1. {ಸೇವಾಕಾರ್ಯಕ್ಕೆ ಏಳು ಮಂದಿಯನ್ನು ನೇಮಿಸಿದ್ದು} PS ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು.
|
2. ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಒಟ್ಟುಗೂಡಿಸಿ, “ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುವುದು ಸರಿಯಲ್ಲವಲ್ಲಾ.
|
3. ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು.
|
5. ಈ ಮಾತು ಸರ್ವರಿಗೂ ಒಳ್ಳೆಯದೆಂದು ತೋಚಿತು. ಅವರು ಪವಿತ್ರಾತ್ಮಭರಿತರೂ, ನಂಬಿಕೆಯಿಂದ ತುಂಬಿದವರೂ ಆದ ಸ್ತೆಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬುವವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.
|
7. ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು. PS
|
8. {ಸ್ತೆಫನನ್ನು ಬಂಧಿಸಿದ್ದು} PS ಸ್ತೆಫನನು ದೇವರ ಕೃಪೆಯಿಂದಲೂ, ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತ ಕಾರ್ಯಗಳನ್ನೂ, ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು.
|
9. ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.
|
11. ಆಗ ಅವರು ಕೆಲವು ಜನರಿಗೆ, “ಇವನು ಮೋಶೆಗೆ ವಿರೋಧವಾಗಿಯೂ, ದೇವರಿಗೆ ವಿರೋಧವಾಗಿಯೂ ದೂಷಣೆಯ ಮಾತುಗಳನ್ನಾಡುವುದನ್ನು ಕೇಳಿದೆವೆಂದು” ಹೇಳಿರಿ ಎಂದು ಕೆಲವರನ್ನು ಮನವೊಲಿಸಿದರು.
|
12. ಅವರು ಜನರನ್ನೂ, ಹಿರಿಯರನ್ನೂ, ಶಾಸ್ತ್ರಿಗಳನ್ನೂ ಪ್ರಚೋದಿಸಿದರು ಮತ್ತು ಅವನನ್ನು ಹಿಡಿದು, ಎಳೆದುಕೊಂಡು, ಹಿರೀಸಭೆಗೆ ತೆಗೆದುಕೊಂಡು ಹೋಗಿ ಅವನಿಗೆ ವಿರುದ್ಧವಾಗಿ ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು.
|
13. ಆ ಸಾಕ್ಷಿಗಳು, “ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು.
|
14. ಆ ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿ, ಮೋಶೆ ನಮಗೆ ನೇಮಿಸಿರುವ ಆಚಾರಗಳನ್ನು ಬೇರೆ ಮಾಡುವನೆಂಬುದಾಗಿ ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಅಂದರು.
|
15. ಆಗ ಹಿರೀಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಇರುವುದನ್ನು ಕಂಡರು. PE
|