1. {ಪೇತ್ರನು ಯೆರೂಸಲೇಮಿನ ಸಭೆಯಲ್ಲಿ ಪ್ರತಿವಾದ ಮಾಡಿದ್ದು} PS ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
|
5. ಹೇಳಿದ್ದೇನಂದರೆ; “ನಾನು ಯೊಪ್ಪ ಎಂಬ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಾ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು” ಅದೇನೆಂದರೆ, ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದು ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ನಾನಿದ್ದಲ್ಲಿಗೆ ಇಳಿದು ಬಂದಿತು.
|
6. ಅದೇನೆಂದು ತಿಳಿದುಕೊಳ್ಳುವುದಕ್ಕೆ ನಾನು ಅದನ್ನು ಚೆನ್ನಾಗಿ ನೋಡಿದಾಗ, ಭೂಮಿಯ ಮೇಲಿರುವ ಎಲ್ಲಾ ಪ್ರಾಣಿಗಳು, ಕಾಡುಮೃಗಳು, ಹರಿದಾಡುವ ಕ್ರಿಮಿಕೀಟಗಳನ್ನೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳನ್ನೂ ಕಂಡೆನು.
|
8. ಅದಕ್ಕೆ ನಾನು; “ಬೇಡವೇ ಬೇಡ, ಕರ್ತನೇ, ಹೊಲೆಯಾದ ಪದಾರ್ಥವಾಗಲಿ, ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ” ಅಂದೆನು. PEPS
|
9. ಅದಕ್ಕೆ; “ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆ ಎನ್ನಬಾರದು” ಎಂಬುದಾಗಿ ಎರಡನೆಯ ಸಾರಿಯೂ ಆಕಾಶದಿಂದ ವಾಣಿಯಾಯಿತು.
|
11. ಆ ಕ್ಷಣದಲ್ಲೇ ಮೂವರು ಪುರುಷರು ನಾವಿದ್ದ ಮನೆಯ ಮುಂದೆ ನಿಂತಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.
|
12. ದೇವರಾತ್ಮನು, ನನಗೆ ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.
|
13. ಆ ಮನುಷ್ಯನ ಮನೆಯೊಳಗೆ ನಾವು ಸೇರಲು ಅವನು ನಮಗೆ, ಒಬ್ಬ ದೇವದೂತನು ನನ್ನ ಮನೆಯಲ್ಲಿ ನಿಂತಿರುವುದನ್ನು ಕಂಡೆನು. ಆ ದೂತನು; “ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು.
|
14. ಅವನು ನಿನಗೆ ಸಂದೇಶವನ್ನು ಹೇಳುವನು, ಆ ಸಂದೇಶದಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು” ಎಂದು ಹೇಳಿದನೆಂಬುದಾಗಿ ತಿಳಿಸಿದನು. PEPS
|
16. ಆಗ; “ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮನಲ್ಲಿ ಸ್ನಾನವಾಗುವುದು” ಎಂದು ಕರ್ತನು ಹೇಳಿದ ಮಾತುಗಳು ನನ್ನ ನೆನಪಿಗೆ ಬಂದಿತು.
|
17. ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು. PEPS
|
18. ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು. PS
|
19. {ಅಂತಿಯೋಕ್ಯ ಪಟ್ಟಣದಲ್ಲಿ ಕ್ರೈಸ್ತಸಭೆ} PS ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನಿಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.
|
20. ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.
|
22. ಇವರ ವಿಷಯವಾದ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ, ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
|
24. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು, ನೀವು ಪೂರ್ಣಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರಿ ಎಂದು ಅವರಿಗೆ ಬುದ್ಧಿಹೇಳಿದನು. ಆಗ ಬಹುಮಂದಿ ಕರ್ತನೊಂದಿಗೆ ಸೇರಿಕೊಂಡರು.
|
25. ತರುವಾಯ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋಗಿ ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು.
|
26. ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು. PS
|
28. ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.
|
29. ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.
|