1. ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. PS ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.
|
2. {ಸಭೆ ಹಿಂಸೆಗೆ ಗುರಿಯಾದದ್ದು ಮತ್ತು ಚದರಿಹೋದದ್ದು} PS ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
|
3. ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು. ಫಿಲಿಪ್ಪನು ಸಮಾರ್ಯದಲ್ಲಿ ಸುವಾರ್ತೆಯನ್ನು ಘೋಷಿಸಿದ್ದು; ಹಾಗು ಸೀಮೋನನೆಂಬ ಮಂತ್ರವಾದಿಯನ್ನು ಕುರಿತದ್ದು PEPS
|
6. ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು.
|
7. ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.
|
9. ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.
|
10. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು. PEPS
|
12. ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
|
13. ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು. PEPS
|
14. ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
|
16. ಏಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು
|
18. ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು,
|
19. “ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ” ಅಂದನು.
|
20. ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?
|
22. ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.
|
23. ನೀನು ಕಡು ಕಹಿಯಾದ ದ್ವೇಷದಿಂದಲೂ ಮತ್ತು ವಿಷಕಾರಕವಾದ ಅನೀತಿಯಿಂದಲೂ ತುಂಬಿದವನಾಗಿರುವುದನ್ನು ನಾನು ಕಾಣುತ್ತಿದ್ದೇನೆ” ಅಂದನು
|
24. ಅದಕ್ಕೆ ಸೀಮೋನನು, “ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇಡಿಕೊಳ್ಳಿರಿ” ಎಂದು ಹೇಳಿದನು. PEPS
|
25. ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು. PS
|
26. {ಫಿಲಿಪ್ಪನು ಇಥಿಯೋಪ್ಯದವನಿಗೆ ಸುವಾರ್ತೆಯನ್ನು ತಿಳಿಸಿದ್ದು} PS ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.
|
27. ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.
|
28. ಅವನು ದೇವಾರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು.
|
30. ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, “ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.
|
31. ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.
|
32. ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ,
“ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು. |
33. ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ.
ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ. PEPS |
34. ಕಂಚುಕಿಯು ಈ ವಚನವನ್ನು ಕುರಿತು, “ಪ್ರವಾದಿಯು ಇದನ್ನು ಯಾರ ಬಗ್ಗೆ ಹೇಳಿದ್ದಾನೆ? ತನ್ನನ್ನು ಕುರಿತೋ ಅಥವಾ ಮತ್ತೊಬ್ಬನ ವಿಷಯದಲ್ಲಿಯೋ?” ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು
|
35. ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು. PEPS
|
37. ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;
|
39. ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.
|
40. ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು. PE
|