1. ಆಗ ಅಗ್ರಿಪ್ಪನು, ಪೌಲನಿಗೆ; “ನೀನು ನಿನ್ನ ಪರವಾಗಿ ಮಾತನಾಡಬಹುದು” ಅನ್ನಲು, ಪೌಲನು ಕೈಯೆತ್ತಿ, ಪ್ರತಿವಾದ ಮಾಡಿದ್ದೇನಂದರೆ; PEPS
|
2. “ಅಗ್ರಿಪ್ಪರಾಜನೇ, ಯೆಹೂದ್ಯರು ನನ್ನ ಮೇಲೆ ಆರೋಪಿಸುವ ಎಲ್ಲಾ ಆರೋಪಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವುದರಿಂದ, ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
|
3. ಏಕೆಂದರೆ, ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ, ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ. PEPS
|
4. “ನಾನು ಚಿಕ್ಕಂದಿನಿಂದಲೂ, ಯೆರೂಸಲೇಮಿನಲ್ಲಿ ನನ್ನ ದೇಶದ ಜನರೊಳಗಿದ್ದು, ಬದುಕಿದ ರೀತಿಯು ಎಲ್ಲಾ ಯೆಹೂದ್ಯರಿಗೆ ತಿಳಿದ ವಿಷಯವಾಗಿದೆ.
|
5. ನಾನು, ನಮ್ಮ ಧರ್ಮದಲ್ಲಿ ಬಹು ಕಟ್ಟುನಿಟ್ಟಾಗಿ ಆಚರಿಸುವ ಫರಿಸಾಯರ ಪಂಥವನ್ನನುಸರಿಸಿ ಫರಿಸಾಯನಾಗಿ ನಡೆದುಕೊಂಡೆನೆಂಬುದನ್ನು, ಪ್ರಾರಂಭದಿಂದಲೂ ಅವರು ಬಲ್ಲರು. ಸಾಕ್ಷಿ ಹೇಳುವುದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು.
|
6. ಈಗಲೂ ದೇವರು ನಮ್ಮ ಪೂರ್ವಿಕರಿಗೆ, ಮಾಡಿದ ವಾಗ್ದಾನವು ನೆರವೇರುವುದೆಂಬ ನಿರೀಕ್ಷೆಯ ನಿಮಿತ್ತವೇ, ನಾನು ಇಂದು ನ್ಯಾಯವಿಚಾರಣೆಗೆ ಇಲ್ಲಿ ನಿಂತಿದ್ದೇನೆ.
|
7. ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.
|
9. ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.
|
10. ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.
|
11. ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.
|
13. ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತು ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವುದನ್ನು ನಾನು ಕಂಡೆನು.
|
14. ನಾವೆಲ್ಲರು ನೆಲಕ್ಕೆ ಬೀಳಲು; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ? ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು’ ಕೇಳಿದೆನು.
|
16. ನೀನು ಎದ್ದು, ನಿಂತುಕೋ. ನಿನ್ನನ್ನು ನನ್ನ ಸೇವಕನಾಗಿಯೂ, ಸಾಕ್ಷಿಯಾಗಿಯೂ ನೇಮಿಸುವುದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ಈಗಲೂ, ಮುಂದೆಯೂ ನಿನಗೆ ತೋರಿಸಲಿರುವ ದರ್ಶನಗಳಲ್ಲಿಯೂ, ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ನನ್ನ ಸಾಕ್ಷಿಯಾಗಿರಬೇಕು.
|
18. ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.
|
20. ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.
|
22. ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.
|
23. ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು” ಎಂಬುದೇ. PEPS
|
24. ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು.
|
25. ಅದಕ್ಕೆ ಪೌಲನು; “ಮಹಾ ಶ್ರೇಷ್ಠನಾದ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯುಳ್ಳವನಾಗಿ ಸತ್ಯವಾದ ಮಾತುಗಳನ್ನೇ ಹೇಳುತ್ತಿದ್ದೇನೆ.
|
26. ಅಗ್ರಿಪ್ಪರಾಜನು ಈ ಸಂಗತಿಗಳನ್ನೆಲ್ಲಾ ತಿಳಿದವನು; ಆದುದರಿಂದ, ಅವನ ಮುಂದೆ ಧೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ, ಏಕೆಂದರೆ ಇದು ಒಂದು ಮೂಲೆಯಲ್ಲಿ ನಡೆದ ಕಾರ್ಯವಲ್ಲ.
|
29. ಪೌಲನು; “ಅಲ್ಪಪ್ರಯತ್ನದಿಂದಾಗಲಿ, ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ, ಈ ಬೇಡಿಗಳ ಹೊರತು, ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ” ಅಂದನು. PEPS
|
31. “ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
|
32. ಅಗ್ರಿಪ್ಪನು ಫೆಸ್ತನಿಗೆ; “ಈ ಮನುಷ್ಯನು ಕೈಸರನಿಗೆ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು. PE
|