1. {#1ಅಧರ್ಮ ಪುರುಷನು } [PS]ಸಹೋದರರೇ, ನಮ್ಮ ಕರ್ತನಾದ [* 1 ಥೆಸ. 2:19: ]ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು [† ಮತ್ತಾ 24:31; 1 ಥೆಸ. 4:15-17: ]ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ,
2. ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ [‡ 1 ಯೋಹಾ 4:1: ]ಆತ್ಮದಿಂದಾಗಲಿ [§ ವ. 15: ]ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ. [PE]
3. [PS]ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ [* 1 ತಿಮೊ. 4:1: ]ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ [† ವ. 8; ದಾನಿ. 7:25; 8:25; 11:36; ಪ್ರಕ 13:5, 6. ವಿಧ್ವಂಸಕನು ]ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.
4. ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ [‡ ಯೋಹಾ 17:12: ]ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು [§ ಯೆಶಾ 14:14; ಯೆಜೆ. 28:2: ]ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ. [PE]
5. [PS]ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಜ್ಞಾಪಕವಿಲ್ಲವೋ?
6. ಇದಲ್ಲದೆ ಅವನು ನೇಮಕವಾದ ಸಮಯದಲ್ಲೇ ಹೊರತು ಬಯಲಿಗೆ ಬರುವುದಕ್ಕೆ ಏನು ಅಡ್ಡಿ ಮಾಡುತ್ತದೋ ಅದು ನಿಮಗೆ ತಿಳಿದೇ ಇದೆ.
7. [* 1 ಯೋಹಾ 2:18; 4:3: ]ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ, ಆದರೆ ತಡೆಗಟ್ಟುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.
8. ಆಗ [† ವ. 3: ]ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು [‡ ಯೆಶಾ 11:4: ]ತನ್ನ ಬಾಯಿಯ ಉಸಿರಿನಿಂದ [§ ದಾನಿ. 7:10, 11: ]ಕೊಲ್ಲುವನು, [* 1 ತಿಮೊ. 6:14; 2 ತಿಮೊ. 1:10; 4:1, 8; ತೀತ. 2:13: ]ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.
9. ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ [† ಮತ್ತಾ 24:24; ಪ್ರಕ 13:14: ]ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,
10. ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ [‡ 1 ಕೊರಿ 1:18: ]ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.
11. ಇದೇ ಕಾರಣದಿಂದ [§ 1 ಅರಸು 22:22; ಯೆಹೆ. 14:9: ]ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು [* ರೋಮಾ. 1:25: ]ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ.
12. [† ರೋಮಾ. 1:32; 2:8: ]ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ [‡ ಅಥವಾ, ಒಳಗಾಗಬೇಕೆಂಬುದೇ ದೇವರ ಉದ್ದೇಶ. ]ಗುರಿಯಾಗುವರು. [PE]
13. {#1ದೃಢವಾಗಿ ನಿಲ್ಲಿರಿ } [PS] [§ 1 ಥೆಸ. 1:4: ]ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, [* 1 ಥೆಸ. 4:3: ]ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, [† 1 ಥೆಸ. 5:9; 2 ತಿಮೊ. 1:9: ]ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು [‡ ಕೆಲವು ಪ್ರತಿಗಳಲ್ಲಿ, ಪ್ರಥಮಫಲವಾಗಿ ಎಂದು ಬರೆದದೆ. ]ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು [§ 1 ಥೆಸ. 1:3: ]ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.
14. ನೀವು ಹೀಗೆ [* 1 ಥೆಸ. 5:9; 2 ತಿಮೊ. 1:9: ]ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.
15. ಹೀಗಿರುವುದರಿಂದ ಸಹೋದರರೇ, [† 1 ಕೊರಿ 16:13: ]ದೃಢವಾಗಿ ನಿಲ್ಲಿರಿ. [‡ ವ. 2: ]ನಾವು ಮಾತಿನಿಂದಾಗಲಿ, ಪತ್ರದ ಮೂಲಕವಾಗಲಿ ನಿಮಗೆ ಬೋಧಿಸಿದ ಸಂಪ್ರದಾಯಗಳನ್ನು ಭದ್ರವಾಗಿ ಹಿಡಿದುಕೊಂಡಿರಿ.
16. ಮತ್ತು [§ ಯೋಹಾ 3:16; 1 ಯೋಹಾ 4:10; ಪ್ರಕ 1:5 ]ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ [* 1 ಪೇತ್ರ. 1:3: ]ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,
17. ಸಕಲ ಸತ್ಕಾರ್ಯದಲ್ಲಿಯೂ, ಸದ್ವಾಕ್ಯದಲ್ಲಿಯೂ [† 1 ಥೆಸ. 3:13; 2 ಥೆಸ. 3:3: ]ದೃಢಪಡಿಸಲಿ. [PE]