1. {ಪೌಲನು ತಿಮೊಥೆಯನನ್ನು ಆರಿಸಿಕೊಂಡದ್ದು} PS ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.
|
3. ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು.
|
4. ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರೂ, ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ತಿಳಿಸಿ ಅವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.
|
6. {ಪೌಲನಿಗೆ ಬಂದ ಮಕೆದೋನ್ಯದ ಕರೆ} PS ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,
|
7. ಮೂಸ್ಯಕ್ಕೆ ಹತ್ತಿರವಾಗಿ ಬಂದಾಗ, ಬಿಥೂನ್ಯಕ್ಕೆ ಹೋಗುವ ಪ್ರಯತ್ನಮಾಡಿದರು. ಅಲ್ಲಿಯೂ ಯೇಸುವಿನ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
|
9. ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು.
|
10. ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು.
|
11. ನಾವು ತ್ರೋವದಿಂದ ಸಮುದ್ರ ಪ್ರಯಾಣಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಯನ್ನು ತಲುಪಿದೆವು. PS
|
12. {ಫಿಲಿಪ್ಪಿಯಲ್ಲಿ ಲುದ್ಯಳ ಮನಃಪರಿವರ್ತನೆ} PS ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು.
|
13. ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವುದೆಂದು ತಿಳಿದು ಸಬ್ಬತ್ ದಿನದಲ್ಲಿ ಊರ ಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕುಳಿತುಕೊಂಡು ಮಾತನಾಡಿದೆವು.
|
14. ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.
|
15. ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು. PS
|
16. {ಪೌಲ ಮತ್ತು ಸೀಲರನ್ನು ಸೆರೆಯಲ್ಲಿ ಹಾಕಲ್ಪಟ್ಟದ್ದು} PS ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ * ಭವಿಷ್ಯ ಹೇಳುವ ದುರಾತ್ಮವುಳ್ಳ ಹೆಣ್ಣುಮಗಳು ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.
|
17. ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.
|
18. ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು. PEPS
|
19. ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಮತ್ತು ಸೀಲನನ್ನೂ ಹಿಡಿದು ಮಾರುಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.
|
22. ಆಗ ಜನರು ಗುಂಪಾಗಿ ಕೂಡಿ, ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು. ಮತ್ತು ಅಧಿಕಾರಿಗಳು; ಇವರ ವಸ್ತ್ರಗಳನ್ನು ಹರಿದು, ತೆಗೆದು, ಛಡಿಗಳಿಂದ ಹೊಡೆಸಬೇಕೆಂದು ಅಪ್ಪಣೆಕೊಟ್ಟರು.
|
23. ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು.
|
24. ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು. PS
|
25. {ಭೂಕಂಪ ಉಂಟಾಗಿ ಅವರು ಬಿಡಿಸಲ್ಪಟ್ಟದ್ದು} PS ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.
|
26. ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
|
27. ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚೆತ್ತು ಸೆರೆಮನೆಯ ಕದಗಳು ತೆರೆದಿರುವುದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು.
|
28. ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; “ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ” ಎಂದು ಹೇಳಿದನು.
|
30. ಮತ್ತು ಅವರನ್ನು ಹೊರಗೆ ಕರೆದುಕೊಂಡು ಬಂದು; “ಸ್ವಾಮಿಗಳೇ, ನಾನು ರಕ್ಷಣೆಹೊಂದುವುದಕ್ಕೆ ಏನು ಮಾಡಬೇಕೆಂದು?” ಕೇಳಲು,
|
31. ಅವರು; “ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು” ಎಂದು ಹೇಳಿ,
|
33. ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು.
|
34. ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು. PEPS
|
36. ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು.
|
37. ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.
|
38. ಸಿಪಾಯಿಗಳು ಈ ಮಾತುಗಳನ್ನು ಅಧಿಕಾರಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಕೇಳಿದಾಗ ಅವರು ಭಯಪಟ್ಟರು.
|
39. ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.
|
40. ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಅಲ್ಲಿಂದ ಹೊರಟುಹೋದರು. PE
|