1. {ಪೇತ್ರನು ಮತ್ತು ಕೊರ್ನೇಲ್ಯನು} PS ಕೈಸರೈಯ ಪಟ್ಟಣದಲ್ಲಿ ಇತಾಲ್ಯ ಸೈನ್ಯದ ಶತಾಧಿಪತಿಯಾದ ಕೊರ್ನೆಲ್ಯನೆಂಬ ಒಬ್ಬ ಮನುಷ್ಯನಿದ್ದನು.
|
2. ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.
|
3. ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; “ಕೊರ್ನೆಲ್ಯನೇ” ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
|
4. ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.
|
6. ಅವನು ಚಮ್ಮಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರತೀರದ ಬಳಿಯಲ್ಲಿ ಇದೆ” ಎಂದು ಹೇಳಿದನು.
|
7. ಕೊರ್ನೇಲ್ಯನು ತನ್ನ ಸಂಗಡ ಮಾತನಾಡಿದ ದೇವದೂತನು ಹೊರಟುಹೋದ ಮೇಲೆ, ತನ್ನ ಮನೆಯಲ್ಲಿದ್ದ ಸೇವಕರಲ್ಲಿ ಇಬ್ಬರನ್ನೂ ಮತ್ತು ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿಪಾಯಿಗಳಲ್ಲಿ ಒಬ್ಬ ದೈವಭಕ್ತನನ್ನೂ ಕರೆದು,
|
9. {ಪೇತ್ರನಿಗಾದ ದರ್ಶನ} PS ಮರುದಿನ ಅವರು ಪ್ರಯಾಣಮಾಡಿ ಆ ಪಟ್ಟಣದ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಗೆ ಪ್ರಾರ್ಥನೆಮಾಡುವುದಕ್ಕಾಗಿ ಮಹಡಿಯನ್ನು ಹತ್ತಿದನು.
|
11. ಅವನು ಧ್ಯಾನಪರವಶನಾಗಿ ಆಕಾಶವು ತೆರೆದಿರುವುದನ್ನೂ, ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವುದನ್ನೂ ಕಂಡನು.
|
12. ಅದರೊಳಗೆ ಸಕಲ ವಿಧವಾದ ಪಶುಗಳೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳೂ ಇದ್ದವು.
|
14. ಅದಕ್ಕೆ ಪೇತ್ರನು; “ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ” ಅಂದನು.
|
17. ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ, ಆಗೋ, ಕೊರ್ನೆಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವುದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು;
|
19. ಪೇತ್ರನು ಆ ದರ್ಶನದ ಕುರಿತಾಗಿ ಯೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ; “ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
|
21. ಪೇತ್ರನು ಕೆಳಗಿಳಿದು ಆ ಮನುಷ್ಯರ ಬಳಿಗೆ ಬಂದು; “ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು?” ಎಂದು ಕೇಳಲು,
|
22. ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.
|
23. ಪೇತ್ರನು ಇದನ್ನು ಕೇಳಿ ಅವರನ್ನು ಒಳಕ್ಕೆ ಕರೆದು ಉಪಚರಿಸಿದನು. ಮರುದಿನ ಅವನು ಎದ್ದು ಅವರ ಜೊತೆಯಲ್ಲಿ ಹೊರಟನು; ಯೊಪ್ಪ ಪಟ್ಟಣದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು. PS
|
24. {ಕೊರ್ನೇಲ್ಯನ ಮನೆಯಲ್ಲಿ ಪೇತ್ರನು} PS ಮರುದಿನ ಅವನು ಕೈಸರೈಯಕ್ಕೆ ಬಂದು ಸೇರಿದನು. ಕೊರ್ನೆಲ್ಯನು ತನ್ನ ಬಂಧುಬಳಗದವರನ್ನೂ ಮತ್ತು ಅಪ್ತಮಿತ್ರರನ್ನೂ ಕರೆಯಿಸಿ ಪೇತ್ರನಿಗಾಗಿ ಎದುರುನೋಡುತ್ತಿದ್ದನು.
|
28. ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.
|
29. ಆದಕಾರಣ ನೀವು ನನ್ನನ್ನು ಕರೆಕಳುಹಿಸಿದಾಗ ನಾನು ಯಾವ ಎದುರುಮಾತನ್ನೂ ಆಡದೆ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನನಗೆ ತಿಳಿಸಬೇಕು” ಎಂದು ಕೇಳಿದನು. PEPS
|
30. ಅದಕ್ಕೆ ಕೊರ್ನೇಲ್ಯನು; “ನಾನು ನಾಲ್ಕು ದಿನಗಳ ಹಿಂದೆ ಇದೇ ಹೊತ್ತಿನಲ್ಲಿ ಮೂರನೇ ಗಳಿಗೆಯ ದೇವರ ಪ್ರಾರ್ಥನೆಯನ್ನು ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು;
|
31. ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
|
32. ನೀನು ಯಾರನ್ನಾದರು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು, ಅವನು ಚಮ್ಮಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರ ತೀರದ ಸಮೀಪವಿದೆ’ ಅಂದನು.
|
33. ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು. PEPS
|
35. ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.
|
36. ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.
|
37. ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ಈ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ, ಯೂದಾಯದಲ್ಲೆಲ್ಲಾ ಪ್ರಬಲವಾಯಿತು.
|
38. ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.
|
40. ಆತನನ್ನು ಮರದ ಕಂಬಕ್ಕೆ ತೂಗುಹಾಕಿ ಕೊಂದರು. ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ, ಪ್ರತ್ಯಕ್ಷನಾಗುವಂತೆ ಮಾಡಿದನು.
|
41. ಆತನು ಎಲ್ಲರಿಗೂ ಪ್ರತ್ಯಕ್ಷನಾಗದೆ, ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಊಟ ಮಾಡಿದೆವು.
|
42. ಆತನೇ ಜೀವವಿರುವವರಿಗೂ, ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬುದನ್ನು ಜನರಿಗೆ ಸಾರಿ, ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
|
43. ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು. PEPS
|
44. ಪೇತ್ರನು, ಈ ವಾಕ್ಯಗಳನ್ನು ಇನ್ನೂ ಹೇಳುತ್ತಿರುವಾಗಲೇ, ಅವನ ವಾಕ್ಯಗಳನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮನು ಇಳಿದನು.
|
45. ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ,
|
47. ನಡೆದ ಸಂಗತಿಯನ್ನು ಪೇತ್ರನು ನೋಡಿ; “ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ದೀಕ್ಷಾಸ್ನಾನವಾಗದಂತೆ ಅಡ್ಡಿಪಡಿಸುವವರು ಯಾರು?” ಎಂದು ಹೇಳಿ ಅವರಿಗೆ,
|
48. ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆ ಮೇಲೆ ಅವರು ಅವನನ್ನು ಇನ್ನೂ ಕೆಲವು ದಿನ ಅವರೊಂದಿಗೆ ಇರಬೇಕೆಂದು ಬೇಡಿಕೊಂಡರು. PE
|