1. {ಯೆರೂಸಲೇಮ್ ಸಭೆಹಿರಿಯರ ಆಲೋಚನಾಸಭೆ} PS ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.
|
2. ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.
|
3. ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.
|
4. ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
|
5. ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.
|
6. ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವುದಕ್ಕೆ ಸೇರಿ ಬಂದಾಗ, ಅವರಲ್ಲಿ ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವರಿಗೆ; PEPS
|
7. “ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.
|
8. ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.
|
10. ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?
|
11. ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು” ಎಂದು ಹೇಳಿದನು. PEPS
|
12. ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.
|
14. “ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
|
16. “ ‘ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಪುನಃ ಕಟ್ಟುವೆನು.
ಪಾಳು ಬಿದ್ದದ್ದನ್ನು ಜೀರ್ಣೋದ್ಧಾರಮಾಡಿ ಸುಭದ್ರವಾಗಿ ನಿಲ್ಲಿಸುವೆನು. |
20. ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.
|
21. ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ” ಎಂದು ಹೇಳಿದನು. PEPS
|
22. ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,
|
23. ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ; PEPS
|
24. “ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,
|
26. ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿ ಕೊಡುವುದು ಯುಕ್ತವೆಂದು ನಾವೆಲ್ಲರೂ ಒಮ್ಮನಸ್ಸಿನಿಂದ ತೀರ್ಮಾನಿಸಿದೆವು.
|
27. ಆದುದರಿಂದ ಯೂದನನ್ನೂ, ಸೀಲನನ್ನೂ ಕಳುಹಿಸಿಕೊಡುತ್ತಿದ್ದೇವೆ. ಅವರು ನಾವು ಬರೆದಿರುವ ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು.
|
28. ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ಅನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ.
|
29. ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.” PEPS
|
33. ಅಲ್ಲಿ ಕೆಲವು ಕಾಲ ಕಳೆದ ನಂತರ ತಮ್ಮನ್ನು ಕಳುಹಿಸಿದವರ ಬಳಿಗೆ ಪುನಃ ಹೋಗುವುದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು.
|
35. ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು. ಸುವಾರ್ತೆಯನ್ನು ಸಾರುವುದಕ್ಕೆ ಪೌಲನು ಮಾಡಿದ ಎರಡನೆಯ ಪ್ರಯಾಣ (15:36, 18:22) PEPS
|
36. ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.
|
38. ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಫುಲ್ಯದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು.
|
39. ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.
|