1. [* 2 ತಿಮೊ. 1:2] ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ [† ಎಫೆ 6:10] ಬಲಹೊಂದಿದವನಾಗು.
2. ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು [‡ ತೀತ 1:5] ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು.
3. [§ 1 ತಿಮೊ 1:18; 2 ತಿಮೊ. 1:; 4:5] ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು.
4. ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ.
5. ಇದಲ್ಲದೆ [* 1 ಕೊರಿ 9:25] ಯಾವನಾದರೂ ಸ್ಪರ್ಧೆಯಲ್ಲಿ ಎದುರಾಳಿಯೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ [† 2 ತಿಮೊ. 4:8] ಜಯಮಾಲೆಯು ದೊರಕುವುದಿಲ್ಲ.
6. [‡ 1 ಕೊರಿ 9:10; ಇಬ್ರಿ. 6:7; ಯಾಕೋಬ 5:7] ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಪಟ್ಟ ಕೃಷಿಕನಿಗೆ ದೊರೆಯುತ್ತದೆ.
7. ನಾನು ಹೇಳುವುದನ್ನು ಯೋಚಿಸು. ಕರ್ತನು ಎಲ್ಲಾದರಲ್ಲಿಯೂ ನಿನಗೆ ವಿವೇಕವನ್ನು ದಯಪಾಲಿಸುವನು.
8. [§ ದಾವೀದನ ವಂಶದವನಾದ ಯೇಸು ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೆಂಬುದನ್ನು ಜ್ಞಾಪಕಮಾಡಿಕೋ; 1 ಕೊರಿ 15:20] ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ [* ಮತ್ತಾ 1:1] ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ, [† ರೋಮಾ. 2:16] ಇದೇ ನಾನು ಸಾರುವ ಸುವಾರ್ತೆ.
9. ಇದರಲ್ಲಿ [‡ 2 ತಿಮೊ. 1:8, 12] ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ [§ ಫಿಲಿ. 1:7] ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. [* 2 ತಿಮೊ. 4:17; ಫಿಲಿ 1:13] ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
10. ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು [† 1 ಪೇತ್ರ 5:10] ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು [‡ ಎಫೆ 3:13; ಕೊಲೊ 1:24; 1 ಕೊರಿ 3:7] ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.
11. [§ 1 ತಿಮೊ. 1:15] ಈ ಮಾತು ನಂಬತಕ್ಕದ್ದಾಗಿದೆ, ಅದೇನೆಂದರೆ [QBR] “ [* 1 ಥೆಸ. 5:10; ರೋಮಾ. 6:8] ನಾವು ಆತನೊಡನೆ ಸತ್ತಿದ್ದರೆ [QBR2] [† ಪ್ರಕ 20:4] ಆತನೊಡನೆ ಜೀವಿಸುವೆವು, [QBR]
12. [‡ 2 ಥೆಸ. 1:4,5; ರೋಮಾ. 8:17; ಇಬ್ರಿ. 10:36; ಪ್ರಕ 20:4] ಸಹಿಸಿಕೊಳ್ಳುವವರಾಗಿದ್ದರೆ [QBR2] ಆತನೊಡನೆ ಆಳುವೆವು. [QBR] [§ ಮತ್ತಾ 10:33; ಮಾರ್ಕ 8:38; 2 ಪೇತ್ರ 2:1; 1 ಯೋಹಾ 2:23] ನಾವು ಯೇಸುವಿನವರಲ್ಲವೆಂದು ಹೇಳಿದರೆ [QBR2] [* ಮತ್ತಾ 7:23; 10:33; 25:12; ಲೂಕ 13:25] ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು. [QBR]
13. ನಾವು ಅಪನಂಬಿಗಸ್ತರಾಗಿದ್ದರೂ [QBR2] [† 1 ಕೊರಿ 1:9] ಆತನು ನಂಬಿಗಸ್ತನಾಗಿಯೇ ಇರುವನು. [QBR2] ಆತನು [‡ ಅರಣ್ಯ 23:19; ತೀತ 3:9] ತನ್ನ ಸ್ವಭಾವವನ್ನು ನಿರಾಕರಿಸಲು ಆಗುವುದಿಲ್ಲ.” [PS]
14. {ಅನುಮೋದಿತನಾದ ಸೇವಕನು} [PS] ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವುದಲ್ಲದೇ, ಯಾವ ಪ್ರಯೋಜನಕ್ಕೂ ಬಾರದ ತರ್ಕ [§ 1 ತಿಮೊ. 6:4; ವ. 23] ವಾಗ್ವಾದಗಳನ್ನು ಮಾಡಬಾರದೆಂದು, ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.
15. ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.
16. [* 1 ತಿಮೊ. 6:20] ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ [† ತೀತ 3:9] ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.
17. ಅವರ ಮಾತು ಹುಣ್ಣುವ್ಯಾಧಿಯಂತೆ ಹರಡಿಕೊಳ್ಳುವುದು. ಅವರಲ್ಲಿ [‡ 1 ತಿಮೊ. 1:20] ಹುಮೆನಾಯನೂ ಪಿಲೇತನೂ ಇದ್ದಾರೆ.
18. ಅವರು ಸತ್ಯಭ್ರಷ್ಟರಾಗಿ [§ 1 ಕೊರಿ 15:12] ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.
19. ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ [* ಅರಣ್ಯ 16:5; ನಹೂ. 1:7; ಯೋಹಾ 10:14, 27; 1 ಕೊರಿ 8:3] “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ. [PE][PS]
20. [† 1 ತಿಮೊ. 3:15] ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ, ಮರದ ಪಾತ್ರೆಗಳೂ, ಮಣ್ಣಿನ ಪಾತ್ರೆಗಳೂ ಇರುತ್ತವೆ. ಅವುಗಳಲ್ಲಿ [‡ ರೋಮಾ. 9:21] ಕೆಲವನ್ನು ಉತ್ತಮವಾದ ಬಳಕೆಗೂ ಕೆಲವನ್ನು ಹೀನವಾದ ಬಳಕೆಗೂ ಬಳಸಲಾಗುತ್ತದೆ.
21. [§ ಜ್ಞಾ. 25:4; ಯೆಶಾ 52:11] ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, [* 2 ತಿಮೊ. 3:17; ತೀತ 3:1] ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು. [PE][PS]
22. ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.
23. [† 1 ತಿಮೊ. 6:4] ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.
24. [‡ ಮತ್ತಾ 12:18] ಕರ್ತನ ಸೇವಕನು ಜಗಳವಾಡದೆ, [§ 1 ಥೆಸ. 2:7] ಎಲ್ಲರ ವಿಷಯದಲ್ಲಿ ಸಾಧುವೂ, [* 1 ತಿಮೊ. 3:2] ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ
25. ಎದುರಿಸುವವರನ್ನು [† ಗಲಾತ್ಯ. 6:1; ತೀತ 3:2] ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. [‡ ಅ. ಕೃ. 8:22] ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ [§ 1 ತಿಮೊ. 2:4] ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.
26. [* 1 ತಿಮೊ. 3:7] ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು. [PE]