1. {#1ಅಂತ್ಯ ದಿನಗಳು } [PS]ಆದರೆ [* 1 ತಿಮೊ 4:1 ]ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿದುಕೋ.
2. ಮನುಷ್ಯರು [† ಫಿಲಿ 2:21 ]ಸ್ವಾರ್ಥಚಿಂತಕರೂ, [‡ ಲೂಕ 16:14; 1 ತಿಮೊ 6:10 ]ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,
3. [§ ರೋಮಾ. 1:31 ]ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, [* ತೀತ 1:8 ]ಒಳ್ಳೆಯದನ್ನು ದ್ವೇಷಿಸುವವರೂ,
4. ದ್ರೋಹಿಗಳೂ, ದುಡುಕುವವರೂ, [† 1 ತಿಮೊ 3:6; 6:4 ]ದುರಹಂಕಾರವುಳ್ಳವರೂ, [‡ ಫಿಲಿ 3:19 ]ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ,
5. ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.
6. ಅವರಲ್ಲಿ ಕೆಲವರು [§ ತೀತ 1:11 ]ಮನೆಗಳಲ್ಲಿ ನುಸುಳಿ, ಪಾಪಗಳಿಂದ ತುಂಬಿದವರೂ, ನಾನಾ ವಿಧವಾದ ಆಸೆಗಳಿಂದ ಪ್ರೇರಿತರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳುವವರು ಆಗಿರುತ್ತಾರೆ.
7. ಆ ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ [* 1 ತಿಮೊ 2:4 ]ಸತ್ಯದ ಪರಿಜ್ಞಾನವನ್ನು ಹೊಂದಲಾರದವರು.
8. [† ವಿಮೋ 7:11 ]ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ.
9. ಆದರೆ ಅವರು ಹೆಚ್ಚು ಮುಂದುವರಿಯಲು ಸಾಧ್ಯವಿಲ್ಲ. [‡ ವಿಮೋ 7:12; 8:18; 9:11 ]ಆ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪ್ರಕಟವಾಗಿ ಬಂದ ಹಾಗೆಯೇ ಇವರದೂ ಪ್ರಕಟವಾಗುವುದು. [PE]
10. [PS] [§ ಫಿಲಿ 2:22 ]ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು, ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ ಇವುಗಳನ್ನೂ,
11. [* ಅ. ಕೃ 13:14; 45, 50 ]ಅಂತಿಯೋಕ್ಯ, [† ಅ. ಕೃ 14:1,2,5 ]ಇಕೋನ್ಯ, [‡ ಅ. ಕೃ 14:6,19 ]ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, [§ ಕೀರ್ತ 34:19 ]ಅವೆಲ್ಲವುಗಳೊಳಗಿನಿಂದ [* 2 ತಿಮೊ 4:17 ]ಕರ್ತನು ನನ್ನನ್ನು ಬಿಡಿಸಿದನು.
12. [† ಅ. ಕೃ 14:22 ]ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.
13. ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ [‡ ಪ್ರಕ 22:11 ]ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
14. [§ 2 ತಿಮೊ 1:13 ]ನೀನಾದರೋ ಕಲಿತು ದೃಢವಾಗಿ ನಂಬಿದ ಬೋಧನೆಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬುದನ್ನು ಆಲೋಚಿಸು.
15. [* 2 ತಿಮೊ 1:5 ]ಚಿಕ್ಕಂದಿನಿಂದಲೂ ನಿನಗೆ [† ಯೋಹಾ 5:39 ]ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ [‡ ಕೀರ್ತ 119:99 ]ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.
16. ದೈವ ಪ್ರೇರಿತವಾದ [§ ರೋಮ 15:4; 2 ಪೇತ್ರ 1:20,21 ]ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ.
17. ಆದರಿಂದ [* 1 ತಿಮೊ 6:11 ]ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು. [PE]