ್ನ ನೀತಿಗೆ ತಕ್ಕಂತೆಯೂ, ಆತನ ದೃಷ್ಟಿಯಲ್ಲಿ ನನ್ನ ನಿರಪರಾಧಕ್ಕೆ ತಕ್ಕಂತೆಯೂ ಯೆಹೋವನು ನನಗೆ ತಕ್ಕ ಪ್ರತಿಫಲವನ್ನು ಕೊಟ್ಟನು. [QE]
26. [QS]ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವರಿಗೆ ನಿರ್ದೋಷಿಯೂ. [QE]
27. [QS]ಶುದ್ಧನಿಗೆ ಪರಿಶುದ್ಧನೂ, ವಕ್ರಬುದ್ಧಿಯವನಿಗೆ ವಕ್ರನೂ ಆಗಿರುವಿ. [QE]
28. [QS]ದೀನರನ್ನು ಉದ್ಧರಿಸುತ್ತಿ. ಹಮ್ಮಿನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತಿ. [QE]
29. [QS]ಯೆಹೋವನೇ, ನನ್ನ ದೀಪವು ನೀನೇ. ಯೆಹೋವನು ನನಗೆ ಬೆಳಕನ್ನು ಕೊಟ್ಟು ನನ್ನ ಕತ್ತಲನ್ನು ಪರಿಹರಿಸುವನು. [QE]
30. [QS]ನಿನ್ನ ಬಲದಿಂದ [† ಅಥವಾ ನಾನು ಜಜ್ಜಿಹಾಕುವೆನು. ]ನಾನು ದಂಡಿನ ಮೇಲೆ ಬೀಳುವೆನು. ನನ್ನ ದೇವರ ಸಹಾಯದಿಂದ ಪ್ರಾಕಾರಗಳನ್ನು ಹಾರುವೆನು. [QE]
31. [QS]ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ. [QE]
32. [QS]ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ? [QE]
33. [QS]ದೇವರು ನನ್ನ ಬಲವಾದ ಕೋಟೆಯಾಗಿದ್ದಾನೆ. ಆತನು ನನ್ನ ಮಾರ್ಗವನ್ನು ಸರಾಗಮಾಡುತ್ತಾನೆ. [QE]
34. [QS]ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ. ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ [QE]
35. [QS]ಆತನು ನನಗೆ ಯುದ್ಧ ವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು. [QE]
36. [QS]ನೀನು ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಕೃಪಾಕಟಾಕ್ಷವು ನನ್ನನ್ನು ಉನ್ನತಕ್ಕೆ ಏರಿಸಿದೆ. [QE]
37. [QS]ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಕಾಲುಗಳು ಕದಲುವುದಿಲ್ಲ. [QE]
38. [QS]ನನ್ನ ಶತ್ರುಗಳನ್ನು ಹಿಂದಟ್ಟಿ ಸಂಹರಿಸುವೆನು. ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ. [QE]
39. [QS]ಅವರನ್ನು ನಿರ್ನಾಮಗೊಳಿಸುವೆನು, ಹೊಡೆದು ಏಳಲಾರದಂತೆ ಮಾಡುವೆನು. ಅವರು ನನ್ನ ಪಾದದ ಕೆಳಗೆ ಬೀಳುವರು. [QE]
40. [QS]ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದಿ. ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದಿ. [QE]
41. [QS]ನನ್ನ ಶತ್ರುಗಳನ್ನು ಬೆಂಗೊಟ್ಟು ಓಡಮಾಡಿದ್ದೀ. ನನ್ನ ಶತ್ರುಗಳನ್ನು ನಿರ್ಮೂಲ ಮಾಡುವೆನು. [QE]
42. [QS]ಅವರು ಸಹಾಯಕ್ಕಾಗಿ ಕೂಗಿಕೊಂಡರೂ ರಕ್ಷಿಸುವವನಿಲ್ಲ. ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ. [QE]
43. [QS]ಭೂಮಿಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿ ಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟೆನು. [QE]
44. [QS]ನನ್ನ ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿದ್ದಿ. ಜನಾಂಗಗಳಿಗೆ ದೊರೆಯಾಗುವಂತೆ ನನ್ನನ್ನು ಉಳಿಸಿದ್ದಿ. ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು. [QE]
45. [QS]ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು. ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು. [QE]
46. [QS]ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು. [QE]
47. [QS]ಯೆಹೋವನು ಚೈತನ್ಯಸ್ವರೂಪನು. ನನ್ನ ಶರಣನಿಗೆ ಸ್ತೋತ್ರ. ನನ್ನ ಆಶ್ರಯಗಿರಿಯಾಗಿರುವ ದೇವರಿಗೆ ಕೊಂಡಾಟ. [QE]
48. [QS]ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು. ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ. [QE]
49. [QS]ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಂದ ತಪ್ಪಿಸಿ ಉನ್ನತಪಡಿಸುತ್ತಿ. ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತಿ. [QE]
50. [QS]ಈ ಕಾರಣದಿಂದ ಯೆಹೋವನೇ, ಅನ್ಯಜನಾಂಗಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ನಿನ್ನ ನಾಮವನ್ನು ಸಂಕೀರ್ತಿಸುವೆನು. [QE]
51. [QS]ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ. ತಾನು ಅಭಿಷೇಕಿಸಿದ ದಾವೀದನಿಗೂ, ಅವನ ಸಂತತಿಯವರೆಗೆ ಸದಾಕಾಲವೂ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ. [QE]