1. [PS]ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. [PE]{#1ಸಭೆ ಹಿಂಸೆಗೆ ಗುರಿಯಾದದ್ದು ಮತ್ತು ಚದರಿಹೋದದ್ದು }[PS]ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.
2. ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
3. ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು. [PE]
4. {#1ಫಿಲಿಪ್ಪನು ಸಮಾರ್ಯದಲ್ಲಿ ಸುವಾರ್ತೆಯನ್ನು ಘೋಷಿಸಿದ್ದು; ಹಾಗು ಸೀಮೋನನೆಂಬ ಮಂತ್ರವಾದಿಯನ್ನು ಕುರಿತದ್ದು } [PS]ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು.
5. ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು.
6. ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು.
7. ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.
8. ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು. [PE]
9. [PS]ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.
10. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು. [PE]
11.
12. [PS]ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು. [PE][PS]ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
13. ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು. [PE]
14. [PS]ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
15. ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.
16. ಏಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು
17. ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು.
18. ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು,
19. “ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ” ಅಂದನು.
20. ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?
21. ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಯಾವ ಪಾಲೂ ಇಲ್ಲ; ಏಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
22. ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.
23. ನೀನು ಕಡು ಕಹಿಯಾದ ದ್ವೇಷದಿಂದಲೂ ಮತ್ತು ವಿಷಕಾರಕವಾದ ಅನೀತಿಯಿಂದಲೂ ತುಂಬಿದವನಾಗಿರುವುದನ್ನು ನಾನು ಕಾಣುತ್ತಿದ್ದೇನೆ” ಅಂದನು
24. ಅದಕ್ಕೆ ಸೀಮೋನನು, “ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇಡಿಕೊಳ್ಳಿರಿ” ಎಂದು ಹೇಳಿದನು. [PE]
25.
26. [PS]ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು. [PE]{#1ಫಿಲಿಪ್ಪನು ಇಥಿಯೋಪ್ಯದವನಿಗೆ ಸುವಾರ್ತೆಯನ್ನು ತಿಳಿಸಿದ್ದು } [PS]ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.
27. ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.
28. ಅವನು ದೇವಾರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು.
29. ದೇವರಾತ್ಮನು ಫಿಲಿಪ್ಪನಿಗೆ, “ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ” ಎಂದು ಹೇಳಿದನು.
30. ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, “ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.
31. ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.
32. ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, [PE][QS]“ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; [QE][QS]ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ [QE][QS]ಆತನು ಬಾಯಿ ತೆರೆಯದೆ ಮೌನವಾಗಿದ್ದನು. [QE]
33. [QS]ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. [QE][QS]ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? [QE][QS]ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ. [QE]
34. [PS]ಕಂಚುಕಿಯು ಈ ವಚನವನ್ನು ಕುರಿತು, “ಪ್ರವಾದಿಯು ಇದನ್ನು ಯಾರ ಬಗ್ಗೆ ಹೇಳಿದ್ದಾನೆ? ತನ್ನನ್ನು ಕುರಿತೋ ಅಥವಾ ಮತ್ತೊಬ್ಬನ ವಿಷಯದಲ್ಲಿಯೋ?” ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು
35. ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು. [PE]
36. [PS]ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.
37. ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;
38. ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.
39. ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.
40. ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು. [PE]